India vs Pakistan T20 world cup 2022: ಇಂದು ಮೆಲ್ಬರ್ನ್ ನ ಎಂಸಿಜಿ ಮೈದಾನದಲ್ಲಿ ಸಾಂಪ್ರದಾಯಿಕ ಬದ್ಧವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಕಾದಾಟ ನಡೆಸಲಿದೆ. ಇನ್ನು ಕಳೆದ ಏಷ್ಯಾಕಪ್ ಪಂದ್ಯದಲ್ಲಿ ಪಾಕ್ ವಿರುದ್ಧ ಸೋಲು ಕಂಡಿದ್ದ ಟೀಂ ಇಂಡಿಯಾ, ಇದೀಗ ಸೇಡು ತೀರಿಸಲು ಕಾತುರದಿಂದ ಕಾಯುತ್ತಿದೆ.


ಇದನ್ನೂ ಓದಿ: IND vs PAK: ಇಂಡೋ-ಪಾಕ್ ಹೈವೋಲ್ಟೇಜ್ ಪಂದ್ಯ: ನೇರಪ್ರಸಾರ ವೀಕ್ಷಿಸಲು ಇಲ್ಲಿದೆ ಸುಲಭ ಉಪಾಯ


ಇದೀಗ ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ. ಮೆಲ್ಬೋರ್ನ್‌ನ ಎಂಸಿಜಿ ಮೈದಾನದಲ್ಲಿ ಈ ಹಣಾಹಣಿ ನಡೆಯಲಿದ್ದು, ಭಾರತೀಯ ಕಾಲಮಾನ 1:30 ಕ್ಕೆ ಪ್ರಾರಂಭವಾಗಲಿದೆ.


ಇನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಭಾರತದಲ್ಲಿ ಪಂದ್ಯಗಳನ್ನು ಪ್ರಸಾರ ಮಾಡುವ ಹಕ್ಕನ್ನು ಹೊಂದಿದೆ. ಭಾರತ ಮತ್ತು ಪಾಕಿಸ್ತಾನದ T20 ವಿಶ್ವಕಪ್ ಪಂದ್ಯವು ಭಾರತದಲ್ಲಿನ ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ನೇರಪ್ರಸಾರವಾಗಲಿದೆ.  


ಇನ್ನು ಪಿಚ್ ಬಗ್ಗೆ ಮಾತನಾಡುವುದಾದರೆ ಮೆಲ್ಬರ್ನ್ ಎಂಸಿಜಿ ಕ್ರಿಕೆಟ್ ಮೈದಾನವು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಉತ್ತಮವಾಗಿದೆ. ಪೇಸರ್‌ಗಳು ಪಂದ್ಯದ ಆರಂಭದಲ್ಲಿ ಉತ್ತಮ ಬೌನ್ಸ್‌ ಸಹ ಕಾಣಬಹುದು. ಇನ್ನು ಈ ಪಿಚ್‌ ಸ್ಪಿನ್ನರ್‌ಗಳಿಗೆ ನೆರವಾಗುವುದು ತುಂಬಾ ಕಡಿಮೆ. ಮೊದಲ ಇನ್ನಿಂಗ್ಸ್‌ ಸ್ಕೋರ್ 150 ರನ್‌ಗಳಷ್ಟಿದ್ದು, ಎರಡನೇ ಬಾರಿಗೆ ಬ್ಯಾಟಿಂಗ್ ಮಾಡುವ ತಂಡವು ಉತ್ತಮ ದಾಖಲೆಯನ್ನು ಮಾಡಿದೆ.  


ಸಂಭಾವ್ಯ ಆಟಗಾರರ ಪಟ್ಟಿ:


ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.


ಇದನ್ನೂ ಓದಿ: IND vs PAK: ಇಂಡೋ-ಪಾಕ್ ವಿಶ್ವಕಪ್ ಮುಖಾಮುಖಿಯಲ್ಲಿ ಅತೀ ಹೆಚ್ಚು ಪಂದ್ಯ ಗೆದ್ದಿದ್ದು ಇದೇ ತಂಡ


ಪಾಕಿಸ್ತಾನ ತಂಡ: ಬಾಬರ್ ಅಜಮ್ (ಕ್ಯಾ), ಮೊಹಮ್ಮದ್ ರಿಜ್ವಾನ್ (ವಿ.ಕೀ), ಶಾನ್ ಮಸೂದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಹೈದರ್ ಅಲಿ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ, ಖುಶ್ದಿಲ್ ಶಾ, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ವಾಸಿಮ್ ಜೂನಿಯರ್,


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.