India vs New Zealand 1st Test: ಟೆಸ್ಟ್ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ ಶ್ರೇಯಸ್ ಅಯ್ಯರ್

ಟೀಂ ಇಂಡಿಯಾ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ತಮ್ಮ ಚೊಚ್ಚಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದ ನಂತರ ಎರಡನೇ ಇನಿಂಗ್ಸ್ ನಲ್ಲಿಯೂ ಭರ್ಜರಿ ಫಾರ್ಮ್ ನಲ್ಲಿದ್ದಾರೆ.

Last Updated : Nov 28, 2021, 03:10 PM IST
  • ಟೀಂ ಇಂಡಿಯಾ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ತಮ್ಮ ಚೊಚ್ಚಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದ ನಂತರ ಎರಡನೇ ಇನಿಂಗ್ಸ್ ನಲ್ಲಿಯೂ ಭರ್ಜರಿ ಫಾರ್ಮ್ ನಲ್ಲಿದ್ದಾರೆ.
 India vs New Zealand 1st Test: ಟೆಸ್ಟ್ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ ಶ್ರೇಯಸ್ ಅಯ್ಯರ್  title=

ನವದೆಹಲಿ: ಟೀಂ ಇಂಡಿಯಾ ಬ್ಯಾಟ್ಸ್ಮನ್ ಶ್ರೇಯಸ್ ಅಯ್ಯರ್ ತಮ್ಮ ಚೊಚ್ಚಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದ ನಂತರ  ಎರಡನೇ ಇನಿಂಗ್ಸ್ ನಲ್ಲಿಯೂ ಭರ್ಜರಿ ಫಾರ್ಮ್ ನಲ್ಲಿದ್ದಾರೆ.

ಇದನ್ನೂ ಓದಿ: IPL 2021: ಈ ಋತುವಿನಲ್ಲಿ ಒಂದೇ ಒಂದು ಪಂದ್ಯ ಆಡದಿದ್ದರೂ Shreyas Iyerಗೆ ಸಿಗುತ್ತೆ ಸಂಭಾವನೆ

26 ವರ್ಷ ವಯಸ್ಸಿನ ಶ್ರೇಯಸ್ಸ್ ಅಯ್ಯರ್ (Shreyas Iyer) ನ್ಯೂಜಿಲೆಂಡ್ ವಿರುದ್ಧ ಕಾನ್ಪುರದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ  ನಂತರ ಈಗ ನೂತನ ದಾಖಲೆಯನ್ನು ನಿರ್ಮಿಸಿದ್ದಾರೆ.ಅಲ್ಲದೆ, ಅರ್ಧಶತಕದೊಂದಿಗೆ,ಅಯ್ಯರ್ ಅವರು ತಮ್ಮ ಚೊಚ್ಚಲ ಟೆಸ್ಟ್‌ನಲ್ಲಿ ಶತಕ ಬಾರಿಸಿರುವುದಲ್ಲದೆ ಅರ್ಧಶತಕ ಗಳಿಸಿದ ಮೊದಲ ಭಾರತೀಯ ಬ್ಯಾಟ್ಸಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಒಟ್ಟಾರೆಯಾಗಿ ಈ ಸಾಧನೆ ಮಾಡಿದ ವಿಶ್ವದ 10 ನೇ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದನ್ನೂ ಓದಿ:Ind vs NZ: ಶ್ರೇಯಸ್ ಅಯ್ಯರ್ ತಂದೆ 4 ವರ್ಷಗಳಿಂದ ವಾಟ್ಸಾಪ್ ಡಿಪಿ ಬದಲಾಯಿಸಿಲ್ಲ, ಕಾರಣ ತಿಳಿದರೆ ಅಚ್ಚರಿ ಆಗುತ್ತೆ

ಅಯ್ಯರ್ ಟೆಸ್ಟ್‌ನಲ್ಲಿ ಪ್ರತಿ ಇನ್ನಿಂಗ್ಸ್‌ನಲ್ಲಿ ಐವತ್ತಕ್ಕೂ ಅಧಿಕ ಮೊತ್ತವನ್ನು ಗಳಿಸಿದ ಮೂರನೇ ಭಾರತೀಯರಾಗಿದ್ದಾರೆ. ಆ ಮೂಲಕ ಈಗ ದಿಲಾವರ್ ಹುಸೇನ್ ಮತ್ತು ಸುನಿಲ್ ಗವಾಸ್ಕರ್ ಅವರ ಸಾಲಿಗೆ ಸೇರ್ಪಡೆಯಾಗಿದ್ದಾರೆ.ದಿಲಾವರ್ ಹುಸೇನ್ ಅವರು 1933/34 ಕೋಲ್ಕತ್ತಾದಲ್ಲಿ ಇಂಗ್ಲೆಂಡ್ ವಿರುದ್ಧ ಕ್ರಮವಾಗಿ ಮೊದಲ ಮತ್ತು ಎರಡನೇ ಇನಿಂಗ್ಸ್ ನಲ್ಲಿ 59 & 57  ರನ್ ಗಳನ್ನು ಗಳಿಸಿದ್ದರು.ಇನ್ನೊಂದೆಡೆಗೆ ಸುನಿಲ್ ಗವಾಸ್ಕರ್ ಅವರು 1970/71 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 65 & 67* ರನ್ ಗಳಿಸಿ ದಾಖಲೆ ನಿರ್ಮಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

 

Trending News