India vs Bangladesh : ಬಾಂಗ್ಲಾದೇಶವನ್ನು ಸೋಲಿಸುವ ಮೂಲಕ ಭಾರತ ತಂಡ ಅಂಧರ ಕ್ರಿಕೆಟ್‌ನ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಈ ಪಂದ್ಯದಲ್ಲಿ ಭಾರತ ತಂಡ 120 ರನ್‌ಗಳ ಜಯ ಸಾಧಿಸಿದೆ. ಟೀಂ ಇಂಡಿಯಾ ಮೂರನೇ ಬಾರಿ ವಿಶ್ವಕಪ್ ಟ್ರೋಫಿ ವಶಪಡಿಸಿಕೊಂಡಿದೆ. ಇದರೊಂದಿಗೆ ಟೀಂ ಇಂಡಿಯಾ 2012ರಲ್ಲಿ ಹಾಗೂ 2017ರಲ್ಲಿ ಪ್ರಶಸ್ತಿ ಗೆದ್ದುಕೊಂಡಿತ್ತು.
ಟೀಂ ಇಂಡಿಯಾ ಮುಡಿಗೆ ಪ್ರಶಸ್ತಿ
ಮೊದಲು ಬ್ಯಾಟ್ ಮಾಡಿದ ಭಾರತ ತಂಡ 2 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡ 3 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ಆಟಗಾರರು ಉತ್ತಮ ಆಟ ಪ್ರದರ್ಶಿಸಿದರು. ಭಾರತ ತಂಡದ ಪರ ಸುನಿಲ್ ರಮೇಶ್ ಮತ್ತು ಅಜಯ್ ಕುಮಾರ್ ರೆಡ್ಡಿ ಬಿರುಸಿನ ಶತಕ ಬಾರಿಸಿದರು. ಅವರಿಂದಲೇ ಟೀಂ ಇಂಡಿಯಾ ದೊಡ್ಡ ಮೊತ್ತ ತಲುಪಲು ಸಾಧ್ಯವಾಯಿತು. ಸುನಿಲ್ ರಮೇಶ್ 136 ರನ್ ಮತ್ತು ಅಜಯ್ ಕುಮಾರ್ 50 ಎಸೆತಗಳಲ್ಲಿ 100 ರನ್ ಗಳಿಸಿದರು. ಅವರ ಅದ್ಭುತ ಇನ್ನಿಂಗ್ಸ್‌ಗಾಗಿ ಸುನೀಲ್ ರಮೇಶ್‌ಗೆ ‘ಪಂದ್ಯ ಶ್ರೇಷ್ಠ’ ಪ್ರಶಸ್ತಿ ನೀಡಲಾಯಿತು.
Congrats to the finalists of 3rd T20 World Cup Cricket for Blind 2022. Ur passion for the sport is unmatched. Win or lose, continue to give ur best! Can’t wait to watch & cheer for India tomorrow! Let’s watch it live on DD sports 11AM onwards #INDvBAN #BlindCricket #WorldCup2022 pic.twitter.com/Hnn0gwNDzc
— Yuvraj Singh (@YUVSTRONG12) December 16, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.