Indian Premier League 2023: ಅಬ್ಬರಿಸಿದ ಯಶಸ್ವಿ ಜೈಸ್ವಾಲ್, ಚೆನ್ನೈ ವಿರುದ್ಧ ರಾಜಸ್ತಾನ ರಾಯಲ್ಸ್ ಗೆ ಭರ್ಜರಿ ಗೆಲುವು
ಇಲ್ಲಿನ ಸವಾಯಿ ಮಾನ್ಯಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವು 32 ರನ್ ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
ಜೈಪುರ: ಇಲ್ಲಿನ ಸವಾಯಿ ಮಾನ್ಯಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡವು 32 ರನ್ ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ರಾಜಸ್ತಾನ ರಾಯಲ್ಸ್ ತಂಡವು ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್ ಅವರ 86 ರನ್ ಗಳ ಮೊದಲ ವಿಕೆಟ್ ಜೊತೆಯಾಟವು ತಂಡಕ್ಕೆ ಉತ್ತಮ ಅಡಿಪಾಯವನ್ನು ಹಾಕಿತು.
ನಾಳೆ ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ
ಯಶಸ್ವಿ ಜೈಸ್ವಾಲ್ ಕೇವಲ 43 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ಗಳ ನೆರವಿನಿಂದಾಗಿ ಭರ್ಜರಿ 77 ರನ್ ಗಳನ್ನು ಗಳಿಸಿದರು.ಆ ಮೂಲಕ ತಂಡಕ್ಕೆ ಉತ್ತಮ ಅಡಿಪಾಯವನ್ನು ಹಾಕಿದರು, ಕ್ರಮವಾಗಿ ಜೋಸ್ ಬಟ್ಲರ್ 27, ಧ್ರುವ್ ಜುರೆಲ್ 34, ಹಾಗೂ ಪಡಿಕಲ್ ಅವರ ಅಜೇಯ 27 ರನ್ ಗಳ ನೆರವಿನಿಂದ ಅಂತಿಮವಾಗಿ 20 ಓವರ್ ಗಳಲ್ಲಿ ರಾಜಸ್ತಾನ ರಾಯಲ್ಸ್ ತಂಡವು ಐದು ವಿಕೆಟ್ ನಷ್ಟಕ್ಕೆ 202 ರನ್ ಗಳನ್ನು ಗಳಿಸಿತು.
ರಾಜಸ್ತಾನ ತಂಡವು ನೀಡಿದ 203 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆರಂಭದಲ್ಲಿ ರುತುರಾಜ್ ಗಾಯಕ್ವಾಡ್ 29 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದಾಗಿ 47 ರನ್ ಗಳಿಸುವ ಮೂಲಕ ತಂಡಕ್ಕೆ ಗೆಲುವಿನ ಅಡಿಪಾಯವನ್ನು ಹಾಕಿದರು.
ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಭೆ 33 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ನೆರವಿನಿಂದ 52 ರನ್ ಗಳಿಸುವ ಮೂಲಕ ತಂಡವು ಗೆಲುವಿನ ಲಯ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು."ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ?"
ಆದರೆ ಅಂತಿಮವಾಗಿ ಮೊಯಿನ್ ಅಲಿ ಹಾಗೂ ರವೀಂದ್ರ ಜಡೇಜಾ ಅವರ ವೇಗದ ಆಟದ ನಡುವೆಯೂ ಕೂಡ ಚೆನ್ನೈ ತಂಡವು ಗೆಲುವಿನ ಗುರಿಯನ್ನು ತಲುಪುವಲ್ಲಿ ವಿಫಲವಾಯಿತು.20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿತು. ಆ ಮೂಲಕ 32 ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.