58 ವರ್ಷಗಳ ಬಳಿಕ ಜಾವಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ!

ನೀರಜ್ ಚೋಪ್ರಾ ಚಿನ್ನದ ಪದಕ ಗಳಿಸುವ ಮೂಲಕ ಭಾರತಕ್ಕೆ ಜಾವಲಿನ್ ಎಸೆತದಲ್ಲಿ ಮೊದಲ ಬಾರಿಗೆ ಚಿನ್ನದ ಪದಕ ತಂದುಕೊಟ್ಟ ಕೀರ್ತಿಗೆ ಪಾತ್ರರಾಗಿದ್ದಾರೆ. 

Last Updated : Apr 14, 2018, 12:24 PM IST
58 ವರ್ಷಗಳ ಬಳಿಕ ಜಾವಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ! title=

ಗೋಲ್ಡ್ ಕೋಸ್ಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಜಾವಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗಳಿಸುವ ಮೂಲಕ ಭಾರತಕ್ಕೆ ಮೊದಲ ಬಾರಿಗೆ ಚಿನ್ನದ ಪದಕ ತಂದುಕೊಟ್ಟ ಕೀರ್ತಿಗೆ ಪಾತ್ರರಾಗಿದ್ದಾರೆ. 

ಹರಿಯಾಣದ ಪಾಣಿಪಟ್'ನ ಖಂದ್ರ ಗ್ರಾಮದ 20 ವರ್ಷದ ನೀರಜ್ ಚೋಪ್ರಾ ಜಾವಲಿನ್ ಎಸೆತದಲ್ಲಿ 86.47ಮೀಟರ್ ದೂರ ಎಸೆಯುವ ಮೂಲಕ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗಳಿಸಿದರು. 

58 ವರ್ಷಗಳ ನಂತರ ನೀರಜ್​ ಜಾವಲಿನ್ ಎಸೆತದಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟು, ನೀರಜ್​ ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.  ಈ ಹಿಂದೆ ಮಿಲ್ಖಾ ಸಿಂಗ್​ ಅವರು ಅಥ್ಲೆಟಿಕ್ಸ್​ನಲ್ಲಿ ಚಿನ್ನದ ಪದಕ ಜಯಿಸಿದ್ದರು.

Trending News