ದಕ್ಷಿಣ ಆಫ್ರಿಕಾದ ವಿರುದ್ಧ ಭಾರತಕ್ಕೆ 3-0 ಅಂತರದಲ್ಲಿ ಟೆಸ್ಟ್ ಸರಣಿ ವಶ
ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಭಾರತ ತಂಡ ಗೆಲುವು ಸಾಧಿಸುವ ಮೂಲಕ 3-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿತು.
ನವದೆಹಲಿ: ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಭಾರತ ತಂಡ ಗೆಲುವು ಸಾಧಿಸುವ ಮೂಲಕ 3-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ವಶಪಡಿಸಿಕೊಂಡಿತು.
ಭಾರತ ತಂಡ ನೀಡಿದ 497/9 ಕ್ಕೆ ಪ್ರತಿಯಾಗಿ ಬ್ಯಾಟಿಂಗ್ ಆರಂಭಿಸಿದ್ದ ದಕ್ಷಿಣ ಆಫ್ರಿಕಾ ತಂಡ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ ಎರಡು ಇನಿಂಗ್ಸ್ ನಲ್ಲಿ ಕ್ರಮವಾಗಿ 162 ಮತ್ತು 133 ರನ್‌ಗಳಿಗೆ ಆಲೌಟ್ ಆಗಿತ್ತು. ಈಗ ಭಾರತ ತಂಡವು 3-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನಲ್ಲಿ 240 ಅಂಕಗಳೊಂದಿದೆ ಅಗ್ರಸ್ತಾನದಲ್ಲಿದೆ.
ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಭಾರತ ತಂಡಕ್ಕೆ ಕಗಿಸೊ ರಬಾಡಾ ಮತ್ತು ಅನ್ರಿಚ್ ನಾರ್ಟ್ಜೆ 39/3 ಕ್ಕೆ ವಿಕೆಟ್ ಕಬಳಿಸುವ ಮೂಲಕ ಆಘಾತ ನೀಡಿದ್ದರು. ಆದರೆ ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಮತ್ತು ಅಜಿಂಕ್ಯ ರಹಾನೆ ಅವರ 267 ರನ್‌ಗಳ ಜೊತೆಯಾಟ ಪಂದ್ಯದ ಚಿತ್ರಣವನ್ನೇ ಬದಲಿಸಿತು. ವಿಶೇಷವೆಂದರೆ ಈ ರೋಹಿತ್ ಶರ್ಮಾ ಈ ಟೆಸ್ಟ್ ಪಂದ್ಯದಲ್ಲಿ ತಮ್ಮ ಮೊದಲನೇ ದ್ವಿಶತಕವನ್ನು ಗಳಿಸುವ ಮೂಲಕ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ನಲ್ಲಿ ದ್ವಿಶತಕಗಳಿಸಿದ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾದರು.
ಸರಣಿಯಲ್ಲಿ ಆರಂಭಿಕ ಆಟಗಾರನಾಗಿ ಬಡ್ತಿ ಪಡೆದ ರೋಹಿತ್ ಶರ್ಮಾ ಅದ್ಬುತ ಪ್ರದರ್ಶನ ನೀಡಿದರು. ಮೂರು ಟೆಸ್ಟ್ ಪಂದ್ಯದಲ್ಲಿ ಅವರು 529 ರನ್ ಗಳಿಸುವ ಮೂಲಕ ಅಗ್ರಸ್ಕೊರರ್ ಆಗಿ ಹೊರಹೊಮ್ಮಿದರು. ಇನ್ನೊಂದೆಡೆ ಅಜಿಂಕ್ಯಾ ರಹಾನೆ ಮೂರನೇ ಟೆಸ್ಟ್ ಪಂದ್ಯದಲ್ಲಿ 11ನೇ ಟೆಸ್ಟ್ ಗಳಿಸಿದರು.