ಇಂದು ಭಾರತ-ಇಂಗ್ಲೆಂಡ್ ವಿಶ್ವಕಪ್ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ, ಎಲ್ಲಿ, ಉಚಿತ ವೀಕ್ಷಣೆ ಹೇಗೆ? ಕಂಪ್ಲೀಟ್ ಮಾಹಿತಿ ಇಲ್ಲಿದೆ

India vs England World Cup Warm-up match: ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯವು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಇಂದು ಗುವಾಹಟಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ಮುನ್ಸೂಚನೆ ನೀಡಿದೆ.

Written by - Bhavishya Shetty | Last Updated : Sep 30, 2023, 11:06 AM IST
    • ಭಾರತ ಮತ್ತು ಇಂಗ್ಲೆಂಡ್ ನಡುವೆ ಸೆಪ್ಟೆಂಬರ್ 30 ರಂದು ಅಭ್ಯಾಸ ಪಂದ್ಯ ನಡೆಯಲಿದೆ
    • ಭಾರತವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಆಡಲಿದೆ
    • ಅಭ್ಯಾಸ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?
ಇಂದು ಭಾರತ-ಇಂಗ್ಲೆಂಡ್ ವಿಶ್ವಕಪ್ ಅಭ್ಯಾಸ ಪಂದ್ಯ: ಎಷ್ಟು ಗಂಟೆಗೆ, ಎಲ್ಲಿ, ಉಚಿತ ವೀಕ್ಷಣೆ ಹೇಗೆ? ಕಂಪ್ಲೀಟ್ ಮಾಹಿತಿ ಇಲ್ಲಿದೆ title=
India vs England

India vs England World Cup Warm-up match: ICC ಏಕದಿನ ವಿಶ್ವಕಪ್ 2023ಕ್ಕೂ ಮೊದಲು, ಭಾರತ ಮತ್ತು ಇಂಗ್ಲೆಂಡ್ ನಡುವೆ ಸೆಪ್ಟೆಂಬರ್ 30 ರಂದು ಅಂದರೆ ಇಂದು ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯ ಗುವಾಹಟಿಯಲ್ಲಿ ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗಲಿದೆ.

ಉಭಯ ತಂಡಗಳ ಮೊದಲ ಅಭ್ಯಾಸ ಪಂದ್ಯ ಇದಾಗಿದ್ದು, ಇಂಗ್ಲೆಂಡ್ ತನ್ನ ಮೊದಲ ವಿಶ್ವಕಪ್ ಪಂದ್ಯವನ್ನು ಅಕ್ಟೋಬರ್ 5 ರಂದು ನ್ಯೂಜಿಲೆಂಡ್ ವಿರುದ್ಧ ಆಡಬೇಕಾಗಿದೆ. ಇನ್ನು ಭಾರತವು ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಆಡಲಿದೆ.

ಇದನ್ನೂ ಓದಿ: ಸಾರ್ವಕಾಲಿಕ ಕುಸಿತದ ಬಳಿಕ ಇವತ್ತೆಷ್ಟಿದೆ ಗೊತ್ತಾ 10 ಗ್ರಾಂ ಬಂಗಾರದ ದರ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಭ್ಯಾಸ ಪಂದ್ಯವು ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆದರೆ ಇಂದು ಗುವಾಹಟಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ಮುನ್ಸೂಚನೆ ನೀಡಿದೆ. Weather.com ವರದಿ ಪ್ರಕಾರ ಶನಿವಾರ ಅಂದರೆ ಇಂದು ಗುವಾಹಟಿಯಲ್ಲಿ ಶೇ.50 ರಿಂದ 55ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೆ ಪಂದ್ಯವು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದ್ದು, ಮಳೆಯ ಸಾಧ್ಯತೆಯು ಸುಮಾರು 25 ಪ್ರತಿಶತಕ್ಕೆ ಕಡಿಮೆಯಾಗುತ್ತದೆ ಎಂದು ಹೇಳಿದೆ.

ಅಭ್ಯಾಸ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ಡಿಸ್ನಿ+ ಹಾಟ್‌’ಸ್ಟಾರ್‌’ನಲ್ಲಿ ನೀವು ಅಭ್ಯಾಸ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಅನ್ನು ಉಚಿತವಾಗಿ ವೀಕ್ಷಿಸಬಹುದು.

ಅಭ್ಯಾಸ ಪಂದ್ಯಗಳ ನೇರ ಪ್ರಸಾರ?

ಐಸಿಸಿ ವಿಶ್ವಕಪ್‌’ನ ಅಭ್ಯಾಸ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌’ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.

ಟೀಮ್ ಇಂಡಿಯಾದ ಅಭ್ಯಾಸ ಪಂದ್ಯಗಳ ವೇಳಾಪಟ್ಟಿ:

ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಆಡಿದರೆ, ತನ್ನ ಎರಡನೇ ಅಭ್ಯಾಸ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಅಕ್ಟೋಬರ್ 3 ರಂದು ಆಡಲಿದೆ. ಆತಿಥೇಯ ಭಾರತ ತನ್ನ ಎಲ್ಲಾ 9 ಪಂದ್ಯಗಳನ್ನು ವಿವಿಧ ಸ್ಥಳಗಳಲ್ಲಿ ಆಡಲಿದೆ.

ವಿಶ್ವಕಪ್‌’ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್.

ಇದನ್ನೂ ಓದಿ: ಒಂದೇ ಒಂದು ವಿಶ್ವಕಪ್ ಗೆಲ್ಲದೆ 300ಕ್ಕೂ ಅಧಿಕ ಏಕದಿನ ಪಂದ್ಯಗಳನ್ನಾಡಿದ ಆಟಗಾರರು ಯಾರು ಗೊತ್ತಾ?

ವಿಶ್ವಕಪ್‌’ಗೆ ಇಂಗ್ಲೆಂಡ್ ತಂಡ-

ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News