ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ನಲ್ಲಿ ಶ್ರೀಲಂಕಾ ತಂಡದ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ನಾಲ್ಕು ವಿಕೆಟ್ ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಶ್ರೀಲಂಕಾ ತಂಡವು ಭಾರತದ ಬೌಲಿಂಗ್ ದಾಳಿಗೆ ಸಿಲುಕಿ ತತ್ತರಿಸಿತು.ಕೇವಲ 39.4 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 215 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಯಿತು.ಭಾರತದ ಪರವಾಗಿ ಸಿರಾಜ್ ಹಾಗೂ ಕುಲದೀಪ್ ತಲಾ ಮೂರು ವಿಕೆಟ್ ಗಳನ್ನು ಕಬಳಿಸುವ ಮೂಲಕ ಲಂಕಾ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.
ಶ್ರೀಲಂಕಾ ತಂಡವು ನೀಡಿದ 216 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಒಂದು ಹಂತದಲ್ಲಿ 84 ರನ್ ಗಳಿಗೆ ನಾಲ್ಕು ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು, ಈ ಹಂತದಲ್ಲಿ ಕನ್ನಡಿಗ ರಾಹುಲ್ ತಮ್ಮ ತಾಳ್ಮೆಯ ಆಟದಿಂದ ತಂಡವನ್ನು ಗೆಲುವಿನ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.103 ಎಸೆತಗಳನ್ನು ಎದುರಿಸಿದ ಅವರು ಆರು ಬೌಂಡರಿ ಗಳ ನೆರವಿನೊಂದಿಗೆ 64 ಗಳನ್ನು ಗಳಿಸಿ ಅಜೇಯರಾಗಿ ಉಳಿದರು.
A victory by 4️⃣ wickets for #TeamIndia in the second #INDvSL ODI here in Kolkata and the series is sealed 2️⃣-0️⃣ 👏👏
Scorecard ▶️ https://t.co/jm3ulz5Yr1 @mastercardindia pic.twitter.com/f8HvDZRJIY
— BCCI (@BCCI) January 12, 2023
ಇನ್ನೊಂದೆಡೆಗೆ ಹಾರ್ದಿಕ್ ಪಾಂಡ್ಯ ಕೂಡ 53 ಎಸೆತಗಳಲ್ಲಿ 36 ಗಳಿಸುವ ಮೂಲಕ ತಂಡದ ಗೆಲುವಿಗೆ ನೆರವಾದರು.ಅಂತಿಮವಾಗಿ ಟೀಮ್ ಇಂಡಿಯಾ ಆರು ವಿಕೆಟ್ ಗಳನ್ನು ಕಳೆದುಕೊಂಡು 43.2 ಓವರಗಳಲ್ಲಿ 219 ರನ್ ಗಳನ್ನು ಗಳಿಸುವ ಮೂಲಕ ತಂಡವು ಗೆಲುವು ಸಾಧಿಸಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.