IND vs AUS, 2023 World Cup : ವಿಶ್ವಕಪ್ 2023 ನಾಳೆ ಅಂದರೆ ಅಕ್ಟೋಬರ್ 5 ರಿಂದ ಪ್ರಾರಂಭವಾಗುತ್ತದೆ. ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. 2023 ರ ವಿಶ್ವಕಪ್ ಗೆಲ್ಲುವ ಸಾಮರ್ಥ್ಯವಿರುವ ಪ್ರಬಲ ತಂದ ಭಾರತ ಎಂದೇ ಹೇಳಲಾಗುತ್ತಿದೆ. ಇದೀಗ ಆಸ್ಟ್ರೇಲಿಯ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ ಪರವಾಗಿ ಯಾರನ್ನು ಕಣಕ್ಕಿಳಿಸಲಿದ್ದಾರೆ ನೋಡೋಣ.
ಸ್ಪಿನ್ ಬೌಲರ್‌ಗಳಿಗೆ ನೆರವಾಗಲಿದೆ ಚೆನ್ನೈ ಪಿಚ್ :
ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ಚೆನ್ನೈ ಪಿಚ್ ಸ್ಪಿನ್ ಬೌಲರ್‌ಗಳಿಗೆ ನೆರವಾಗಲಿದೆ. ಚೆನ್ನೈನ ಪಿಚ್ ಬ್ಯಾಟಿಂಗ್‌ಗೆ ಕೂಡಾ ಉತ್ತಮವಾಗಿದೆ. ಆಸ್ಟ್ರೇಲಿಯ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಶುಭಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಟೀಂ ಇಂಡಿಯಾದ ಬಲಿಷ್ಠ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಮೈದಾನಕ್ಕೆ ಇಳಿಯಲಿದ್ದಾರೆ.
ಇದನ್ನೂ ಓದಿ : ಏಷ್ಯನ್ ಗೇಮ್ಸ್ ಬಳಿಕ ಟೀಂ ಇಂಡಿಯಾದಲ್ಲಿ ಈ 3 ಆಟಗಾರರ ಸ್ಥಾನ ಖಚಿತ!
ಈ ಆಟಗಾರರು ತಂಡದಿಂದ ಹೊರಕ್ಕೆ :
ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಪ್ಲೇಯಿಂಗ್ 11 ನಿಂದ ಹೊರಗುಳಿಯಬೇಕಾಗುತ್ತದೆ. ಆಲ್‌ರೌಂಡರ್ ಆಗಿ ಟೀಮ್ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಮ್ಯಾಚ್ ಫಿನಿಶರ್ ಸೂರ್ಯಕುಮಾರ್ ಯಾದವ್ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. ಸೂರ್ಯಕುಮಾರ್ ಯಾದವ್ ಕೆಲವೇ ಎಸೆತಗಳಲ್ಲಿ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಆಟಗಾರ. ಇನ್ನು ಆಲ್‌ರೌಂಡರ್ ರವೀಂದ್ರ ಜಡೇಜಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಲಿದ್ದಾರೆ. ರವೀಂದ್ರ ಜಡೇಜಾ ತಮ್ಮ ಸ್ಫೋಟಕ ಬ್ಯಾಟಿಂಗ್ ಮತ್ತು ಮಾರಕ ಎಡಗೈ ಸ್ಪಿನ್ ಬೌಲಿಂಗ್ ಮೂಲಕ ಟೀಮ್ ಇಂಡಿಯಾವನ್ನು ಬಲಪಡಿಸಲಿದ್ದಾರೆ.
ಪ್ಲೇಯಿಂಗ್ ಇಲೆವೆನ್‌ನಲ್ಲಿ ಖತರ್ನಾಕ್ ಬೌಲರ್ಸ್ :
ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ರವಿಚಂದ್ರನ್ ಅಶ್ವಿನ್ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಪಿನ್ನರ್ ಆಗಿ ಆಯ್ಕೆಯಾಗುವುದು ಖಚಿತವಾಗಿದೆ. ಫಾಸ್ಟ್ ಬೌಲರ್‌ಗಳ ಪೈಕಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಇದನ್ನೂ ಓದಿ : ಸ್ಪಿನ್ ಮಾಸ್ಟರ್ ಸೇರಿ 5 ಸ್ಟಾರ್ ಆಟಗಾರರು ಕೊನೆ ಕ್ಷಣದಲ್ಲಿ ವಿಶ್ವಕಪ್’ನಿಂದ ಔಟ್! ಬದಲಿಯಾಗಿ ಈ ಆಟಗಾರರಿಗೆ ಅವಕಾಶ
ಆಸ್ಟ್ರೇಲಿಯ ವಿರುದ್ಧ ಈ ಪ್ಲೇಯಿಂಗ್ ಇಲೆವೆನ್ ಕಣಕ್ಕಿಳಿಯುವ ಸಾಧ್ಯತೆ :
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ