“ಒಂದು ವರ್ಷದಿಂದ ಭಾರತ ತಂಡ ಈ ಆಟಗಾರನನ್ನು ಮಿಸ್ ಮಾಡಿಕೊಳ್ಳುತ್ತಿದೆ”: Team India ಕೋಚ್ ಹೇಳಿಕೆ
India vs West Indies Test Series: ಈ ವರ್ಷದ ಬಿಡುವಿಲ್ಲದ ವೇಳಾಪಟ್ಟಿಯನ್ನು ಪರಿಗಣಿಸಿ, ಬೌಲರ್ ಗಳ ಕೆಲಸದ ಹೊರೆ ನಿರ್ವಹಣೆ ತಂಡದ ನಿರ್ವಹಣೆಗೆ ಕಳವಳಕಾರಿಯಾಗಿದೆ ಎಂದು ಭಾರತದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಒಪ್ಪಿಕೊಂಡಿದ್ದಾರೆ.
India vs West Indies Test Series: ವೆಸ್ಟ್ ಇಂಡೀಸ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ ಗೆಲುವಿನೊಂದಿಗೆ ಪ್ರಾರಂಭಿಸಿದೆ. ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಮತ್ತು 141 ರನ್ ಗಳ ಜಯ ಸಾಧಿಸಿತ್ತು. ಈ ಪಂದ್ಯದ ನಂತರ ಟೀಂ ಇಂಡಿಯಾದ ಬೌಲಿಂಗ್ ಕೋಚ್ ಪರಾಸ್ ಮಾಂಬ್ರೆ ಆಟಗಾರರ ಕೆಲಸದ ಹೊರೆ ನಿರ್ವಹಣೆಯ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಭಾರತ ಕ್ರಿಕೆಟ್ ತಂಡ ಈ ಆಟಗಾರನಿಲ್ಲದ ನೋವನ್ನು ಅನುಭವಿಸುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಟೆಸ್ಟ್ LIVE ಪಂದ್ಯದಲ್ಲಿ ತಾಳ್ಮೆ ಕಳೆದುಕೊಂಡ ರೋಹಿತ್: ಸಾರ್ವಜನಿಕವಾಗಿ ಈ ಆಟಗಾರನನ್ನು ನಿಂದಿಸಿದ್ರು…!
ಈ ವರ್ಷದ ಬಿಡುವಿಲ್ಲದ ವೇಳಾಪಟ್ಟಿಯನ್ನು ಪರಿಗಣಿಸಿ, ಬೌಲರ್ ಗಳ ಕೆಲಸದ ಹೊರೆ ನಿರ್ವಹಣೆ ತಂಡದ ನಿರ್ವಹಣೆಗೆ ಕಳವಳಕಾರಿಯಾಗಿದೆ ಎಂದು ಭಾರತದ ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಒಪ್ಪಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ವೇಗದ ಬೌಲರ್ ಗಳು ನಿರಂತರವಾಗಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ ತಂಡದ ನಿರ್ವಹಣೆ ವಿಶೇಷವಾಗಿ ಕೆಲಸ ಮಾಡುತ್ತಿದೆ ಎಂದು ಮಾಂಬ್ರೆ ಹೇಳಿದ್ದಾರೆ. “ಭಾರತವು ಜಸ್ಪ್ರೀತ್ ಬುಮ್ರಾ ಅವರನ್ನು ಮಿಸ್ ಮಾಡಿಕೊಳ್ಳುತ್ತಿದೆ. ತಂಡದೊಳಗಿನ ಬೌಲರ್ ಗಳ ಕೆಲಸದ ಹೊರೆ ನಿರ್ವಹಣೆಯ ಬಗ್ಗೆ ನಿರಂತರ ಚರ್ಚೆ ನಡೆಯುತ್ತಿದೆ” ಎಂದು ಅವರು ಹೇಳಿದರು.
ಕೋಚ್ ಪರಸ್ ಮಾಂಬ್ರೆ ಮಾತು ಮುಂದುವರೆಸಿ, “ಬೌಲರ್ ಗಳ ಗಾಯಗಳು ಮತ್ತು ಕೆಲಸದ ಹೊರೆ ನಿರ್ವಹಣೆ ಕಳವಳಕಾರಿ ವಿಷಯವಾಗಿದೆ. ಕಳೆದ ಒಂದೂವರೆ ವರ್ಷದಲ್ಲಿ ನಾವು ಬುಮ್ರಾ ಅವರನ್ನು ತುಂಬಾ ಮಿಸ್ ಮಾಡಿಕೊಂಡಿದ್ದೇವೆ. ವೈಟ್ ಬಾಲ್ ಮಾದರಿಯಲ್ಲಿ ಯಾರು ಆಡುತ್ತಾರೆ ಮತ್ತು ಕೆಂಪು ಚೆಂಡಿನಲ್ಲಿ ಯಾರು ಆಡುತ್ತಾರೆ ಎಂಬುದನ್ನು ನಾವು ನಿರ್ಧರಿಸಿಲ್ಲ. ಆದರೆ ಬೌಲರ್ ಗಳಿಗೆ ವಿಶ್ರಾಂತಿ ನೀಡಬೇಕಾಗಿದೆ. ಬೌಲರ್ ಗಳ ಫಿಟ್‌ನೆಸ್ ಮತ್ತು ಕೆಲಸದ ಹೊರೆ ನಿರ್ವಹಣೆಯನ್ನು ನಾವು ನೋಡಿಕೊಳ್ಳಬೇಕು” ಎಂದರು.
ಇದನ್ನೂ ಓದಿ: ಮೊದಲ ಟೆಸ್ಟ್’ನಲ್ಲಿ ಗೆದ್ದರೂ Team India ಪ್ಲೇಯಿಂಗ್ 11ನಲ್ಲಿ ಬದಲಾವಣೆ: ಇವರು ಇನ್… ಅವರು ಔಟ್!
ಟೀಮ್ ಇಂಡಿಯಾದ ಮಾರಕ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ನಂತರ ಮೈದಾನದಿಂದ ಹೊರಗುಳಿದಿದ್ದಾರೆ. ಕೆಲ ಸಮಯದಿಂದ ಅವರು ಬೆನ್ನುನೋವಿನಿಂದ ಟೀಮ್ ಇಂಡಿಯಾದಿಂದ ನಿರಂತರವಾಗಿ ಹೊರಗುಳಿಯುತ್ತಿದ್ದಾರೆ. ಈ ಗಾಯದಿಂದಾಗಿ ಅವರು ಮಾರ್ಚ್ ನಲ್ಲಿ ನ್ಯೂಜಿಲೆಂಡ್ ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಪ್ರಸ್ತುತ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (NCA) ಮರಳಲು ತಯಾರಿ ನಡೆಸುತ್ತಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.