Ind Vs NZ 2nd ODI : ಎರಡನೇ ಏಕದಿನ ಪಂದ್ಯಕ್ಕೆ ಹೀಗಿದೆ ಟೀಂ ಇಂಡಿಯಾ ಪ್ಲೇಯಿಂಗ್ 11
ಶಿಖರ್ ಧವನ್ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಬದಲಾವಣೆ ಮಾಡಲಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ XI ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..
Ind Vs NZ 2nd ODI : ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್‌ಗಳ ಸೋಲನುಭವಿಸಿತ್ತು. ಇದೀಗ ಭಾರತ ತಂಡ ನವೆಂಬರ್ 27 ರಂದು ಕಿವೀಸ್ ವಿರುದ್ಧ ಎರಡನೇ ಏಕದಿನ ಪಂದ್ಯವನ್ನು ಆಡಲಿದೆ. ಹೀಗಾಗಿ, ಶಿಖರ್ ಧವನ್ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ನಲ್ಲಿ ಬದಲಾವಣೆ ಮಾಡಲಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಪ್ಲೇಯಿಂಗ್ XI ಬಗ್ಗೆ ಮಾಹಿತಿ ಇಲ್ಲಿದೆ ನೋಡಿ..
ಇವರು ಓಪನರ್ ಜೋಡಿ..!
ಮೊದಲ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಇಬ್ಬರೂ ಬ್ಯಾಟ್ಸ್‌ಮನ್‌ಗಳು ಉತ್ತಮ ಲಯದಲ್ಲಿ ಕಾಣುತ್ತಿದ್ದಾರೆ. ಶಿಖರ್ ಧವನ್ 72 ರನ್ ಮತ್ತು ಗಿಲ್ 50 ರನ್ ಗಳಿಸಿದರು. ಹೀಗಾಗಿ, ಈ ಇಬ್ಬರೂ ಆಟಗಾರರು ಎರಡನೇ ಏಕದಿನ ಪಂದ್ಯದಲ್ಲೂ ಓಪನಿಂಗ್ ಮಾಡುವುದನ್ನು ಕಾಣಬಹುದು. ಟೀಂ ಇಂಡಿಯಾಗೆ ಭರ್ಜರಿ ಬ್ಯಾಟಿಂಗ್ ಮಾಡುವುದು ಈ ಇಬ್ಬರ ಆಟಗಾರರ ಜವಾಬ್ದಾರಿಯಾಗಿದೆ.
ಇದನ್ನೂ ಓದಿ : Team India : ಟಿ20 ವಿಶ್ವಕಪ್ ಸೋಲಿನ ನಂತರ ಎಚ್ಚೆತ್ತಗೊಂಡ ಬಿಸಿಸಿಐ, ಈ ಅನುಭವಿ ಟೀಂನಿಂದ ಔಟ್!
ಈ ಆಟಗಾರ ಮೂರನೇ ಸ್ಥಾನದಲ್ಲಿ ಮೈದಾನಕ್ಕೆ
ಕೆಲ ಸಮಯದಿಂದ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಪರ ಶ್ರೇಯಸ್ ಅಯ್ಯರ್ ಸಾಕಷ್ಟು ರನ್ ಗಳಿಸಿದ್ದಾರೆ. ಮೊದಲ ODIನಲ್ಲಿ 80 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿದರು. ಇಂತಹ ಪರಿಸ್ಥಿತಿಯಲ್ಲಿ ಅವರು ಮೂರನೇ ಸ್ಥಾನಕ್ಕೆ ಇಳಿಯುವುದು ಖಚಿತವಾಗಿದೆ.
ಮಧ್ಯಮ ಕ್ರಮಾಂಕದಲ್ಲಿ ಈ ಆಟಗಾರರು
ಟೀಂ ಇಂಡಿಯಾದ ಹೊಸ ಸೆನ್ಸೇಷನ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಅವಕಾಶ ಪಡೆಯಬಹುದು. ಸೂರ್ಯ ಮೈದಾನದ ಎಲ್ಲಾ ಕಡೆಗಳಲ್ಲಿ ಸ್ಟ್ರೋಕ್‌ಗಳನ್ನು ಹೊಡೆಯುವುದರಲ್ಲಿ ನಿಪುಣ ಬ್ಯಾಟ್ಸ್‌ಮನ್. ಸಂಜು ಸ್ಯಾಮ್ಸನ್ ಐದನೇ ಕ್ರಮಾಂಕದಲ್ಲಿ ಅವಕಾಶ ಪಡೆಯಬಹುದು. ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ರಿಷಭ್ ಪಂತ್ ಅವರಿಗೆ ವಹಿಸಬಹುದು, ಆದರೆ ಪಂತ್ ಮೊದಲ ODI ನಲ್ಲಿ ಕೆಟ್ಟದಾಗಿ ಸೋತರು.
ಬೌಲಿಂಗ್ ನಲ್ಲಿ ಆಗಬಹುದು ಬದಲಾವಣೆ
ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಶಾರ್ದೂಲ್ ಠಾಕೂರ್ ಮತ್ತು ಯುಜುವೇಂದ್ರ ಅತ್ಯಂತ ದುಬಾರಿ ಎಂದು ಸಾಬೀತಾಯಿತು. ಇಂತಹ ಪರಿಸ್ಥಿತಿಯಲ್ಲಿ ಕುಲದೀಪ್ ಯಾದವ್ ಮತ್ತು ದೀಪಕ್ ಚಹಾರ್ ಅವರ ಸ್ಥಾನದಲ್ಲಿ ಅವಕಾಶ ಪಡೆಯಬಹುದು. ಅದೇ ಸಮಯದಲ್ಲಿ ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್ ವೇಗದ ಬೌಲಿಂಗ್‌ನಲ್ಲಿ ಮತ್ತೊಂದು ಅವಕಾಶ ಪಡೆಯಬಹುದು. ವಾಷಿಂಗ್ಟನ್ ಸುಂದರ್ ಆಲ್ ರೌಂಡರ್ ಜವಾಬ್ದಾರಿಯನ್ನು ಪಡೆಯಬಹುದು.
ಇದನ್ನೂ ಓದಿ : IND vs NZ 2nd ODI: ಸರಣಿ ಕೈತಪ್ಪುವ ಭೀತಿಯಲ್ಲಿ ಟೀಂ ಇಂಡಿಯಾ: 2ನೇ ಪಂದ್ಯಕ್ಕೆ ಎದುರಾಯ್ತು ಈ ಸಮಸ್ಯೆ
ಎರಡನೇ ODIಗೆ ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ XI:
ಶಿಖರ್ ಧವನ್ (ನಾಯಕ), ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್, ದೀಪಕ್ ಚಹಾರ್, ಕುಲದೀಪ್ ಯಾದವ್.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.