Hyderabad vs Rajasthan: ರಾಜಸ್ಥಾನ ರಾಯಲ್ಸ್ ತಂಡದ ಆಲ್ರೌಂಡ್ ಆಟಕ್ಕೆ ಮಂಕಾದ ಸನ್ ರೈಸರ್ಸ್

ಪುಣೆಯಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಐದನೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 61 ರನ್ ಗಳ ಗೆಲುವು ಸಾಧಿಸಿದೆ.

Written by - Zee Kannada News Desk | Last Updated : Mar 30, 2022, 01:04 AM IST
  • ರಾಜಸ್ತಾನ ರಾಯಲ್ಸ್ ಪರವಾಗಿ ಟ್ರೆಂಟ್ ಬೌಲ್ಟ್ 2 ಪ್ರಸಿದ್ ಕೃಷ್ಣಾ 2,ಚಹಾಲ್ 3 ವಿಕೆಟ್ ಕಬಳಿಸುವ ಮೂಲಕ ಹೈದರಾಬಾದ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.
Hyderabad vs Rajasthan: ರಾಜಸ್ಥಾನ ರಾಯಲ್ಸ್ ತಂಡದ ಆಲ್ರೌಂಡ್ ಆಟಕ್ಕೆ ಮಂಕಾದ ಸನ್ ರೈಸರ್ಸ್  title=
Photo Courtesy: Twitter

ನವದೆಹಲಿ: ಪುಣೆಯಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಐದನೇ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 61 ರನ್ ಗಳ ಗೆಲುವು ಸಾಧಿಸಿದೆ.

ಟಾಸ್ ಗೆದ್ದು ರಾಜಸ್ತಾನ ರಾಯಲ್ಸ್ (Rajasthan Royals) ತಂಡಕ್ಕೆ ಬ್ಯಾಟಿಂಗ್ ಅವಕಾಶ ನೀಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದ ರಾಜಸ್ತಾನ ರಾಯಲ್ಸ್ ತಂಡವನ್ನು ಕಟ್ಟಿ ಹಾಕಲು ಸಾಕಷ್ಟು ಶ್ರಮವಹಿಸಬೇಕಾಯಿತು, ಮೊದಲ ಬ್ಯಾಟಿಂಗ್ ಅವಕಾಶವನ್ನು ಸದುಪಯೋಗಪಡಿಸಿಕೊಂಡ ರಾಜಸ್ತಾನ ರಾಯಲ್ಸ್ ತಂಡವು ಆರಂಭದಲ್ಲಿ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಶವಾಲ್ ಅವರು ಮೊದಲ ವಿಕೆಟ್ ಗೆ 58 ರನ್ ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಭದ್ರ ಬುನಾದಿಯನ್ನು ಹಾಕಿದರು.

ಇದನ್ನೂ ಓದಿ: KGF verse:ಕೆಜಿಎಫ್‌2 ಟ್ರೇಲರ್ ನೋಡಿ ಥ್ರಿಲ್ ಆದವರಿಗೆ ಮತ್ತೊಂದು ಸರ್ಪ್ರೈಸ್!

ಜೋಸ್ ಬಟ್ಲರ್, 35 ಯಶಸ್ವಿ ಜೈಶವಾಲ್, 20 ಸಂಜು ಸ್ಯಾಮ್ಸನ್ 55,ಪಡಿಕಲ್ 55 ಹಾಗೂ ಹೆತ್ಮಾರ್ ಅವರ ಭರ್ಜರಿ 32 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 210 ರನ್ ಗಳಿಸಿತು.ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಕನ್ನಡಿಗ ಪ್ರಸಿದ್ ಕೃಷ್ಣಾ ಆರಂಭದಲ್ಲಿಯೇ ನಾಯಕ ಕೇನ್ ವಿಲಿಯಮ್ಸನ್ ಅವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು. ಇದಾದ ನಂತರ ಹೈದರಾಬಾದ್ ತಂಡವು ಚೇತರಿಸಿಕೊಳ್ಳಲೆ ಇಲ್ಲ, ಕೇವಲ 37 ರನ್ ಗಳ ಅಂತರದಲ್ಲಿ ಐದು ವಿಕೆಟ್ ಕಳೆದುಕೊಳ್ಳುವ ಮೂಲಕ ಭಾರಿ ಮುಖಭಂಗ ಎದುರಿಸುವ ಸಂಭವ ಎದುರಾಗಿತ್ತು. ಆದರೆ ಈ ಸಂದರ್ಭದಲ್ಲಿ  ಐದನ್ ಮಾರ್ಕ್ರಂ 57, ರೋಮಾರಿಯೋ 24 ಹಾಗೂ ವಾಷಿಂಗ್ಟನ್ ಸುಂದರ್ ಅವರ 40 ರನ್ ಗಳ ನೆರವಿನಿಂದ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ ಕೇವಲ149 ರನ್ ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.

ಇದನ್ನೂ ಓದಿ: Garadi Shoot In Badami: ಬಾದಾಮಿಯಲ್ಲಿ ಯೋಗರಾಜ್ ಭಟ್ಟರ "ಗರಡಿ"

ರಾಜಸ್ತಾನ ರಾಯಲ್ಸ್ ಪರವಾಗಿ ಟ್ರೆಂಟ್ ಬೌಲ್ಟ್ 2 ಪ್ರಸಿದ್ ಕೃಷ್ಣಾ 2,ಚಹಾಲ್ 3 ವಿಕೆಟ್ ಕಬಳಿಸುವ ಮೂಲಕ ಹೈದರಾಬಾದ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News