India vs South Africa, 4th T20I: ಅಬ್ಬರಿಸಿದ ದಿನೇಶ್ ಕಾರ್ತಿಕ್, ಮಾರಕವಾದ ಆವೇಶ್ ಖಾನ್...ತತ್ತರಿಸಿದ ಹರಿಣಗಳು..!
ಶುಕ್ರವಾರದಂದು ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 82 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸುವ ಮೂಲಕ ಐದು ಪಂದ್ಯಗಳ ಸರಣಿಯನ್ನು 2-2 ರಿಂದ ಸಮಬಲಗೊಳಿಸಿದೆ.
ರಾಜ್ ಕೋಟ್: ಶುಕ್ರವಾರದಂದು ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 82 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಮಣಿಸುವ ಮೂಲಕ ಐದು ಪಂದ್ಯಗಳ ಸರಣಿಯನ್ನು 2-2 ರಿಂದ ಸಮಬಲಗೊಳಿಸಿದೆ.
ಇಲ್ಲಿನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಟಾಸ್ ಗೆದ್ದು ಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್ ಅವಕಾಶ ನೀಡಿತು.ಆದರೆ ಭಾರತ ತಂಡಕ್ಕೆ ಆರಂಭದಲ್ಲಿಯೇ ಹರಿಣಗಳು ತಮ್ಮ ಮಾರಕ ಬೌಲಿಂಗ್ ದಾಳಿಯಿಂದ ಆಘಾತ ನೀಡಿದರು.
ಇದನ್ನೂ ಓದಿ: ಆರ್ ಆರ್ ಆರ್ ಮತ್ತು ಕೆಜಿಎಫ್ 2 ನಡುವೆ ಯಾವುದು ಫೇವರಿಟ್? ಎಂದು ಕೇಳಿದ್ದಕ್ಕೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತೇ ?
ತಂಡದ ಮೊತ್ತ 40 ರನ್ ಗಳಾಗುವಷ್ಟರಲ್ಲಿ ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಅವರ ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ದಿನೇಶ್ ಕಾರ್ತಿಕ್ ಅವರ ವೃತ್ತಿಜೀವನದ ಅತ್ಯುತ್ತಮ ಪ್ರದರ್ಶನವಾದ ಇಂದಿನ ಪಂದ್ಯದಲ್ಲಿ ಕೇವಲ 27 ಎಸೆತಗಳಲ್ಲಿ 55 ರನ್ ಮತ್ತು ಹಾರ್ದಿಕ್ ಪಾಂಡ್ಯ ಅವರ 31 ಎಸೆತಗಳಲ್ಲಿ 46 ರನ್ ಗಳಿಂದಾಗಿ ಭಾರತ ಕೊನೆಗೆ 20 ಓವರ್ ಗಳಲ್ಲಿ ಆರು ವಿಕೆಟ್ ಗಳ ನಷ್ಟಕ್ಕೆ 169 ರನ್ ಗಳನ್ನು ಗಳಿಸಿತು.
ಕ್ರಿಕೆಟ್ ಕಾಶಿ ಲಾರ್ಡ್ಸ್ ಗ್ರೌಂಡ್ ಇಟ್ಟಿಗೆ ಮೇಲೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೆಸರು..!
170 ರನ್ ಗಳ ಭಾರತ ನೀಡಿದ ಗೆಲುವಿನ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಆವೇಶ್ ಖಾನ್ ಭಾರಿ ಆಘಾತ ನೀಡಿದರು. ಅವರು ನಾಲ್ಕು ಓವರ್ ಗಳಲ್ಲಿ ಕೇವಲ 18 ಗಳನ್ನು ನೀಡಿ ನಾಲ್ಕು ವಿಕೆಟ್ ಗಳನ್ನು ಕಬಳಿಸಿದ್ದು ಪಂದ್ಯವನ್ನು ಭಾರತದ ಪರ ವಾಲುವಂತೆ ಮಾಡಿತು.ಇನ್ನೊಂದೆಡೆಗೆ ಇವರಿಗೆ ಸಾಥ್ ನೀಡಿದ ಯುಜ್ವೆಂದ್ರ ಚಹಾಲ್ ಎರಡು ವಿಕೆಟ್ ಗಳಿಸಿದರೆ, ಅಕ್ಸರ್ ಪಟೇಲ್ ಹಾಗೂ ಹರ್ಷಲ್ ಪಟೇಲ್ ತಲಾ ಒಂದು ವಿಕೆಟ್ ಗಳನ್ನು ಕಬಳಿಸಿದ್ದರಿಂದಾಗಿ ದಕ್ಷಿಣ ಆಫ್ರಿಕಾ ತಂಡವು 16.5 ಓವರ್ ಗಳಲ್ಲಿ 87 ರನ್ ಗಳಿಗೆ ಆಲೌಟ್ ಆಯಿತು.ಈಗ ಭಾರತದ ಈ ಗೆಲುವಿನೊಂದಿಗೆ ಸರಣಿ 2-2 ರಲ್ಲಿ ಸಮಬಲಗೊಂಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.