IPL 2018: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ RCB

ಟಾಸ್‌ ಗೆದ್ದಿರುವ ವಿರಾಟ್‌ ಕೊಹ್ಲಿ ನೇತೃತ್ವದ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. 

Last Updated : May 7, 2018, 08:10 PM IST
IPL 2018: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ RCB

ಹೈದರಾಬಾದ್‌: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟಿ-20 ಕ್ರಿಕೆಟ್‌ ಲೀಗ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ನಡುವೆ ಪಂದ್ಯ ಆರಂಭವಾಗಿದ್ದು, ಟಾಸ್‌ ಗೆದ್ದಿರುವ ವಿರಾಟ್‌ ಕೊಹ್ಲಿ ನೇತೃತ್ವದ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. 

ಆರ್’ಸಿಬಿ 2 ಬದಲಾವಣೆಯೊಂದಿಗೆ ಕಣಕ್ಕಿಳಿದಿದ್ದು, ಮುರುಗನ್ ಅಶ್ವಿನ್ ಬದಲಿಗೆ ಮನನ್ ವೋಹ್ರಾ ಹಾಗೂ ಬ್ರೆಂಡನ್ ಮೆಕ್ಲಮ್ ಬದಲಿಗೆ ಮೋಯಿನ್ ಅಲಿಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಇನ್ನು ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ 

ಈ ಬಾರಿಯ ಐಪಿಎಲ್‌ ಪಂದ್ಯಾವಳಿಯಲ್ಲಿ ಸಾಧಾರಣ ಪ್ರದರ್ಶನ ನೀಡಿರುವ ಆರ್ಸಿಬಿ ಗೆಲುವಿನ ಹಾದಿಯತ್ತ ಸಾಗಲು ಮುಂದಾಗಿದ್ದರೆ, ಮತ್ತೊಂದೆಡೆ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಉತ್ತಮ ರೀತಿಯಲ್ಲಿ ಮುನ್ನಡೆದಿದೆ. 

More Stories

Trending News