IPL 2020: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ಗೆ ಗೆಲುವು

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲ್ಲಿನಡೆದ ಐಪಿಎಲ್ ಟೂರ್ನಿ 7ನೇ ಪಂದ್ಯದಲ್ಲಿ ಚೆನ್ನೈ ತಂಡದ ವಿರುದ್ಧ ದೆಹಲಿ ಕ್ಯಾಪಿಟಲ್ಸ್ 44 ರನ್ ಗಳಿಂದ ಗೆಲುವು ಸಾಧಿಸಿದೆ.

Last Updated : Sep 26, 2020, 12:04 AM IST
IPL 2020: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ದೆಹಲಿ ಕ್ಯಾಪಿಟಲ್ಸ್ ಗೆ ಗೆಲುವು  title=
Photo Courtsey : Twitter

ನವದೆಹಲಿ: ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲ್ಲಿನಡೆದ ಐಪಿಎಲ್ ಟೂರ್ನಿ 7ನೇ ಪಂದ್ಯದಲ್ಲಿ ಚೆನ್ನೈ ತಂಡದ ವಿರುದ್ಧ ದೆಹಲಿ ಕ್ಯಾಪಿಟಲ್ಸ್ 44 ರನ್ ಗಳಿಂದ ಗೆಲುವು ಸಾಧಿಸಿದೆ.

IPL 2020: ಎಂಟು ವರ್ಷದ ಸಚಿನ್ ದಾಖಲೆ ಮುರಿದ ಕನ್ನಡಿಗ ಕೆ.ಎಲ್.ರಾಹುಲ್

ಚೆನ್ನೈ ತಂಡವು ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ನ್ನು ಆಯ್ದುಕೊಂಡಿತು.ಇನ್ನೊಂದೆಡೆ ಮೊದಲು ಬ್ಯಾಟಿಂಗ್ ಆರಂಭಿಸಿದ ದೆಹಲಿ ಕ್ಯಾಪಿಟಲ್ಸ್ ತಂಡವು ಪೃಥ್ವಿ ಷಾ (64) ಧವನ್ (35) ರಿಷಬ್ ಪಂತ್ (ಅಜೇಯ 37) ಅವರ ಭರ್ಜರಿ ಬ್ಯಾಟಿಂಗ್ ನಿಂದಾಗಿ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿತು.

ತದನಂತರ 176 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಚೆನ್ನೈ ತಂಡವು 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 131 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು.ದುಪ್ಲೆಸಿಸ್ ಅವರು ಚೆನ್ನೈ ತಂಡದ ಪರವಾಗಿ 43 ರನ್ ಗಳಿಸಿದ್ದು ಬಿಟ್ಟರೆ ಉಳಿದವರ್ಯಾರು ಕೂಡ 30 ರ ಗಡಿ ದಾಟಲಿಲ್ಲ. ಇನ್ನೊಂದೆಡೆ ದೆಹಲಿ ಕ್ಯಾಪಿಟಲ್ಸ್ ಪರವಾಗಿ ಕಾಗಿಸೋ ರಬಾಡಾ 3 ಹಾಗೂ ಅನ್ರಿಚ್ ನೋರ್ತ್ಜೆ ಅವರು 2 ವಿಕೆಟ್ ಕಬಳಿಸುವ ಮೂಲಕ ಚೆನ್ನೈ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.

Trending News