ಅಸ್ಸಾಂನ ಗುವಾಹಟಿಯ ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಎರಡನೇ ಟಿ20 ಪಂದ್ಯ ನಡೆಯಲಿದ್ದು, ಸದ್ಯ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ. ಈಗಾಗಲೇ ಮೊದಲ ಪಂದ್ಯದಲ್ಲಿ ಗೆದ್ದು, 1-0 ಅಂತರದಲ್ಲಿರುವ ಟೀಂ ಇಂಡಿಯಾ ಈ ಪಂದ್ಯದಲ್ಲೂ ಗೆಲುವು ಸಾಧಿಸಿ ಸರಣಿ ಕೈವಶ ಮಾಡಿಕೊಳ್ಳುವ ಯೋಜನೆಯಲ್ಲಿದೆ.
ಇದನ್ನೂ ಓದಿ: IND vs SA 2nd T20I: ಭಾರತದಲ್ಲಿ ಸೋಲೇ ಕಾಣದ ದ.ಆಫ್ರಿಕಾ: ಹರಿಣಗಳ ಪರಾಭವಕ್ಕೆ ಟೀಂ ಇಂಡಿಯಾದ ಪ್ಲಾನ್ ಏನು ಗೊತ್ತಾ?
ಟೀಂ ಇಂಡಿಯಾದಲ್ಲಿ ಸೂರ್ಯಕುಮಾರ್ ಯಾದವ್, ಅರ್ಷದೀಪ್ ಸಿಂಗ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ಸೇರಿದಂತೆ ಪರಾಕ್ರಮಿಗಳ ದಂಡು ಇದೆ. ಹೀಗಾಗಿ ಟೀಂ ಇಂಡಿಯಾ ಪಂದ್ಯ ಗೆಲ್ಲುವ ಸಾಧ್ಯತೆಯಿದೆ. ಮೊದಲ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದ ಯಾದವ್ ಕೇವಲ 33 ಬಾಲ್ ಗೆ 50 ಪೇರಿಸಿದ್ದರು. ಉಳಿದಂತೆ ಕನ್ನಡಿಗ ರಾಹುಲ್ 56 ಬಾಲ್ ಗೆ 51 ರನ್ ಬಾರಿಸಿ ತಂಡದ ಗೆಲುವಿಗೆ ಕೊಡುಗೆ ನೀಡಿದ್ದರು.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2ನೇ T20I ಇಂದು ಸಂಜೆ 7 ಗಂಟೆಗೆ ಅಸ್ಸಾಂನ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. .
ಭಾರತದ ಸಂಭಾವ್ಯ ಆಟಗಾರರ ಪಟ್ಟಿ: ರೋಹಿತ್ ಶರ್ಮಾ (ಕ್ಯಾ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದಿನೇಶ್ ಕಾರ್ತಿಕ್ (ವಿ.ಕೀ), ಅಕ್ಷರ್ ಪಟೇಲ್, ಆರ್. ಅಶ್ವಿನ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್
ಇದನ್ನೂ ಓದಿ: IND vs SA : ಎರಡನೇ ಟಿ20 ಪಂದ್ಯದಲ್ಲಿ ಹಿಸ್ಟರಿ ನಿರ್ಮಿಸಲಿದ್ದಾರೆ ಕಿಂಗ್ ಕೊಹ್ಲಿ!
ದಕ್ಷಿಣ ಆಫ್ರಿಕಾದ ಸಂಭಾವ್ಯ ಆಟಗಾರರ ಪಟ್ಟಿ: ಟೆಂಬಾ ಬವುಮಾ (ಕ್ಯಾ), ಕ್ವಿಂಟನ್ ಡಿ ಕಾಕ್ (ವಿ.ಕೀ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.