India vs New Zealand 2nd ODI Match: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಬೌಲರ್ ಗಳು ಅಟ್ಟಹಾಸ ಮೆರೆದಿದ್ದು, ನ್ಯೂಜಿಲೆಂಡ್ ತಂಡವನ್ನು 108 ರನ್ ಗಳಿಗೆ ಕಟ್ಟಿಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Rohit Sharma: ಟಾಸ್ ವೇಳೆ ಗಜನಿ ಥರ ವರ್ತಿಸಿದ ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕನಿಗೆ ಇದ್ದಕ್ಕಿಂದ್ದಂತೆ ಆಗಿದ್ದೇನು?


ಹೈದರಾಬಾದ್‌ನಲ್ಲಿ ನಡೆದ ಸರಣಿಯ ಮೊದಲ ಏಕದಿನ ಪಂದ್ಯವು ಹೆಚ್ಚಿನ ಸ್ಕೋರಿಂಗ್ ಪಂದ್ಯವಾಗಿದ್ದು, ಕೊನೆಯ ಓವರ್‌ನಲ್ಲಿ ಟೀಂ ಇಂಡಿಯಾ ಗೆದ್ದಿತ್ತು. 


108 ರನ್ ಪೇರಿಸಿದ ನ್ಯೂಜಿಲೆಂಡ್ ತಂಡ:


ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಸಂಕಷ್ಟಕ್ಕೆ ಸಿಲುಕಿದಂತಿದೆ. ಈ ಪಂದ್ಯದಲ್ಲಿ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದಿದ್ದಾರೆ. ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ಅದ್ಭುತ ಬೌಲಿಂಗ್‌ನಿಂದಾಗಿ ನ್ಯೂಜಿಲೆಂಡ್ ತಂಡವನ್ನು 108 ರನ್‌ಗಳಿಗೆ ಆಲೌಟ್ ಮಾಡಿದ್ದಾರೆ.


ಟಾಸ್ ಗೆದ್ದ ಭಾರತ: 


ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದರು. ಆದರೆ ಈ ಟಾಸಿಂಗ್ ವೇಳೆ ತಮಾಷೆಯ ಸನ್ನಿವೇಶ ನಡೆದಿತ್ತು. ರೋಹಿತ್ ಶರ್ಮಾ ಟಾಸ್ ಗೆದ್ದ ತಕ್ಷಣ ಯಾವ ನಿರ್ಧಾರ ಎಂದು ಹೇಳುವ ಸಮಯದಲ್ಲಿ ಕೊಂಚ ಗೊಂದಲಕ್ಕೊಳಗಾಗಿ ಗಜನಿಯಂತೆ ವರ್ತಿಸಿದರು. ಇದಾದ 20 ಸೆಕೆಂಡುಗಳ ಬಳಿಕ ಬೌಲಿಂಗ್ ಎಂದು ತಮ್ಮ ಆಯ್ಕೆಯನ್ನು ಹೇಳಿದರು. ಈ ವೇಳೆ ಅಲ್ಲಿ ನೆರೆದಿದ್ದ ಜನ ನಕ್ಕು ನಕ್ಕು ಸುಸ್ತಾದರು. ಈ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾವುದೇ ಬದಲಾವಣೆಯಾಗಿರಲಿಲ್ಲ.


ಪಂದ್ಯದ ಪ್ಲೇಯಿಂಗ್ ಇಲೆವೆನ್ ಹೀಗಿದೆ:


ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.


ಇದನ್ನೂ ಓದಿ: RCB Twitter Account Hacked: ಆರ್‌ಸಿಬಿ ಅಧಿಕೃತ ಟ್ವಿಟರ್‌ ಖಾತೆ ಹ್ಯಾಕ್‌


ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಾಕೆ/ಸಿ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.