ಭಾರತ vs ಪಾಕಿಸ್ತಾನ ಸೂಪರ್ 4 ಫೈಟ್’ಗೆ ಪ್ಲೇಯಿಂಗ್ 11 ರೆಡಿ: ಸ್ಟಾರ್ ವೇಗಿ ಸೇರಿ ಇಬ್ಬರು ಔಟ್
Asia Cup 2023, Super 4: ಸೆಪ್ಟೆಂಬರ್ 2 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಗ್ರೂಪ್ ಎ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಆದರೆ ಈ ಬಾರಿ ಮಳೆ ಬಂದರೆ ಚಿಂತೆ ಇಲ್ಲ.
Asia Cup 2023 News: ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಸೂಪರ್-4 ಪಂದ್ಯವು ಶ್ರೀಲಂಕಾದ ಕೊಲಂಬೊ ನಗರದಲ್ಲಿ ಭಾನುವಾರ ಅಂದರೆ ಸೆಪ್ಟೆಂಬರ್ 10 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಸೆಪ್ಟೆಂಬರ್ 2 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾ ಕಪ್ 2023ರ ಗ್ರೂಪ್ ಎ ಪಂದ್ಯವು ಮಳೆಯಿಂದಾಗಿ ರದ್ದಾಗಿತ್ತು. ಆದರೆ ಈ ಬಾರಿ ಮಳೆ ಬಂದರೆ ಚಿಂತೆ ಇಲ್ಲ. ಏಕೆಂದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸೂಪರ್-4 ಪಂದ್ಯಕ್ಕೆ ಸೆಪ್ಟೆಂಬರ್ 11 ರಂದು ಮೀಸಲು ದಿನವನ್ನಾಗಿ ಇರಿಸಲಾಗಿದೆ. ಇನ್ನು ಈ ಪಂದ್ಯದಿಂದ ಟೀಂ ಇಂಡಿಯಾದ ಒಬ್ಬ ಫ್ಲಾಪ್ ಆಟಗಾರನನ್ನು ಹೊರಗಿಡುವ ಸಾಧ್ಯತೆ ಇದೆ.
ಇದನ್ನೂ ಓದಿ: ಲಂಡನ್ ಕಾಲೇಜಿನಲ್ಲಿ ಪದವಿ ಪಡೆದ ಪುತ್ರಿ: ಖುಷಿ, ಹೆಮ್ಮೆಯಿಂದ ಕುಣಿದಾಡಿದ ಟೀಂ ಇಂಡಿಯಾ ಮಾಜಿ ನಾಯಕ!
ಆರಂಭಿಕ ಜೋಡಿ:
ಪಾಕಿಸ್ತಾನ ವಿರುದ್ಧದ ಸೂಪರ್ 4 ಪಂದ್ಯಕ್ಕೆ ಶುಭ್ಮನ್ ಗಿಲ್ ಮತ್ತು ನಾಯಕ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಬಹುದು. ಈ ಇಬ್ಬರೂ ಬ್ಯಾಟ್ಸ್’ಮನ್’ಗಳು ಮೊದಲ 10 ಓವರ್’ಗಳಲ್ಲಿ ರನ್ ಗಳಿಸುವಲ್ಲಿ ಪರಿಣತರಾಗಿದ್ದಾರೆ. ಆದರೆ ಇದಕ್ಕೂ ಮೊದಲು ಸೆಪ್ಟೆಂಬರ್ 2 ರಂದು ನಡೆದ ಪಾಕಿಸ್ತಾನ ವಿರುದ್ಧದ ಎ ಗುಂಪಿನ ಪಂದ್ಯದಲ್ಲಿ ರೋಹಿತ್ ಶರ್ಮಾ (11) ಮತ್ತು ಶುಭ್ಮನ್ ಗಿಲ್ (10) ಕಳಪೆ ಪ್ರದರ್ಶನ ನೀಡಿದ್ದರು.
ಮಧ್ಯಮ ಕ್ರಮಾಂಕ:
ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧದ ಸೂಪರ್-4 ರ ಗ್ರೇಟ್ ಮ್ಯಾಚ್’ನಲ್ಲಿ 3ನೇ ಸ್ಥಾನದಲ್ಲಿ ಬ್ಯಾಟಿಂಗ್’ಗೆ ಬರಲಿದ್ದಾರೆ. ಶ್ರೇಯಸ್ ಅಯ್ಯರ್’ಗೆ 4ನೇ ಕ್ರಮಾಂಕದಲ್ಲಿ ಅವಕಾಶ ಸಿಗಬಹುದು. ಇನ್ನು ಈ ಪಂದ್ಯದಲ್ಲೂ ಕೆಎಲ್ ರಾಹುಲ್ ಆಡುವುದು ಡೌಟ್. ಹೀಗಿರುವಾಗ ಇಶಾನ್ ಕಿಶನ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ 5ನೇ ಸ್ಥಾನದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ಕಣಕ್ಕಿಳಿಯುವ ಸಂಭವವಿದೆ. ಸೂರ್ಯಕುಮಾರ್ ಯಾದವ್ ಹೊರಬೀಳಬಹುದು.
ಆಲ್ ರೌಂಡರ್:
ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಆಗಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ, ಸ್ಪಿನ್ ಆಲ್ ರೌಂಡರ್ ರವೀಂದ್ರ ಜಡೇಜಾ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬರಲಿದ್ದಾರೆ.
ಸ್ಪಿನ್ ಬೌಲರ್:
ಪಾಕಿಸ್ತಾನ ವಿರುದ್ಧದ ಶ್ರೇಷ್ಠ ಸೂಪರ್-4 ಪಂದ್ಯದಲ್ಲಿ ಕುಲದೀಪ್ ಯಾದವ್ ಸ್ಪೆಷಲಿಸ್ಟ್ ಸ್ಪಿನ್ನರ್ ಆಗಿ ಅವಕಾಶ ಪಡೆಯುವುದು ಖಚಿತವಾಗಿದೆ.
ವೇಗದ ಬೌಲರ್:
ವೇಗದ ಬೌಲರ್’ಗಳಾದ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಈ ಪ್ಲೇಯಿಂಗ್ 11ರಲ್ಲಿ ಸ್ಥಾನ ಪಡೆಯಲಿದ್ದಾರೆ. ನೇಪಾಳ ವಿರುದ್ಧದ ಪಂದ್ಯದಲ್ಲಿ ಆಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಪಾಕಿಸ್ತಾನ ವಿರುದ್ಧದ ಸೂಪರ್-4 ಪಂದ್ಯದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಹೀಗಾದರೆ ಶಾರ್ದೂಲ್ ಠಾಕೂರ್ ಹೊರಗುಳಿಯಬೇಕಾಗುತ್ತದೆ.
ಇದನ್ನೂ ಓದಿ: ಈಕೆ ಭಾರತದ ಅತ್ಯಂತ ಶ್ರೀಮಂತ ಬಾಲನಟಿ: 17ರ ಹರೆಯದಲ್ಲೇ 10 ಕೋಟಿ ಸಂಭಾವನೆ ಪಡೆಯುತ್ತಾಳೆ ಈ ಬಾಲೆ
ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.