India vs Pakistan Asia Cup 2022 : ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾ ಉತ್ತಮ ಫಾರ್ಮ್‌ನಲ್ಲಿ ಸಾಗುತ್ತಿದೆ. ಏಷ್ಯಾಕಪ್‌ನ ಮೊದಲ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಹಾಗೆ, ಎರಡನೇ ಪಂದ್ಯದಲ್ಲಿ ಹಾಂಕಾಂಗ್ ತಂಡವನ್ನು 40 ರನ್‌ಗಳಿಂದ ಸೋಲಿಸಿತು. ಈ ಪಂದ್ಯದ ಬಳಿಕ ಭಾರತ ಸೂಪರ್-4ಗೆ ಅರ್ಹತೆ ಪಡೆದುಕೊಂಡಿದೆ. ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಭಾರತದಲ್ಲಿ ಭಾನುವಾರ, ಸೆಪ್ಟೆಂಬರ್ 4 ರಂದು ನಡೆಯಲಿದೆ. ಹಾಗೆ, ಈ ಎರಡೂ ತಂಡಗಳು ಫೈನಲ್‌ನಲ್ಲಿ ಸೆಣಸಬಹುದು. ಹೇಗೆ? ಅಂತ ಈ ಕೆಳೆಗೆ ನೋಡಿ
ಪಾಕಿಸ್ತಾನ ಹಾಂಕಾಂಗ್ ವಿರುದ್ಧ ಫೈಟ್
ಭಾರತ ವಿರುದ್ಧ ಸೋತಿರುವ ಪಾಕಿಸ್ತಾನ ತಂಡ ಇಂದು (ಸೆ.2ರಂದು) ಹಾಂಕಾಂಗ್ ವಿರುದ್ಧ ಪಂದ್ಯವನ್ನು ಆಡಲಿದೆ. ಈ ಪಂದ್ಯವನ್ನು ಗೆದ್ದರೆ ಪಾಕಿಸ್ತಾನ ತಂಡವು ಗ್ರೂಪ್ I ನಿಂದ ಸೂಪರ್-4 ಗೆ ಅರ್ಹತೆ ಪಡೆಯುತ್ತದೆ. ಹಾಗೆ, ಸೆಪ್ಟೆಂಬರ್ 4 ರಂದು, ಅಭಿಮಾನಿಗಳು ಭಾರತ ಮತ್ತು ಪಾಕಿಸ್ತಾನ ನಡುವಿನ ಮತ್ತೊಂದು ಹೈ ವೋಲ್ಟೇಜ್ ಪಂದ್ಯವನ್ನು ಕಣ್ಣು ತುಂಬಿಕೊಳ್ಳಬಹುದು.
ಇದನ್ನೂ ಓದಿ : Asia Cup 2022 : ರೋಹಿತ್ಗೆ ಎದುರಾಗಿದೆ ಸಂಕಷ್ಟ, ಪಾಂಡ್ಯ ವಾಪಸಾದರೆ ಟೀಂನಿಂದ ಯಾರು ಔಟ್?
ಇಲ್ಲಿಯವರೆಗೆ ಈ ತಂಡಗಳು ಸೂಪರ್-4ಗೆ ಅರ್ಹತೆ ಪಡೆದಿವೆ
ಭಾರತ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ಸೂಪರ್-4 ಗೆ ಅರ್ಹತೆ ಪಡೆದಿವೆ. ಹಾಂಕಾಂಗ್ ಅನ್ನು ಸೋಲಿಸುವ ಮೂಲಕ ಪಾಕಿಸ್ತಾನವು ಸೂಪರ್-4 ಗೆ ಅರ್ಹತೆ ಪಡೆಯಬಹುದು. ಸೂಪರ್ 4 ರಲ್ಲಿ, ಎಲ್ಲಾ ತಂಡಗಳು ತಲಾ ಮೂರು ಪಂದ್ಯಗಳನ್ನು ಆಡುತ್ತವೆ, ಅದರಲ್ಲಿ ಎರಡು ತಂಡಗಳು ಫೈನಲ್‌ಗೆ ಪ್ರವೇಶಿಸುತ್ತವೆ. ಏಷ್ಯಾ ಕಪ್ 2022 ರ ಅಂತಿಮ ಪಂದ್ಯ ಸೆಪ್ಟೆಂಬರ್ 11 ರಂದು ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ತಂಡಗಳು ಮೂರನೇ ಬಾರಿಗೆ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವುದನ್ನು ಕಾಣಬಹುದು.
ಫೈನಲ್ ಪಂದ್ಯ ನಡೆದಿಲ್ಲ
ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಅಂತಿಮ ಪಂದ್ಯ ಇನ್ನಷ್ಟೇ ನಡೆಯಬೇಕಿದೆ. ಏಷ್ಯಾಕಪ್‌ನಲ್ಲಿ ಭಾರತ ತಂಡ ಯಾವಾಗಲೂ ಪಾಕಿಸ್ತಾನ ತಂಡಕ್ಕಿಂತ ಮೇಲುಗೈ ಸಾಧಿಸಿದೆ. ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ 15 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 9 ಪಂದ್ಯಗಳನ್ನು ಗೆದ್ದಿದೆ ಮತ್ತು ಪಾಕಿಸ್ತಾನ ಕೇವಲ 5 ಪಂದ್ಯಗಳನ್ನು ಗೆದ್ದಿದೆ. ಅಲ್ಲದೆ, ಟೀಮ್ ಇಂಡಿಯಾ ಏಷ್ಯಾಕಪ್ ಪ್ರಶಸ್ತಿಯನ್ನು ಅತಿ ಹೆಚ್ಚು ಬಾರಿ ಅಂದರೆ, 7 ಬಾರಿ ಗೆದ್ದಿದೆ. ಪಾಕಿಸ್ತಾನಕ್ಕೆ ಕೇವಲ ಎರಡು ಬಾರಿ ಮಾತ್ರ ಏಷ್ಯಾಕಪ್ ಗೆದ್ದಿದೆ.
ಇದನ್ನೂ ಓದಿ : Virat Kohli : ಟೀಂ ಇಂಡಿಯಾದ ಈ ಆಟಗಾರನನ್ನು ಹಾಡಿಹೊಗಳಿದ ಕಿಂಗ್ ಕೊಹ್ಲಿ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.