ಭಾರತ vs ಪಾಕಿಸ್ತಾನ ಸೂಪರ್ 4 ಫೈಟ್’ಗೆ ಪ್ಲೇಯಿಂಗ್ 11 ರೆಡಿ: ಸ್ಟಾರ್ ವೇಗಿ ಸೇರಿ ಇಬ್ಬರು ಔಟ್

Asia Cup 2023, Super 4: ಸೆಪ್ಟೆಂಬರ್ 2 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಗ್ರೂಪ್ ಎ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಆದರೆ ಈ ಬಾರಿ ಮಳೆ ಬಂದರೆ ಚಿಂತೆ ಇಲ್ಲ.

Written by - Bhavishya Shetty | Last Updated : Sep 9, 2023, 12:29 PM IST
    • ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಸೂಪರ್-4 ಪಂದ್ಯ
    • ಕೊಲಂಬೊ ನಗರದಲ್ಲಿ ಸೆಪ್ಟೆಂಬರ್ 10 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ
    • ಈ ಪಂದ್ಯದಿಂದ ಟೀಂ ಇಂಡಿಯಾದ ಒಬ್ಬ ಫ್ಲಾಪ್ ಆಟಗಾರನನ್ನು ಹೊರಗಿಡುವ ಸಾಧ್ಯತೆ ಇದೆ.
ಭಾರತ vs ಪಾಕಿಸ್ತಾನ ಸೂಪರ್ 4 ಫೈಟ್’ಗೆ ಪ್ಲೇಯಿಂಗ್ 11 ರೆಡಿ: ಸ್ಟಾರ್ ವೇಗಿ ಸೇರಿ ಇಬ್ಬರು ಔಟ್ title=
India vs Pakistan

Asia Cup 2023 News: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಸೂಪರ್-4 ಪಂದ್ಯವು ಶ್ರೀಲಂಕಾದ ಕೊಲಂಬೊ ನಗರದಲ್ಲಿ ಭಾನುವಾರ ಅಂದರೆ ಸೆಪ್ಟೆಂಬರ್ 10 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

ಸೆಪ್ಟೆಂಬರ್ 2 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಗ್ರೂಪ್ ಎ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಆದರೆ ಈ ಬಾರಿ ಮಳೆ ಬಂದರೆ ಚಿಂತೆ ಇಲ್ಲ. ಏಕೆಂದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸೂಪರ್-4 ಪಂದ್ಯಕ್ಕೆ ಸೆಪ್ಟೆಂಬರ್ 11 ರಂದು ಮೀಸಲು ದಿನವನ್ನಾಗಿ ಇರಿಸಲಾಗಿದೆ. ಇನ್ನು ಈ ಪಂದ್ಯದಿಂದ ಟೀಂ ಇಂಡಿಯಾದ ಒಬ್ಬ ಫ್ಲಾಪ್ ಆಟಗಾರನನ್ನು ಹೊರಗಿಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಲಂಡನ್ ಕಾಲೇಜಿನಲ್ಲಿ ಪದವಿ ಪಡೆದ ಪುತ್ರಿ: ಖುಷಿ, ಹೆಮ್ಮೆಯಿಂದ ಕುಣಿದಾಡಿದ ಟೀಂ ಇಂಡಿಯಾ ಮಾಜಿ ನಾಯಕ!

ಆರಂಭಿಕ ಜೋಡಿ:

ಪಾಕಿಸ್ತಾನ ವಿರುದ್ಧದ ಸೂಪರ್ 4 ಪಂದ್ಯಕ್ಕೆ ಶುಭ್ಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಬಹುದು. ಈ ಇಬ್ಬರೂ ಬ್ಯಾಟ್ಸ್‌’ಮನ್‌’ಗಳು ಮೊದಲ 10 ಓವರ್‌’ಗಳಲ್ಲಿ ರನ್ ಗಳಿಸುವಲ್ಲಿ ಪರಿಣತರಾಗಿದ್ದಾರೆ. ಆದರೆ ಇದಕ್ಕೂ ಮೊದಲು ಸೆಪ್ಟೆಂಬರ್ 2 ರಂದು ನಡೆದ ಪಾಕಿಸ್ತಾನ ವಿರುದ್ಧದ ಎ ಗುಂಪಿನ ಪಂದ್ಯದಲ್ಲಿ ರೋಹಿತ್ ಶರ್ಮಾ (11) ಮತ್ತು ಶುಭ್ಮನ್ ಗಿಲ್ (10) ಕಳಪೆ ಪ್ರದರ್ಶನ ನೀಡಿದ್ದರು.

ಮಧ್ಯಮ ಕ್ರಮಾಂಕ:

ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧದ ಸೂಪರ್-4 ರ ಗ್ರೇಟ್ ಮ್ಯಾಚ್‌’ನಲ್ಲಿ 3ನೇ ಸ್ಥಾನದಲ್ಲಿ ಬ್ಯಾಟಿಂಗ್‌’ಗೆ ಬರಲಿದ್ದಾರೆ. ಶ್ರೇಯಸ್ ಅಯ್ಯರ್‌’ಗೆ 4ನೇ ಕ್ರಮಾಂಕದಲ್ಲಿ ಅವಕಾಶ ಸಿಗಬಹುದು. ಇನ್ನು ಈ ಪಂದ್ಯದಲ್ಲೂ ಕೆಎಲ್ ರಾಹುಲ್ ಆಡುವುದು ಡೌಟ್. ಹೀಗಿರುವಾಗ ಇಶಾನ್ ಕಿಶನ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 5ನೇ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ಕಣಕ್ಕಿಳಿಯುವ ಸಂಭವವಿದೆ. ಸೂರ್ಯಕುಮಾರ್ ಯಾದವ್ ಹೊರಬೀಳಬಹುದು.

ಆಲ್ ರೌಂಡರ್:

ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಗಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ, ಸ್ಪಿನ್ ಆಲ್ ರೌಂಡರ್ ರವೀಂದ್ರ ಜಡೇಜಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬರಲಿದ್ದಾರೆ.

ಸ್ಪಿನ್ ಬೌಲರ್:

ಪಾಕಿಸ್ತಾನ ವಿರುದ್ಧದ ಶ್ರೇಷ್ಠ ಸೂಪರ್-4 ಪಂದ್ಯದಲ್ಲಿ ಕುಲದೀಪ್ ಯಾದವ್ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಅವಕಾಶ ಪಡೆಯುವುದು ಖಚಿತವಾಗಿದೆ.

ವೇಗದ ಬೌಲರ್:

ವೇಗದ ಬೌಲರ್‌’ಗಳಾದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಈ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯಲಿದ್ದಾರೆ. ನೇಪಾಳ ವಿರುದ್ಧದ ಪಂದ್ಯದಲ್ಲಿ ಆಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಪಾಕಿಸ್ತಾನ ವಿರುದ್ಧದ ಸೂಪರ್-4 ಪಂದ್ಯದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಹೀಗಾದರೆ ಶಾರ್ದೂಲ್ ಠಾಕೂರ್ ಹೊರಗುಳಿಯಬೇಕಾಗುತ್ತದೆ.

ಇದನ್ನೂ ಓದಿ: ಈಕೆ ಭಾರತದ ಅತ್ಯಂತ ಶ್ರೀಮಂತ ಬಾಲನಟಿ: 17ರ ಹರೆಯದಲ್ಲೇ 10 ಕೋಟಿ ಸಂಭಾವನೆ ಪಡೆಯುತ್ತಾಳೆ ಈ ಬಾಲೆ

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News