ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲಲಿದೆ: ವೀರೇಂದ್ರ ಸೆಹ್ವಾಗ್

 ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲುಲಿದೆ ಎಂದು ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್​​​ಮನ್​​ ವಿರೇಂದ್ರ ಸೆಹ್ವಾಗ್​​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  

Last Updated : Jun 15, 2019, 10:06 AM IST
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲಲಿದೆ: ವೀರೇಂದ್ರ ಸೆಹ್ವಾಗ್

ನವದೆಹಲಿ: ಐಸಿಸಿ ವಿಶ್ವಕಪ್'ನಲ್ಲಿ ಬಲಿಷ್ಠ ತಂಡಗಳೆಂದೇ ಹೇಳಲಾಗುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾನುವಾರ ಮ್ಯಾಂಚೆಸ್ಟರ್'ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಗೆದ್ದೇ ಗೆಲ್ಲುಲಿದೆ ಎಂದು ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್​​​ಮನ್​​ ವಿರೇಂದ್ರ ಸೆಹ್ವಾಗ್​​ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಮಾಜಿ ಆಟಗಾರ ಶೋಯೆಬ್ ಅಖ್ತರ್ ಅವರೊಂದಿಗೆ ಯುಟ್ಯೂಬ್ ಚಾನೆಲ್‌ನಲ್ಲಿ ವೀಡಿಯೊ ಚಾಟ್ ಮಾಡುವಾಗ, "ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಟಾಸ್‌ನಿಂದ ಹಿಡಿದು ಆಟದ ಪರಿಸ್ಥಿತಿಗಳು ಇತ್ಯಾದಿಗಳನ್ನು ಪರಿಗಣಿಸಿದ ಬಳಿಕವೂ ನೀವು ಯಾವ ತಂಡವನ್ನು ಬೆಂಬಲಿಸುತ್ತೀರಿ?" ಎಂದು ಶೋಯಬ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೆಹ್ವಾಗ್, "ಏನೇ ಆದರೂ ಪಾಕಿಸ್ತಾನ ಭಾರತವನ್ನು ಸೋಲಿಸಲು ಸಾಧ್ಯವಾಗುತ್ತದೆ ಎಂದು ನಾನು ನಂಬುವುದಿಲ್ಲ" ಎಂದು ಹೇಳಿದ್ದಾರೆ.

ಆದರೆ ಸೆಹ್ವಾಗ್ ಹೇಳಿಕೆಯ ಬಳಿಕ ಶೋಯೆಬ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, "ಒಂದು ವೇಳೆ ಪಾಕಿಸ್ತಾನ ಟಾಸ್ ಗೆದ್ದರೆ ಅವರೇ ಗೆಲ್ಲಬೇಕು ಎಂದು ನಾನು ಭಾವಿಸುತ್ತೇನೆ" ಎಂದಿದ್ದಾರೆ

ಐಸಿಸಿ ಚಾಂಪಿಯನ್​ ಟ್ರೋಫಿಯಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ಎದುರು ಸೋಲನುಭವಿಸಿತ್ತು. ಅದಕ್ಕೆ ನಾಳೆ ನಡೆಯಲಿರುವ ಪಂದ್ಯದಲ್ಲಿ ತಿರುಗೇಟು ನೀಡಲು ಕೊಹ್ಲಿ ಪಡೆ ಸಿದ್ಧವಾಗಿದೆ. 

More Stories

Trending News