IND vs PAK World Cup 2023: ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಜನರು ನೋಡಲು ಕಾತುರದಿಂದ ಕಾಯುತ್ತಿರುತ್ತಾರೆ. ಇನ್ನೇನು ICC ವಿಶ್ವಕಪ್ 2023 ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಇದರಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಆದರೆ ಅದಕ್ಕೂ ಮುನ್ನ ಭಾರತ-ಪಾಕಿಸ್ತಾನ ನಡುವಿನ ಪಂದ್ಯದ ದಿನಾಂಕ ಮರು ನಿಗದಿಯಾಗಬಹುದು ಎಂಬ ದೊಡ್ಡ ಸುದ್ದಿ ಹೊರಬೀಳುತ್ತಿದೆ. ಅಕ್ಟೋಬರ್ 5 ರಿಂದ ವಿಶ್ವಕಪ್ ಆರಂಭವಾಗಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕೊಹ್ಲಿ-ರೋಹಿತ್ ಜೊತೆ ಮೈದಾನದಲ್ಲಿಯೇ ಜಗಳವಾಡಿದ್ದ ಈ ಇಬ್ಬರು ಕ್ರಿಕೆಟಿಗರು ಇಂದು ನಿವೃತ್ತಿ ಘೋಷಣೆ!


ಮೊದಲ ಪಂದ್ಯ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಅದೇ ಸಮಯದಲ್ಲಿ, ಭಾರತ ಮತ್ತು ಪಾಕಿಸ್ತಾನ ತಮ್ಮ ಮೊದಲ ಪಂದ್ಯವನ್ನು ಅಕ್ಟೋಬರ್ 6 ಮತ್ತು 8 ರಂದು ಆಡಲಿವೆ. ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನೆದರ್ಲೆಂಡ್ಸ್ ವಿರುದ್ಧ ಪಾಕಿಸ್ತಾನ ಮೊದಲ ಪಂದ್ಯವನ್ನು ಆಡಲಿದೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತದ ಮೊದಲ ಪಂದ್ಯ ಆಸ್ಟ್ರೇಲಿಯಾ ವಿರುದ್ಧ ನಡೆಯಲಿದೆ.


ಭಾರತ ಮತ್ತು ಪಾಕಿಸ್ತಾನ ಪಂದ್ಯ ಮರು ನಿಗದಿ!


ಈ ಬಾರಿ ವಿಶ್ವಕಪ್ ಮಹಾ ಪಂದ್ಯ ಭಾರತದಲ್ಲಿ ನಡೆಯುತ್ತಿದೆ. 46 ದಿನಗಳಲ್ಲಿ ಒಟ್ಟು 48 ಪಂದ್ಯಗಳು ನಡೆಯಲಿವೆ. ಆದರೆ ಭಾರತ-ಪಾಕಿಸ್ತಾನ ಪಂದ್ಯವನ್ನು ಮರು ನಿಗದಿಪಡಿಸುವ ಹೆಚ್ಚಿನ ಸಾಧ್ಯತೆಗಳಿವೆ. ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಎರಡೂ ತಂಡಗಳು ಅಕ್ಟೋಬರ್ 15 ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಲಿವೆ.


ಮಾಧ್ಯಮ ವರದಿಯ ಪ್ರಕಾರ, ನವರಾತ್ರಿಯ ಮೊದಲ ದಿನದಂದು ಗುಜರಾತ್‌ ನಲ್ಲಿ ಅತಿದೊಡ್ಡ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ಹಬ್ಬದಲ್ಲಿ ರಾಜ್ಯದೆಲ್ಲೆಡೆಯಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಗರ್ಬಾ ಆಚರಣೆಯಲ್ಲಿ ಪಾಲ್ಗೊಳ್ಳುತ್ತಾರೆ. ಹೀಗಿರುವಾಗ ಭದ್ರತಾ ಏಜೆನ್ಸಿಗಳು ಪಂದ್ಯವನ್ನು ಮರು ನಿಗದಿಪಡಿಸುವಂತೆ ಬಿಸಿಸಿಐಗೆ ಸಲಹೆ ನೀಡಿವೆ.


ಇದನ್ನೂ ಓದಿ: 26 ವರ್ಷಗಳ ಹಿಂದೆ ವಿಂಡೀಸ್’ನಲ್ಲಿ ಟೀಂ ಇಂಡಿಯಾ ಅನುಭವಿಸಿತ್ತು ಆ ನೋವು! ಸಚಿನ್-ಗಂಗೂಲಿ ಮಧ್ಯೆ ನಡೆದಿತ್ತು ಕಾದಾಟ?


ಬಿಸಿಸಿಐ ಅಧಿಕಾರಿ ಹೇಳಿದ್ದೇನು?


ಬಿಸಿಸಿಐ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿ ಪ್ರಕಾರ, “ನಾವು ನಮ್ಮಲ್ಲಿ ಲಭ್ಯವಿರುವ ಆಯ್ಕೆಗಳನ್ನು ಪರಿಗಣಿಸುತ್ತಿದ್ದೇವೆ ಮತ್ತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಹಮದಾಬಾದ್‌ಗೆ ಸಾವಿರಾರು ಅಭಿಮಾನಿಗಳು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ನವರಾತ್ರಿ ಹಬ್ಬ ಮತ್ತು ಭಾರತ-ಪಾಕಿಸ್ತಾನದಂತಹ ಉನ್ನತ ಮಟ್ಟದ ಆಟಗಳನ್ನು ಒಟ್ಟಾಗಿ ನಡೆಸಬಾರದು ಎಂದು ಭದ್ರತಾ ಏಜೆನ್ಸಿಗಳು ನಮಗೆ ತಿಳಿಸಿವೆ” ಎಂದಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ