Protest Against WFI President: ಭಾರತದ ಹಿರಿಯ ಕುಸ್ತಿಪಟು ಬಜರಂಗ್ ಪುನಿಯಾ ಸೇರಿದಂತೆ ಇತರ ಹಲವು ಕುಸ್ತಿಪಟುಗಳು ಮತ್ತೊಮ್ಮೆ ಜಂತರ್ ಮಂತರ್‌ನಲ್ಲಿ ಧರಣಿ ಆರಂಭಿಸಿದ್ದಾರೆ. ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವುದು ಸೇರಿದಂತೆ ಕಠಿಣ ಕ್ರಮಕ್ಕೆ ಅವರು ಒತ್ತಾಯಿಸಿದ್ದಾರೆ. ಈ ಹಿಂದೆ, ಕುಸ್ತಿಪಟುಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಮೇಲೆ ಲೈಂಗಿಕ ಶೋಷಣೆ, ಮಾನಸಿಕ ಕಿರುಕುಳ, ಕೊಲೆ ಬೆದರಿಕೆ ಮತ್ತು ಹಣ ದುರುಪಯೋಗದ ಆರೋಪ ಮಾಡಿದ್ದರು. ಬೃಜ್ ಭೂಷಣ್ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ಮತ್ತೆ ತೊಡೆತಟ್ಟಿದ ದಿಗ್ಗಜ ಜುಸ್ತಿ ಆಟಗಾರರು
ಟೋಕಿಯೊ ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಮತ್ತೊಮ್ಮೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಜಂತರ್ ಮಂತರ್‌ನಲ್ಲಿ ಮತ್ತೆ ಪ್ರತಿಭಟನೆ ನಡೆಸಲಿದ್ದೇವೆ ಮತ್ತು ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ಬಂಧಿಸುವವರೆಗೆ ನಮ್ಮ ಪ್ರತಿಭಟನೆ ಮುಂದುವರೆಸಲಿದ್ದೇವೆ ಎಂದು ಗುಡುಗಿದ್ದಾರೆ.


ಇದನ್ನೂ ಓದಿ-Chardham Yatra 2023: ನಾಲ್ಕು ಧಾಮಗಳ ಯಾತ್ರೆಗೆ 17 ಲಕ್ಷ ಭಕ್ತಾದಿಗಳ ಹೆಸರು ನೋಂದಣಿ, ಸಿದ್ಧತೆ ಹೇಗಿದೆ ಇಲ್ಲಿ ತಿಳಿದುಕೊಳ್ಳಿ


ಅಧ್ಯಕ್ಷರ ವಿರುದ್ಧ ಗಂಭೀರ ಆರೋಪಗಳು
ಇದೀಗ ಬಂದ ಸುದ್ದಿಯ ಪ್ರಕಾರ ಭಾರತದ ಅಗ್ರ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಮತ್ತೊಮ್ಮೆ ನವದೆಹಲಿಯ ಜಂತರ್ ಮಂತರ್‌ಗೆ ಹಿಂತಿರುಗಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ತಮ್ಮ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಫೆಡರೇಶನ್ ಮುಖ್ಯಸ್ಥರ ಮೇಲೆ ಲೈಂಗಿಕ ದೌರ್ಜನ್ಯ, ಮಾನಸಿಕ ಕಿರುಕುಳ, ಕೊಲೆ ಬೆದರಿಕೆ ಮತ್ತು ಆರ್ಥಿಕ ದುರುಪಯೋಗದ ಆರೋಪವಿದೆ.


ಇದನ್ನೂ ಓದಿ-Amrit Pal Singh ಬಂಧನ, 'ಇದು ಸರೆಂಡರ್ ಅಲ್ಲ', DGP ಮಹತ್ವದ ಹೇಳಿಕೆ


ದೂರು ದಾಖಲಿಸಿದ ಹಲವು ಮಹಿಳಾ ಕುಸ್ತಿ ಪಟುಗಳು
ಇದಲ್ಲದೆ ಮಹಿಳಾ ಕುಸ್ತಿಪಟುಗಳು ಕೂಡ ಅಧ್ಯಕ್ಷರ ವಿರುದ್ಧ ದೂರು ನೀಡಿದ್ದಾರೆ, 7 ಮಹಿಳಾ ಕುಸ್ತಿಪಟುಗಳು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೂ ಎಫ್‌ಐಆರ್‌ ದಾಖಲಾಗಿಲ್ಲ. ಮೂಲಗಳ ಪ್ರಕಾರ, ಕುಸ್ತಿಪಟುಗಳು ನೀಡಿರುವ ದೂರುಗಳ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಮತ್ತು ಬಂದಿರುವ ಸಾಕ್ಷ್ಯಗಳ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಹರಿಯಾಣ ಮತ್ತು ಹೊರಗಿನ ಕುಸ್ತಿಪಟುಗಳಿಂದ ಒಟ್ಟು 7 ದೂರುಗಳು ಬಂದಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.