IND vs WI, 5th T20: ಇಂದು ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಐದು ಪಂದ್ಯಗಳ T20 ಅಂತಾರಾಷ್ಟ್ರೀಯ ಸರಣಿಯ ಕೊನೆಯ ಮತ್ತು ನಿರ್ಣಾಯಕ ಪಂದ್ಯ ನಡೆಯಲಿದೆ. ಕೊನೆಯ ಮತ್ತು ನಿರ್ಣಾಯಕ T20 ಪಂದ್ಯ ಇಂದು ರಾತ್ರಿ 8 ಗಂಟೆಗೆ ಅಮೇರಿಕಾದ ಫ್ಲೋರಿಡಾದ ಲಾಡರ್‌ಹಿಲ್‌’ನಲ್ಲಿ ಪ್ರಾರಂಭವಾಗಲಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರೋಹಿತ್ ಶರ್ಮಾ ಹೆಸರಿನಲ್ಲಿದ್ದ 14 ವರ್ಷ ಹಳೆಯ ದಾಖಲೆ ಇನ್ಮುಂದೆ ಜೈಸ್ವಾಲ್ ತೆಕ್ಕೆಗೆ!


ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಐದು ಪಂದ್ಯಗಳ ಟಿ20 ಅಂತಾರಾಷ್ಟ್ರೀಯ ಸರಣಿಯು ಪ್ರಸ್ತುತ 2-2 ರಲ್ಲಿ ಸಮಬಲವಾಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯವನ್ನು ಯಾವ ತಂಡ ಗೆಲ್ಲುತ್ತದೆಯೋ ಅದು ಸರಣಿ ಕೈವಶ ಮಾಡಿಕೊಳ್ಳುತ್ತದೆ. ಹೀಗಿರುವಾಗ ಕೊನೆಯ ಮತ್ತು ನಿರ್ಣಾಯಕ ಟಿ20 ಪಂದ್ಯಕ್ಕಾಗಿ ಪ್ಲೇಯಿಂಗ್ 11ನಲ್ಲಿ ಬಹುದೊಡ್ಡ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಇದೆ.


ಆರಂಭಿಕ ಬ್ಯಾಟ್ಸ್‌ಮನ್:


ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮತ್ತು ನಿರ್ಣಾಯಕ ಟಿ20 ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಓಪನಿಂಗ್ ಮಾಡಲಿದ್ದಾರೆ. ಈ ಪಂದ್ಯದಲ್ಲಿ ಶುಭಮನ್ ಗಿಲ್‌’ಗೆ ವಿಶ್ರಾಂತಿ ನೀಡಬಹುದು. ಶನಿವಾರ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 84 ರನ್ ಗಳಿಸುವ ಮೂಲಕ ಯಶಸ್ವಿ ಜೈಸ್ವಾಲ್ ಭಾರತಕ್ಕೆ ಗೆಲುವು ತಂದುಕೊಟ್ಟರು. ಯಶಸ್ವಿ ಜೈಸ್ವಾಲ್ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಪಡೆದರು.


ಮಧ್ಯಮ ಕ್ರಮಾಂಕ:


ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮತ್ತು ನಿರ್ಣಾಯಕ ಟಿ20 ಪಂದ್ಯದಲ್ಲಿ ಉಪನಾಯಕ ಸೂರ್ಯಕುಮಾರ್ ಯಾದವ್ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌’ಗೆ ಬರಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮತ್ತು ನಿರ್ಣಾಯಕ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ 4 ನೇ ಬ್ಯಾಟ್ಸ್‌ಮನ್ ಆಗಿ ಅವಕಾಶ ಪಡೆಯುತ್ತಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ 5ನೇ ಕ್ರಮಾಂಕದಲ್ಲಿ ಅವಕಾಶ ಪಡೆಯಲಿದ್ದಾರೆ.


ಆಲ್ ರೌಂಡರ್‌ಗಳು:


ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮತ್ತು ನಿರ್ಣಾಯಕ ಟಿ20 ಪಂದ್ಯದಲ್ಲಿ ನಾಯಕ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಗಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. 7ನೇ ಕ್ರಮಾಂಕದ ಬ್ಯಾಟಿಂಗ್ ಸ್ಥಾನದಲ್ಲಿ ಅಕ್ಷರ್ ಪಟೇಲ್‌ಗೆ ಅವಕಾಶ ನೀಡಲಾಗುವುದು. ಅಕ್ಷರ್ ಪಟೇಲ್ ಸ್ಪಿನ್ ಬೌಲಿಂಗ್‌ನೊಂದಿಗೆ ಟೀಂ ಇಂಡಿಯಾವನ್ನು ಬ್ಯಾಟಿಂಗ್‌ನಲ್ಲಿ ಬಲಪಡಿಸಲಿದ್ದಾರೆ.


ಸ್ಪಿನ್ ಬೌಲಿಂಗ್ ವಿಭಾಗ:


ರವಿ ಬಿಷ್ಣೋಯ್ ಮತ್ತು ಕುಲದೀಪ್ ಯಾದವ್ ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಸೇರ್ಪಡೆಯಾಗಲಿದ್ದಾರೆ. ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಮತ್ತು ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ನಾಲ್ಕನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್‌’ಗೆ ಬೆದರಿಕೆಯನ್ನು ತಂದೊಡ್ಡುವುದು ಖಚಿತ. ಇನ್ನು ಯುಜ್ವೇಂದ್ರ ಚಹಾಲ್ ಅವರನ್ನು ಕೈಬಿಡಬಹುದು.


ವೇಗದ ಬೌಲಿಂಗ್ ವಿಭಾಗ:


ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಮತ್ತು ನಿರ್ಣಾಯಕ ಟಿ20 ಪಂದ್ಯದಲ್ಲಿ ವೇಗದ ಬೌಲರ್‌ಗಳಾದ ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್‌ಗೆ ನಾಯಕ ಹಾರ್ದಿಕ್ ಪಾಂಡ್ಯ ಅವಕಾಶ ನೀಡಲಿದ್ದಾರೆ. ಮುಖೇಶ್ ಕುಮಾರ್ ಅವರಿಗೆ ವಿಶ್ರಾಂತಿ ನೀಡಬಹುದು.


ಇದನ್ನೂ ಓದಿ: ODI ಕ್ರಿಕೆಟ್’ನಲ್ಲಿ ಇದುವರೆಗೆ ಒಂದೇ ಒಂದು ಬಾರಿಯೂ ಔಟ್ ಆಗದ ಭಾರತೀಯ ಕ್ರಿಕೆಟಿಗ ಯಾರು?


5ನೇ T20 ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ:


ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ಉಪನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್ ಮತ್ತು ಅವೇಶ್ ಖಾನ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.