ಭಾರತ-ಇಂಗ್ಲೆಂಡ್ ಪಂದ್ಯ: ನಾಲ್ವರು ಆಲ್ರೌಂಡರ್ಗಳಲ್ಲಿ ಯಾರಾಗ್ತಾರೆ ಮ್ಯಾಚ್ ವಿನ್ನರ್?
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಆಡಲಿದ್ದಾರೆ. ಇಬ್ಬರೂ ಆಟಗಾರರು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಅರ್ಧಶತಕ ಸಿಡಿಸಿದ್ದರು. ರವೀಂದ್ರ ಜಡೇಜಾ ಸಹ ತಮ್ಮ ಬೌಲಿಂಗ್‌ನಲ್ಲಿ ಕರಾಮತ್ತು ಪ್ರದರ್ಶಿಸುತ್ತಿದ್ದಾರೆ.
ಭಾರತ ತಂಡ ಇಂದು (ಜುಲೈ 12) ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಆಡಲಿದೆ. ಕಳೆದ ಒಂದು ವರ್ಷದಲ್ಲಿ ಟೀಂ ಇಂಡಿಯಾ ಕೇವಲ 9 ಏಕದಿನ ಪಂದ್ಯಗಳನ್ನಾಡಿದ್ದು, 2023ರ ವಿಶ್ವಕಪ್‌ಗೆ ತಯಾರಿ ನಡೆಸುವ ದೃಷ್ಟಿಯಿಂದ ಇಂಗ್ಲೆಂಡ್ ಪ್ರವಾಸ ಅತ್ಯಂತ ಮಹತ್ವದ್ದಾಗಿದೆ. ಇನ್ನು ಭಾರತ ತಂಡದಲ್ಲಿ ಮ್ಯಾಚ್ ವಿನ್ನರ್ ಆಟಗಾರರಿದ್ದು, ಅವರು ತಮ್ಮ ಪ್ರತಿಭೆಯನ್ನು ಸಾಬೀತುಪಡಿಸುವ ಅಗತ್ಯತೆಯೂ ಇದೆ. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾದಲ್ಲಿ ನಾಲ್ವರು ಆಲ್ ರೌಂಡರ್ ಆಟಗಾರರಿದ್ದಾರೆ. ಹೀಗಿರುವಾಗ ಮೊದಲ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಯಾರಿಗೆ ಮುಂದಾಳತ್ವ ಕೊಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಸಿಗುತ್ತೆ ಉಚಿತ ಎಲ್‌ಪಿಜಿ ಸಿಲಿಂಡರ್!
ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯವನ್ನಾಡಲು ಟೀಂ ಇಂಡಿಯಾದ ಬಲಿಷ್ಠ ಆಟಗಾರರಾದ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಠಾಕೂರ್ ಇದ್ದಾರೆ. ಟಿ20 ತಂಡದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಕೂಡ ಆಡುತ್ತಿದ್ದು, ಇವರು ಅಪಾರ ಅನುಭವ ಹೊಂದಿರುವ ಆಟಗಾರರು. ಈ ಅನುಭವವೇ ಟೀಮ್ ಇಂಡಿಯಾದ ದೊಡ್ಡ ಆಸ್ತಿ. ಇನ್ನೊಂದೆಡೆ, ಅಕ್ಷರ್ ಪಟೇಲ್ ಅತ್ಯಂತ ಕಳಪೆ ಫಾರ್ಮ್‌ನಲ್ಲಿದ್ದಾರೆ. ಶಾರ್ದೂಲ್ ಠಾಕೂರ್ ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಕೊನೆಯ ಒಡಿಐ ಪಂದ್ಯವನ್ನು ಆಡಿದ್ದಾರೆ. ಇವರಿಬ್ಬರು ಉತ್ತಮ ಆಟಗಾರರಾದರೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ಇತ್ತೀಚಿನ ದಿನಗಳಲ್ಲಿ ವಿಫಲರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ನಾಲ್ವರು ಆಟಗಾರರು ಯಾವ ರೀತಿ ಪ್ರದರ್ಶನ ನೀಡಲಿದ್ದಾರೆ ಎಂಬುದೇ ಕುತೂಹಲ ಮೂಡಿಸಿದೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಆಡಲಿದ್ದಾರೆ. ಇಬ್ಬರೂ ಆಟಗಾರರು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಅರ್ಧಶತಕ ಸಿಡಿಸಿದ್ದರು. ರವೀಂದ್ರ ಜಡೇಜಾ ಸಹ ತಮ್ಮ ಬೌಲಿಂಗ್‌ನಲ್ಲಿ ಕರಾಮತ್ತು ಪ್ರದರ್ಶಿಸುತ್ತಿದ್ದಾರೆ.
ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಸುದೀರ್ಘ ಸಮಯದ ನಂತರ ಭಾರತ ಏಕದಿನ ತಂಡಕ್ಕೆ ಮರಳಿದ್ದಾರೆ. ಇನ್ನು ಶಾರ್ದೂಲ್ ಠಾಕೂರ್ ಮೂರನೇ ವೇಗದ ಬೌಲರ್ ಆಗಿ ಅವಕಾಶ ಪಡೆಯಬಹುದು. ಶಾರ್ದೂಲ್ ಠಾಕೂರ್ ಕಿಲ್ಲರ್ ಬೌಲಿಂಗ್‌ನಲ್ಲಿ ಪರಿಣಿತ ಆಟಗಾರ. ಅಷ್ಟೇ ಅಲ್ಲದೆ, ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಗೆಲುವಿಗೆ ಕೊಡುಗೆ ನೀಡಬಲ್ಲರು. ಇಲ್ಲಿವರೆಗೆ ಶಾರ್ದೂಲ್ ಠಾಕೂರ್ ಭಾರತದ ಪರ 19 ಏಕದಿನ ಪಂದ್ಯಗಳಲ್ಲಿ 25 ವಿಕೆಟ್ ಪಡೆದಿದ್ದಾರೆ. ಜೊತೆಗೆ ಬ್ಯಾಟಿಂಗ್‌ನಲ್ಲಿ ಅರ್ಧಶತಕವನ್ನೂ ಬಾರಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಿಂದ ಕಾಶಿಗೆ ತೆರಳಬೇಕೇ! ಕರ್ನಾಟಕ ಸರ್ಕಾರದಿಂದ ವಿಶೇಷ ವ್ಯವಸ್ಥೆ
3 ಏಕದಿನ ಪಂದ್ಯಗಳಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ ಶಮಿ ಕೃಷ್ಣ, ಪ್ರಣಂದ್ ಕೃಷ್ಣ , ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.