ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ ಉಚಿತವಾಗಿ ವೀಕ್ಷಿಸಬೇಕೇ? ಹಾಗಾದ್ರೆ ಈ ಸಣ್ಣ ಕೆಲಸ ಮಾಡಿ...

India vs Pakistan Live Streaming: ಸೂಪರ್-4ರಲ್ಲಿ ಪಾಕಿಸ್ತಾನ ತಂಡದ ಎರಡನೇ ಪಂದ್ಯವಾಗಿದೆ. ಮೊದಲ ಪಂದ್ಯದಲ್ಲಿ ಬಾಬರ್ ಅಜಮ್ ತಂಡ ಬಾಂಗ್ಲಾದೇಶವನ್ನು ಹೀನಾಯವಾಗಿ ಸೋಲಿಸಿತ್ತು. ಸೂಪರ್-4ರಲ್ಲಿ ಭಾರತ ತಂಡದ ಮೊದಲ ಪಂದ್ಯ ಇದಾಗಿದೆ.

Written by - Bhavishya Shetty | Last Updated : Sep 10, 2023, 08:52 AM IST
    • ಭಾರತ-ಪಾಕಿಸ್ತಾನ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಲಿದೆ?
    • ಭಾರತ-ಪಾಕಿಸ್ತಾನ ಪಂದ್ಯ ನೇರಪ್ರಸಾರ ಎಲ್ಲಿ ವೀಕ್ಷಿಸಬಹುದು?
    • ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವನ್ನು ವರದಿಯಲ್ಲಿ ನೀಡಲಾಗಿದೆ…
ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ ಉಚಿತವಾಗಿ ವೀಕ್ಷಿಸಬೇಕೇ? ಹಾಗಾದ್ರೆ ಈ ಸಣ್ಣ ಕೆಲಸ ಮಾಡಿ... title=
India vs Pakistan free watch

India vs Pakistan Live Streaming: 2023 ರ ಏಷ್ಯಾ ಕಪ್‌ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಎರಡನೇ ಬಾರಿ ಮುಖಾಮುಖಿಯಾಗಲಿವೆ. ಈ ಹಿಂದೆ ಮುನ್ನ ಎರಡೂ ತಂಡಗಳು ಲೀಗ್ ಹಂತದಲ್ಲಿ ಮುಖಾಮುಖಿಯಾಗಿತ್ತು. ಆದರೆ ಮಳೆಯಿಂದಾಗಿ ಆ ಪಂದ್ಯವನ್ನು ರದ್ದು ಮಾಡಲಾಗಿತ್ತು. ಇನ್ನು ಇಂದು ರೋಹಿತ್ ಸೇನಾ ಹಾಗೂ ಬಾಬರ್ ಬ್ರಿಗೇಡ್ ನಡುವಿನ ಕದನ ಸೂಪರ್-4ರಲ್ಲಿ ನಡೆಯಲಿದೆ.

ಸೂಪರ್-4ರಲ್ಲಿ ಪಾಕಿಸ್ತಾನ ತಂಡದ ಎರಡನೇ ಪಂದ್ಯವಾಗಿದೆ. ಮೊದಲ ಪಂದ್ಯದಲ್ಲಿ ಬಾಬರ್ ಅಜಮ್ ತಂಡ ಬಾಂಗ್ಲಾದೇಶವನ್ನು ಹೀನಾಯವಾಗಿ ಸೋಲಿಸಿತ್ತು. ಸೂಪರ್-4ರಲ್ಲಿ ಭಾರತ ತಂಡದ ಮೊದಲ ಪಂದ್ಯ ಇದಾಗಿದೆ. ಭಾರತ ತಂಡ ಲೀಗ್ ಹಂತದಲ್ಲಿ ನೇಪಾಳ ವಿರುದ್ಧ ಅದ್ಭುತ ಜಯ ದಾಖಲಿಸಿತ್ತು.

ಇದನ್ನೂ ಓದಿ: ಜಗತ್ತೇ ಮೆಚ್ಚಿರುವ ‘ಕಿಂಗ್’ ವಿರಾಟ್ ಕೊಹ್ಲಿಯ ಫೇವರೇಟ್ ಕ್ರಿಕೆಟಿಗ ಯಾರು ಗೊತ್ತಾ?

ಭಾರತ-ಪಾಕಿಸ್ತಾನ ಪಂದ್ಯ ಯಾವಾಗ ಮತ್ತು ಎಲ್ಲಿ ನಡೆಯಲಿದೆ?

ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಸೂಪರ್-4 ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಟಾಸ್ 2:30 ಕ್ಕೆ ನಡೆಯಲಿದೆ.

ಭಾರತ-ಪಾಕಿಸ್ತಾನ ಪಂದ್ಯ ನೇರಪ್ರಸಾರ ಎಲ್ಲಿ ವೀಕ್ಷಿಸಬಹುದು?

ಏಷ್ಯಾ ಕಪ್ 2023 ರಲ್ಲಿ ಭಾರತ-ಪಾಕಿಸ್ತಾನ ಸೂಪರ್-4 ಪಂದ್ಯವನ್ನು ನೀವು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಮೂಲಕ ವೀಕ್ಷಿಸಬಹುದು. ಸ್ಟಾರ್ ಸ್ಪೋರ್ಟ್ಸ್ ಹಿಂದಿಯಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನೇರ ಪ್ರಸಾರವಾಗಲಿದೆ. ಈ ಪಂದ್ಯವನ್ನು ಡಿಡಿ ಸ್ಪೋರ್ಟ್ಸ್ ಚಾನೆಲ್‌’ನಲ್ಲಿ ಫ್ರೀ ಡಿಶ್ ಮೂಲಕ ಕೂಡ ನೇರ ಪ್ರಸಾರ ಮಾಡಲಾಗುತ್ತದೆ.

ಉಚಿತವಾಗಿ ವೀಕ್ಷಿಸಲು ಹೀಗೆ ಮಾಡಿ…

2023 ರ ಏಷ್ಯಾ ಕಪ್‌’ನ ಸೂಪರ್-4 ಪಂದ್ಯವನ್ನು ನೀವು ಮೊಬೈಲ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ ಮೂಲಕ ಈ ಟೂರ್ನಿಯ ಎಲ್ಲಾ ಪಂದ್ಯಗಳನ್ನು ಉಚಿತವಾಗಿ ಆನಂದಿಸಬಹುದು.

ಇದನ್ನೂ ಓದಿ: ವಾರಾಂತ್ಯದಲ್ಲಿ ಈ ರಾಶಿಗೆ ಸಿಗಲಿದೆ ಖಜಾನೆ, ಲಕ್ಷ್ಮೀ ಶ್ರೀರಕ್ಷೆಯಿಂದ ಹೊಡೆಯಲಿದೆ ಬಂಪರ್ ಲಾಟರಿ

ಇನ್ನು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮೀಸಲು ದಿನವನ್ನು ಇಡಲಾಗಿದೆ. ಸೆಪ್ಟೆಂಬರ್ 10 ರಂದು ಕೊಲಂಬೊದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯಕ್ಕೆ ಮಾತ್ರ ಮೀಸಲು ದಿನವನ್ನು ಇಡಲು ನಿರ್ಧರಿಸಲಾಗಿದೆ. ಮಳೆಯಿಂದಾಗಿ ಸೆಪ್ಟೆಂಬರ್ 10 ರಂದು ಪಂದ್ಯ ನಡೆಯದಿದ್ದರೆ ಸೆಪ್ಟೆಂಬರ್ 11 ರಂದು ಪಂದ್ಯ ನಡೆಯಲಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News