ನವದೆಹಲಿ: ಅಹಮದಾಬಾದ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ಆರು ವಿಕೆಟ್ ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.
India delivered the goods in their ODI series opener against West Indies to go 1-0 up 💪 #INDvWI report 👇 https://t.co/HoWhvffNTA
— ICC (@ICC) February 6, 2022
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡವು ವೆಸ್ಟ್ ಇಂಡೀಸ್ ತಂಡವನ್ನು 43.5 ಓವರ್ ಗಳಲ್ಲಿ ಕೇವಲ 176 ರನ್ ಗಳಿಗೆ ಕಟ್ಟಿ ಹಾಕಿತು.ವೆಸ್ಟ್ ಇಂಡೀಸ್ ತಂಡದ ಪರವಾಗಿ ಹೋಲ್ಡರ್ 57 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಆಟಗಾರನು ಕೂಡ 30 ಗಡಿ ದಾಟುವಲ್ಲಿ ವಿಫಲರಾದರು.
ಭಾರತದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆದ ಚಹಾಲ್, ಹಾಗೂ ವಾಷಿಂಗ್ಟನ್ ಸುಂದರ್ ಕ್ರಮವಾಗಿ ನಾಲ್ಕು ಹಾಗೂ ಮೂರು ವಿಕೆಟ್ ಗಳನ್ನು ಪಡೆಯುವ ಮೂಲಕ ವೆಸ್ಟ್ ಇಂಡೀಸ್ ತಂಡದ ಬ್ಯಾಟಿಂಗ್ ಪಡೆಯನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.
A sparkling performance from India in their 1⃣0⃣0⃣0⃣th ODI 💥
They win the first match against West Indies by six wickets, taking a 1-0 series lead 👏#INDvWI | https://t.co/Bf4Z5gkR7N pic.twitter.com/0ExjX2tdTS
— ICC (@ICC) February 6, 2022
177 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 60 ಹಾಗೂ ಇಶಾನ್ ಕಿಶನ್ ಅವರ 28 ರನ್ ಗಳ ನೆರವಿನಿಂದ ಮೊದಲ ವಿಕೆಟ್ ಗೆ 84 ರನ್ ಗಳ ಜೊತೆಯಾಟವನ್ನು ಆಡಿದರು.ಕೊನೆಯಲ್ಲಿ ಸುರ್ಯಕುಮಾರ್ ಯಾದವ್ 34 ಹಾಗೂ ದೀಪಕ್ ಹೂಡಾ ಅವರ 26 ರನ್ ಗಳ ನೆರವಿನಿಂದ ಭಾರತ ತಂಡವು 28 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿ ಗೆಲುವಿನ ದಡವನ್ನು ಸೇರಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.