Sachin Tendulkar: ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಪ್ರಸ್ತುತ ಅಂತರರಾಷ್ಟ್ರೀಯ ಮಾಸ್ಟರ್ಸ್ ಲೀಗ್‌ನಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಸಚಿನ್ ಇಂಡಿಯಾ ಮಾಸ್ಟರ್ಸ್ ತಂಡವನ್ನು ಮುನ್ನಡೆಸುತ್ತಿದ್ದು, ಕಳೆದ ದಿನ ಆಸ್ಟ್ರೇಲಿಯಾ ಮಾಸ್ಟರ್ಸ್ ಮತ್ತು ಇಂಡಿಯಾ ಮಾಸ್ಟರ್ಸ್ ನಡುವಿನ ಪಂದ್ಯದಲ್ಲಿ, ಸಚಿನ್ ತಮ್ಮ ಬಿರುಗಾಳಿಯ ಬ್ಯಾಟಿಂಗ್ ಪ್ರದರ್ಶಿಸಿದ್ದರು.
ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ ! ಮದುವೆ ವೈಭವದ ಫೋಟೋ ಇಲ್ಲಿವೆ
7 ಬೌಂಡರಿ, 4 ಸಿಕ್ಸರ್ ಮತ್ತು 64 ರನ್
51 ನೇ ವಯಸ್ಸಿನಲ್ಲಿಯೂ ಸಹ, ಸಚಿನ್ ತೆಂಡೂಲ್ಕರ್ ಅವರ ಬ್ಯಾಟಿಂಗ್ ಶೈಲಿ ಅದೇ ರೀತಿ ಇದೆ. ಹಳೆಯ ಸಚಿನ್ ಅರೆಕ್ಷಣ ಕಣ್ಣಮುಂದೆ ಬಂದಂತಾಗಿದ್ದು ಸುಳ್ಳಲ್ಲ. ಆಸ್ಟ್ರೇಲಿಯಾ ವಿರುದ್ಧದ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಪಂದ್ಯದಲ್ಲಿ ಕೇವಲ 33 ಎಸೆತಗಳಲ್ಲಿ 64 ರನ್ ಗಳಿಸಿದ್ದರು ಸಚಿನ್. ಈ ಬಿರುಗಾಳಿಯ ಇನ್ನಿಂಗ್ಸ್‌ನಲ್ಲಿ, ಸಚಿನ್ 7 ಬೌಂಡರಿ ಮತ್ತು 4 ಸಿಕ್ಸರ್ ಬಾರಿಸಿದ್ದರು. ಇಷ್ಟೇ ಅಲ್ಲ, ಕೇವಲ 27 ಎಸೆತಗಳಲ್ಲಿ ಅರ್ಧಶತಕ ಪೂರ್ಣಗೊಳಿಸಿದ್ದರು.
ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಶೇನ್ ವ್ಯಾಟ್ಸನ್ ಮತ್ತು ಬೆನ್ ಡಂಕ್ ಅದ್ಭುತ ಬ್ಯಾಟಿಂಗ್ ನಡೆಸಿ ಅಜೇಯ ಶತಕಗಳನ್ನು ಗಳಿಸಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ 269 ರನ್‌ಗಳ ಬೃಹತ್ ಮೊತ್ತ ಪೇರಿಸಿತು. 52 ಎಸೆತಗಳನ್ನು ಎದುರಿಸಿದ ವ್ಯಾಟ್ಸನ್ 12 ಬೌಂಡರಿ ಹಾಗೂ 7 ಸಿಕ್ಸರ್‌ಗಳ ನೆರವಿನಿಂದ 110 ರನ್ ಗಳಿಸಿದರು. ಅದೇ ಸಮಯದಲ್ಲಿ, ಡಂಕ್ 53 ಎಸೆತಗಳಲ್ಲಿ 132 ರನ್ ಗಳಿಸಿದರು. ಅವರ ಈ ಇನ್ನಿಂಗ್ಸ್‌ನಲ್ಲಿ 12 ಬೌಂಡರಿಗಳು ಮತ್ತು 10 ಸಿಕ್ಸರ್‌ಗಳು ಸೇರಿದ್ದವು.
??????, ??????, ???????????! ?
Sachin Tendulkar turns back the clock with a sensational 5️⃣0️⃣! ?#IMLT20 #TheBaapsOfCricket #IMLonJioHotstar #IMLonCineplex pic.twitter.com/Y4uVIeXY21
— INTERNATIONAL MASTERS LEAGUE (@imlt20official) March 5, 2025
ಆಸ್ಟ್ರೇಲಿಯಾ ನೀಡಿದ ಗುರಿಯನ್ನು ಬೆನ್ನಟ್ಟುವ ಸಮಯದಲ್ಲಿ, ಭಾರತ ತಂಡವು 174 ರನ್‌ಗಳಿಗೆ ಕುಸಿದು ಬಿದ್ದು, ಇದರಿಂದಾಗಿ ಸೋಲನ್ನು ಎದುರಿಸಬೇಕಾಯಿತು. ಸಚಿನ್ ತೆಂಡೂಲ್ಕರ್ ಅವರ 64 ರನ್‌ಗಳನ್ನು ಹೊರತುಪಡಿಸಿ, ತಂಡದ ಬೇರೆ ಯಾವುದೇ ಬ್ಯಾಟ್ಸ್‌ಮನ್ ಉತ್ತಮ ಪ್ರದರ್ಶನ ನೀಡಲಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.









