India vs New Zealand, 2nd Test: ಕನ್ನಡಿಗ ಮಾಯಾಂಕ್ ಆಗ್ರವಾಲ್ ಭರ್ಜರಿ ಶತಕ, ಸುಸ್ಥಿತಿಯಲ್ಲಿ ಭಾರತ ತಂಡ

ಇಲ್ಲಿನ ವಾಂಖೆಡ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ದಿನದಾಂತ್ಯಕ್ಕೆ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡು 221 ರನ್ ಗಳಿಸಿದೆ.

Last Updated : Dec 3, 2021, 05:53 PM IST
  • ಇಲ್ಲಿನ ವಾಂಖೆಡ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ದಿನದಾಂತ್ಯಕ್ಕೆ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡು 221 ರನ್ ಗಳಿಸಿದೆ.
  • ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು ಮೊದಲ ವಿಕೆಟ್ ಗೆ ಮಾಯಾಂಕ ಅಗರವಾಲ್ ಹಾಗೂ ಶುಬ್ಮನ್ ಗಿಲ್ ಅವರು 80 ರನ್ ಗಳ ಜೊತೆಯಾಟವಾಡಿದರು.
India vs New Zealand, 2nd Test: ಕನ್ನಡಿಗ ಮಾಯಾಂಕ್ ಆಗ್ರವಾಲ್ ಭರ್ಜರಿ ಶತಕ, ಸುಸ್ಥಿತಿಯಲ್ಲಿ ಭಾರತ ತಂಡ  title=
Photo Courtesy: Twitter

ಮುಂಬೈ: ಇಲ್ಲಿನ ವಾಂಖೆಡ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ದಿನದಾಂತ್ಯಕ್ಕೆ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡು 221 ರನ್ ಗಳಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು ಮೊದಲ ವಿಕೆಟ್ ಗೆ ಮಾಯಾಂಕ ಅಗರವಾಲ್ ಹಾಗೂ ಶುಬ್ಮನ್ ಗಿಲ್ ಅವರು 80 ರನ್ ಗಳ ಜೊತೆಯಾಟವಾಡಿದರು.ಮಾಯಾಂಕ್ ಅವರು 120 ರನ್ ಗಳೊಂದಿಗೆ ಇನ್ನೂ ಕ್ರಿಸ್ ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಇನ್ನೊಂದೆಡೆಗೆ ಇವರಿಗೆ ವಿಕೆಟ್ ಕೀಪರ್ ವ್ರುದ್ದಿಮಾನ್ ಸಹಾ ಅವರು 25 ರನ್ ಗಳೊಂದಿಗೆ ಕ್ರಿಸ್ ನಲ್ಲಿದ್ದಾರೆ.

ಇದನ್ನೂ ಓದಿ : ಕೋಳಿಯನ್ನು ದುರ್ಬಲ ಎಂದುಕೊಂಡು ಜಗಳಕ್ಕೆ ನಿಂತ ಬೆಕ್ಕು, ಆದರೆ ಆಗಿದ್ದೇನು ? ಫೈಟಿಂಗ್ ನ full video ಇಲ್ಲಿದೆ

ಶುಬ್ಮನ್ ಗಿಲ್ ಅವರು 44 ರನ್ ಗಳಿಗೆ ವಿಕೆಟ್ ಒಪ್ಪಿಸಿದ ನಂತರ ಬಂದಂತಹ ಚೇತೆಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ಅವರು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಮೊದಲ ಟೆಸ್ಟ್ ನಲ್ಲಿ ಮಿಂಚಿದ್ದ ಶ್ರೇಯಸ್ ಅಯ್ಯರ್ ಅವರು ಕೇವಲ 18 ರನ್ ಗಳಿಸಿ ಹೊರನಡೆದರು.ನ್ಯೂಜಿಲೆಂಡ್ ಪರವಾಗಿ ಭರ್ಜರಿ ಬೌಲಿಂಗ್ ಮಾಡಿದ ಅಜಾಜ್ ಪಟೇಲ್ ಅವರು ನಾಲ್ಕು ವಿಕೆಟ್ ಗಳನ್ನು ಗಳಿಸಿದರು.

ಇದನ್ನೂ ಓದಿ : Viral Video: ಜಿಮ್‌ನಲ್ಲಿ ಗೆಳತಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಹೆಂಡತಿಗೆ ಸಿಕ್ಕಿಬಿದ್ದ ಪತಿರಾಯ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

Trending News