India vs South Africa Test: T20 ಪಂದ್ಯದಲ್ಲಿ ಡ್ರಾ ಆದ ಬಳಿಕ, ಕೆಎಲ್ ರಾಹುಲ್ ನಾಯಕತ್ವದ ಮೆನ್ ಇನ್ ಬ್ಲೂ, ಡಿಸೆಂಬರ್ 21 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಗಮನಾರ್ಹ 2-1 ಸರಣಿ ವಿಜಯವನ್ನು ಸಾಧಿಸಿತು. ಈ ಮೂಲಕ ರಾಹುಲ್, ದಕ್ಷಿಣ ಆಫ್ರಿಕಾದಲ್ಲಿ ODI ಸರಣಿ ಗೆದ್ದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಮೃತಕ್ಕೆ ಸಮ ಕಲ್ಲಂಗಡಿ ಜ್ಯೂಸ್: ವಾರಕ್ಕೊಂದು ಗ್ಲಾಸ್ ಕುಡಿದರೆ ಈ 5 ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡುತ್ತೆ


ಏಕದಿನ ಸರಣಿ ಬಳಿಕ, ಭಾರತೀಯ ಕ್ರಿಕೆಟ್ ತಂಡವು ಇದೀಗ ಪ್ರೋಟೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ. ಈ ಪಂದ್ಯ ನಾಳೆಯಿಂದ ಅಂದರೆ, ಡಿಸೆಂಬರ್ 26 ರಂದು ಆರಂಭವಾಗುತ್ತಿದೆ.


ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ಈ ಎರಡು ಪಂದ್ಯಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ನೆಲದಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಸರಣಿ ಗೆಲ್ಲಲು ಉತ್ಸುಕರಾಗಿದ್ದಾರೆ. ಟೆಸ್ಟ್ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಸಾಂಪ್ರದಾಯಿಕವಾಗಿ ತವರಿನಲ್ಲಿ ಪ್ರಾಬಲ್ಯ ಹೊಂದಿದೆ. ಆದರೆ ಈ ಬಾರಿ ಟೀಂ ಇಂಡಿಯಾ ಅದ್ಭುತವಾಗಿ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಇತಿಹಾಸ ಸೃಷ್ಟಿಯಾಗುವ ಎಲ್ಲಾ ಸಾಧ್ಯತೆಗಳಿವೆ.


ಇನ್ನು ದಕ್ಷಿಣ ಆಫ್ರಿಕಾದಲ್ಲಿ ಭಾರತದ ಟೆಸ್ಟ್ ದಾಖಲೆ ತೀರಾ ಕಳಪೆಯಾಗಿದೆ. ಇದುವರೆಗೆ ಕೇವಲ ಮೂವರು ಭಾರತೀಯ ನಾಯಕರು ಮಾತ್ರ ಈ ನೆಲದಲ್ಲಿ ಗೆಲುವು ದಾಖಲಿಸಲು ಸಾಧ್ಯವಾಗಿದೆ. ಅವರು ಯಾರೆಂದರೆ, ರಾಹುಲ್ ದ್ರಾವಿಡ್, ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ.


ಇದನ್ನೂ ಓದಿ: ಜಿರಳೆಗೂ ‘ಬಂಗಾರದ ಬೆಲೆ’... ಈ ಮಾರ್ಕೆಟ್’ನಲ್ಲಿ ಜಿರಳೆ ಮಾರಿದ್ರೆ ಸಿಗುತ್ತೆ ಲಕ್ಷ ಲಕ್ಷ ದುಡ್ಡು!


ಭಾರತ ತಂಡವು ದಕ್ಷಿಣ ಆಫ್ರಿಕಾ ನೆಲದಲ್ಲಿ 23 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ಕೇವಲ ನಾಲ್ಕರಲ್ಲಿ ಮಾತ್ರ ಗೆದ್ದಿರುವ ಭಾರತ, 12 ಪಂದ್ಯಗಳಲ್ಲಿ ತಂಡ ಸೋಲು ಕಂಡಿದ್ದು, 7 ಪಂದ್ಯಗಳು ಡ್ರಾ ಆಗಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.