ನವದೆಹಲಿ: ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ತಂಡವು ಆಷ್ಟ್ರೇಲಿಯಾ ವಿರುದ್ದ ಏಳು ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಇದೇ ಮೊದಲ ಬಾರಿಗೆ ಐತಿಹಾಸಿಕ ಸರಣಿಯನ್ನು ವಶಪಡಿಸಿಕೊಂಡಿದೆ. 


COMMERCIAL BREAK
SCROLL TO CONTINUE READING

ಮೊದಲ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ್ದ ಭಾರತ ತಂಡವು ನಂತರ ಫಿನಿಕ್ಸ್ ನಂತೆ ಎರಡು ಮತ್ತು ಮೂರನೇ ಪಂದ್ಯವನ್ನು ಗೆಲ್ಲುವ ಮೂಲಕ ಐತಿಹಾಸಿಕ ಸರಣಿ ಗೆಲುವು ಸಾಧಿಸಿತು.ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡು ಭಾರತವು ಯಜುವೆಂದ್ರ ಚಹಾಲ್ ಅವರ ಮಾರಕ ದಾಳಿಯಿಂದ ಆಸ್ಟ್ರೇಲಿಯಾ ತಂಡವನ್ನು ಬೇಗನೆ ಕಟ್ಟಿಹಾಕಿದರು. ಆಸಿಸ್ ತಂಡದ ಆರು ಪ್ರಮುಖ ವಿಕೆಟ್ ಗಳನ್ನು ಕಬಳಿಸುವ ಮೂಲಕ ಯಶಸ್ವಿ ಬೌಲರ್ ಎನಿಸಿಕೊಂಡರು.ಆಸಿಸ್ ತಂಡವು 48.4 ಓವರ್ ಗಳಲ್ಲಿ 230 ರನ್ ಗಳನ್ನು ಗಳಿಸಿತು.



ಇದಕ್ಕೆ ಉತ್ತರವಾಗಿ ಗುರಿಯನ್ನು ಬೆನ್ನತ್ತಿದ್ದ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಇನ್ನು ನಾಲ್ಕು ಎಸೆತಗಳು ಬಾಕಿ ಇರುವಂತೆ ಗೆಲುವನ್ನು ಸಾಧಿಸಿತು. ಭಾರತದ ಪರ ಭರ್ಜರಿ ಬ್ಯಾಟಿಂಗ್ ಮಾಡಿದ ಮಹೇಂದ್ರ ಸಿಂಗ್ ಧೋನಿ ಅಜೇಯ 87 ರನ್ ಗಳಿಸಿದರು.ಆ ಮೂಲಕ ಈ ಸರಣಿಯಲ್ಲಿ ಸತತ ಹ್ಯಾಟ್ರಿಕ್ ಅರ್ಧಶತಕವನ್ನು ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.