India Playing 11 Vs South Africa 1st Test: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಡಿಸೆಂಬರ್ 26 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಗೆದ್ದರೆ ಇತಿಹಾಸವೇ ಸೃಷ್ಟಿಯಾಗಲಿದೆ. ಏಕೆಂದರೆ ಭಾರತವು ಇಲ್ಲಿಯವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಒಂದು ವೇಳೆ ಗೆಲುವು ಕಂಡರೆ ರೋಹಿತ್ ಶರ್ಮಾ ಈ ಸಾಧನೆ ಮಾಡಿದ ಮೊದಲ ಭಾರತೀಯ ನಾಯಕನಾಗುವುದರಲ್ಲಿ ಎರಡು ಮಾತಿಲ್ಲ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಕೇವಲ 2 ವರ್ಷಕ್ಕೆ ಸಾವಿರ ಕೋಟಿ ಒಡೆಯ ವಿರಾಟ್ ಕೊಹ್ಲಿ ಮಗಳ ಆಸ್ತಿ ಎಷ್ಟಿದೆ ಗೊತ್ತಾ?


ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ 30 ರವರೆಗೆ ಸೆಂಚುರಿಯನ್‌’ನ ಸೂಪರ್‌ ಸ್ಪೋರ್ಟ್ ಪಾರ್ಕ್‌’ನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಸ್ಟಾರ್ ಆಟಗಾರರು ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.


ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಯಾರು ಓಪನಿಂಗ್ ಮಾಡಲಿದ್ದಾರೆ ಎಂಬುದೇ ಈಗಿನ ಪ್ರಶ್ನೆ. ನಾಯಕ ರೋಹಿತ್ ಶರ್ಮಾ ಜೊತೆಗೆ, ತಂಡದಲ್ಲಿ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ಅಭಿಮನ್ಯು ಈಶ್ವರನ್ ಇದ್ದಾರೆ. ಇದಲ್ಲದೇ ತಂಡದಲ್ಲಿ ಕೆಎಸ್ ಭರತ್ ಮತ್ತು ಕೆಎಲ್ ರಾಹುಲ್ ವಿಕೆಟ್ ಕೀಪರ್’ಗಳಾಗಿದ್ದಾರೆ. ಈ ಇಬ್ಬರಲ್ಲಿ ಒಬ್ಬರು ಮಾತ್ರ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯುತ್ತಾರೆ.


ಮೊದಲ ಟೆಸ್ಟ್‌’ನಲ್ಲಿ ಭಾರತದ ಪ್ಲೇಯಿಂಗ್ 11 ಬಗ್ಗೆ ಮಾತನಾಡುವುದಾದರೆ, ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಇನ್ನಿಂಗ್ಸ್ ತೆರೆದರೆ, ಶುಭ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಾಗುತ್ತದೆ. ಆಗ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಕ್ರಮವಾಗಿ 4, 5ನೇ ಕ್ರಮಾಂಕದಲ್ಲಿ ಆಡುತ್ತಾರೆ. ಕೆಎಲ್ ರಾಹುಲ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್’ಗೆ ಬಂದರೆ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅಂತಿಮ ಕ್ರಮದಲ್ಲಿ ಕಣಕ್ಕಿಳಿಯುತ್ತಾರೆ. ಇನ್ನು ವೇಗದ ಬೌಲಿಂಗ್‌’ನಲ್ಲಿ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಶಾರ್ದೂಲ್ ಠಾಕೂರ್ ಕಮಾಲ್ ಮಾಡುವ ಸಾಧ್ಯತೆ ಇದೆ.


ಇದನ್ನೂ ಓದಿ:  “12 ವರ್ಷಗಳ ವೃತ್ತಿಜೀವನಕ್ಕೆ ಇದೇ ಮೈದಾನ ಕೊನೆ…”- 36 ಹರೆಯದ ಟೆಸ್ಟ್ ಸ್ಪೆಷಲಿಸ್ಟ್ ಕ್ರಿಕೆಟ್’ಗೆ ನಿವೃತ್ತಿ ಘೋಷಣೆ


ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11:


ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.