IND vs NZ 2nd ODI : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಇಂದು ಹ್ಯಾಮಿಲ್ಟನ್‌ನಲ್ಲಿ ನಡೆಬೇಕಾಗಿತ್ತು. ಹ್ಯಾಮಿಲ್ಟನ್‌ನಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣದಿಂದ ಪಂದ್ಯ ರದ್ದುಗೊಳಿಸಲಾಗಿದೆ.


COMMERCIAL BREAK
SCROLL TO CONTINUE READING

ಹ್ಯಾಮಿಲ್ಟನ್ನ ಸೆಡನ್ ಪಾರ್ಕ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಕ್ಯಾಪ್ಟನ್ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದರು, 4.5 ಓವರ್ ಗಳಲ್ಲಿ ಭಾರತದ ಸ್ಕೋರ್ 22/0 ಆಗಿದೆ. ಇನ್ನು ಭಾರತ ತಂಡದಲ್ಲಿ ಸಂಜು ಸ್ಯಾಮ್ಸನ್ ಮತ್ತು ಶಾರ್ದೂಲ್ ಠಾಕೂರ್ ಬದಲಿಗೆ ದೀಪಕ್ ಹೂಡಾ ಮತ್ತು ದೀಪಕ್ ಚಹಾರ್ ಅವರನ್ನು ಬದಲಾವಣೆಗಳನ್ನು ಮಾಡಲಾಗಿದೆ.


ಟೀಂ ಇಂಡಿಯಾ ಈಗಾಗಲೆ ಮೊದಲ ಪಂದ್ಯ ಸೋತು ಸರಣಿಯಲ್ಲಿ 0-1 ಹಿನ್ನಡೆಯಲ್ಲಿತ್ತು, ಹೀಗಾಗಿ ಈ ಎರಡನೇ ಮ್ಯಾಚ್ ಗೆಲ್ಲಲೇಬೇಕಾದ ಅನಿವಾರ್ಯತೆ ಭಾರತಕ್ಕಿತ್ತು. ಆದರೆ ಎರಡನೇ ಪಂದ್ಯಕ್ಕೆ ಮಳೆ ಅಡ್ಡಿ ಮಾಡಿದ್ದು, ನ್ಯೂಜಿಲೆಂಡ್‌ನಲ್ಲಿ ಸರಣಿ ಗೆಲ್ಲುವ ಕನಸಿಗೆ ಬ್ರೇಕ್ ಬಿದ್ದಿದೆ.


ಟೀಂ ಇಂಡಿಯಾ ಪ್ಲೇಯಿಂಗ್ 11 : ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.


ನ್ಯೂಜಿಲೆಂಡ್ ಟೀಂ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಮೈಕೆಲ್ ಬ್ರೇಸ್‌ವೆಲ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಲಾಕಿ ಫರ್ಗುಸನ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.