India won the test series against WI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಕೊನೆಯ ದಿನದಂದು, ಮಳೆಯಿಂದಾಗಿ ಒಂದೇ ಒಂದು ಚೆಂಡು ಎಸೆಯಲಾಗಲಿಲ್ಲ, ಇದರಿಂದಾಗಿ ಈ ಪಂದ್ಯವು ಫಲಿತಾಂಶವಿಲ್ಲದೆ ಡ್ರಾದಲ್ಲಿ ಕೊನೆಗೊಂಡಿತು. ಇದರೊಂದಿಗೆ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಸತತ ಒಂಬತ್ತನೇ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದೆ. ಭಾರತದ ಸರಣಿಯ ಮೊದಲ ಪಂದ್ಯದಲ್ಲಿ ವಿಂಡೀಸ್ ಇನಿಂಗ್ಸ್ ಮತ್ತು 141 ರನ್‌ಗಳ ಬೃಹತ್ ಅಂತರದಿಂದ ಸೋತಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Arecanut today price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ನೋಡಿ


ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ, ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ವೇಗದ ಬ್ಯಾಟಿಂಗ್ ಮಾಡುವಾಗ ಅದ್ಭುತ ಶತಕಗಳನ್ನು ಗಳಿಸಿದರು. ಅದರ ಆಧಾರದ ಮೇಲೆ ಟೀಮ್ ಇಂಡಿಯಾಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ ಗಳಲ್ಲಿ ಇಬ್ಬರೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಪ್ರಮುಖ ರನ್ ಸೇರಿಸಿದರು. ರೋಹಿತ್ 80 ಮತ್ತು 57 ರನ್ ಗಳಿಸಿ ಎರಡು ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಗಳಿಸಿದರೆ, ಜೈಸ್ವಾಲ್ ಬ್ಯಾಟಿಂಗ್‌ನಿಂದ 57 ಮತ್ತು 38 ರನ್ ಗಳಿಸಿದರು.


ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಈ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಭುತ ಶತಕವನ್ನು ಬಾರಿಸಿದರು. 206 ಎಸೆತಗಳಲ್ಲಿ 121 ರನ್‌ ಗಳ ಅಮೋಘ ಇನ್ನಿಂಗ್ಸ್‌ ಆಡಿ ತಂಡವನ್ನು ದೊಡ್ಡ ಸ್ಕೋರ್‌’ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಇನ್ನಿಂಗ್ಸ್‌ನಲ್ಲಿ ಅವರು 11 ಬೌಂಡರಿಗಳನ್ನು ಸಹ ಹೊಡೆದರು. ಇದು ವಿರಾಟ್ ಅವರ ಅಂತಾರಾಷ್ಟ್ರೀಯ ವೃತ್ತಿ ಜೀವನದಲ್ಲಿ 76ನೇ ಶತಕವಾಗಿದೆ. ಸಚಿನ್ ತೆಂಡೂಲ್ಕರ್ ನಂತರ ವಿಶ್ವದ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಎರಡನೇ ಬ್ಯಾಟ್ಸ್‌ಮನ್.


ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 483 ರನ್‌ಗಳ ದೊಡ್ಡ ಸ್ಕೋರ್ ಮಾಡಿತ್ತು. ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಗಳು 255 ರನ್ ಗಳಿಗೆ ಆಲೌಟ್ ಆದರು. ಇದರಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಪ್ರಮುಖ ಪಾತ್ರ ವಹಿಸಿದ್ದು, 5 ವಿಕೆಟ್ ಪಡೆದರು. ಇದಕ್ಕಾಗಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ಪಡೆದರು. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದ್ದು, ವಿಂಡೀಸ್ ತಂಡದ ಗೆಲುವಿಗೆ 365 ರನ್‌ಗಳ ಗುರಿ ನೀಡಿತು. ನಾಲ್ಕನೇ ದಿನದಾಟದ ಅಂತ್ಯಕ್ಕೆ ವೆಸ್ಟ್ ಇಂಡೀಸ್ 2 ವಿಕೆಟ್ ಕಳೆದುಕೊಂಡು 76 ರನ್ ಗಳಿಸಿತ್ತು, ಆದರೆ ಮಳೆಯಿಂದಾಗಿ ಐದನೇ ದಿನ ಪಂದ್ಯವನ್ನು ಪ್ರಾರಂಭಿಸಲಾಗಲಿಲ್ಲ, ಇದರಿಂದಾಗಿ ಫಲಿತಾಂಶ ಡ್ರಾ ಆಗಿತ್ತು.


ಇದನ್ನೂ ಓದಿ: ತನ್ನ ಪ್ರಚಾರಕ್ಕೆ ಜನರ ಬೆವರಿನ ಹಣ ಬಳಸುವ ಮೋದಿಗೆ ಪ್ರಧಾನಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ?: ಕಾಂಗ್ರೆಸ್


ವೆಸ್ಟ್ ಇಂಡೀಸ್ ವಿರುದ್ಧ ಆಡಿರುವ 9 ಟೆಸ್ಟ್ ಸರಣಿಗಳಲ್ಲಿ ಟೀಂ ಇಂಡಿಯಾ ಅಜೇಯವಾಗಿದೆ. ಒಂದೇ ಒಂದು ಪಂದ್ಯವನ್ನೂ ಸೋತಿಲ್ಲ. ಇದು ಭಾರತ ತಂಡದ ದೊಡ್ಡ ಸಾಧನೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಈ ಆವೃತ್ತಿಯ ದೃಷ್ಟಿಯಿಂದ ಭಾರತ ತಂಡಕ್ಕೆ ಇದು ಉತ್ತಮ ಆರಂಭವಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.