ದುಬೈ: ಇಲ್ಲಿನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಏಷ್ಯಾಕಪ್ ಟಿ.20 ಟೂರ್ನಿಯ ಪಾಕ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ತಂಡವು ಐದು ವಿಕೆಟ್ ಗಳ ರೋಚಕ ಗೆಲುವನ್ನು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡವು ಪಾಕಿಸ್ತಾನ ತಂಡವನ್ನು 147/10 ರನ್ ಗಳಿಗೆ ನಿಯಂತ್ರಿಸಿತು. ಪಾಕ್ ತಂಡದ ಪರವಾಗಿ ರಿಜ್ವಾನ್ 43 ಹಾಗೂ ಇಫ್ತಿಕಾರ್ ಅಹಮ್ಮದ್ 28 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು. ಇನ್ನೊಂದೆಡೆಗೆ ಭಾರತದ ಪರವಾಗಿ ಭುವನೇಶ್ವರ್ ಕುಮಾರ್ ನಾಲ್ಕು ಹಾಗೂ ಹಾರ್ದಿಕ್ ಪಾಂಡ್ಯ ಮೂರು ವಿಕೆಟ್ ಗಳನ್ನು ಕಬಳಿಸುವ ಮೂಲಕ ಪಾಕ್ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.
ಇದನ್ನೂ ಓದಿ: ಪಾಕ್ ವಿರುದ್ಧ ಭಾರತ ತಂಡವೇ ಕಿಂಗ್..! ದಾಖಲೆಗಳು ಹೇಳೋದೇನು..?
India seal a tense win in Dubai to beat Pakistan 🙌🏻#INDvPAK | #AsiaCup2022 | 📝 Scorecard: https://t.co/mKkZ2s5RKA pic.twitter.com/5KBNSKwfjL
— ICC (@ICC) August 28, 2022
ಇನ್ನೊಂದೆಡೆಗೆ 148 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ತಂಡದ ಮೊತ್ತ 1 ರನ್ ಆಗಿದ್ದಾಗ ಕೆ.ಎಲ್ ರಾಹುಲ್ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ಆಘಾತವನ್ನು ಎದುರಿಸಿತು.ಇದಾದ ನಂತರ ವಿರಾಟ್ ಕೊಹ್ಲಿ 34 ಎಸೆತಗಳಲ್ಲಿ 35 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಅಂತಿಮವಾಗಿ ರವೀಂದ್ರ ಜಡೇಜಾ 35 ಹಾಗೂ ಹಾರ್ದಿಕ್ ಪಾಂಡ್ಯ 33 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.