ದುಬೈ: ಮರಳುಗಾಡಿನ ನಾಡು ಯುಎಇಯಲ್ಲಿ ಇಂದಿನಿಂದ ಮತ್ತೆ ಐಪಿಎಲ್(IPL 2021) ಹಬ್ಬ ಶುರುವಾಗಲಿದೆ. ಮೊದಲ ಪಂದ್ಯದಲ್ಲಿಯೇ ಬಲಿಷ್ಠ ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK vs MI)ಸೆಣಸಾಟ ನಡೆಸಲಿವೆ. ಈಗಾಗಲೇ ಪಂದ್ಯಕ್ಕೆ ಉಭಯ ತಂಡಗಳ ಆಟಗಾರರು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ದಿನ ಮತ್ತೆ ಬಂದಿದ್ದು, ತಮ್ಮ ನೆಚ್ಚಿನ ಆಟಗಾರರ ಆಟವನ್ನು ಕಣ್ತುಂಬಿಕೊಳ್ಳಲು ಹೊಸ ಹುಮ್ಮಸ್ಸು, ಉತ್ಸಾಹ ಮೂಡಿದೆ.


COMMERCIAL BREAK
SCROLL TO CONTINUE READING

ಕೊರೊನಾ(CoronaVirus) ಕಾರಣದಿಂದ ಮೊದಲ ಹಂತದಲ್ಲಿ ಕೇವಲ 7 ಪಂದ್ಯಗಳು ಮಾತ್ರ ನಡೆದಿದ್ದವು. ಕೋವಿಡ್ ಸಾಂಕ್ರಾಮಿಕದ ಪರಿಣಾಮದಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿ(IPL 2021) ಇಂದಿನಿಂದ ಮತ್ತೆ ಪುನರಾರಂಭಗೊಳ್ಳುತ್ತಿದೆ. ಈಗಾಗಲೇ ಎಲ್ಲಾ ತಂಡದ ಆಟಗಾರರು ಯುಎಇ ತಲುಪಿದ್ದು, ಅಭ್ಯಾಸದಲ್ಲಿ ನಿರತರಾಗಿದ್ದಾರೆ. ನೆಚ್ಚಿನ ಆಟಗಾರರ ಹೊಡಿ ಬಡಿ ಕಡಿ ಆಟವನ್ನು ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತುಕೊಂಡಿದ್ದಾರೆ.


ಇದನ್ನೂ ಓದಿ: Virat Kohli ನಾಯಕತ್ವದ ಕುರಿತಾದ ಈ ಸಂಗತಿ ನನಗೆ ಅರ್ಥವಾಗಿಲ್ಲ ಎಂದ Kapil Dev


ಕೆಲ ಆಟಗಾರರು ಮತ್ತು ಸಿಬ್ಬಂದಿಗೆ ಕೋವಿಡ್(COVID-19) ಸೋಂಕು ತಗುಲಿದೆ ಪರಿಣಾಮ ಏಪ್ರಿಲ್-ಮೇ ತಿಂಗಳಿನಲ್ಲಿ ಭಾರತದಲ್ಲಿ ಆಯೋಜಿಸಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಇದರ ಮುಂದುವರಿದ ಭಾಗ ಇಂದಿನಿಂದ ಗಲ್ಫ್ ರಾಷ್ಟ್ರದಲ್ಲಿ ಪ್ರಾರಂಭವಾಗಲಿದೆ. ಮುಂದಿನ ತಿಂಗಳು ಅಕ್ಟೋಬರ್ 17 ರಿಂದ ನವೆಂಬರ್ 14ರವರೆಗೆ ಯುಎಇಯಲ್ಲಿಯೇ ಟಿ-20 ವಿಶ್ವಕಪ್ ಟೂರ್ನಿ ನಡೆಯಲಿದೆ. ಇದಕ್ಕೆ ಪೂವ ಸಿದ್ಧತಾ ವೇದಿಕೆಯಾಗಿ ಐಪಿಎಲ್ ಗಮನ ಸೆಳೆಯುತ್ತಿದೆ. ಈ ಬಾರಿ ಚೆನ್ನೈ, ಮುಂಬೈ , ಆರ್ ಸಿಬಿ(RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಈ ನಾಲ್ಕು ತಂಡಗಳು ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ 4 ಸ್ಥಾನಗಳಲ್ಲಿದ್ದು, ಐಪಿಎಲ್ ಟ್ರೋಫಿ ಎತ್ತಿಹಿಡಿಯುವ ಫೆವರಿಟ್ ತಂಡಗಳಾಗಿವೆ.


IPL 2021) ಮತ್ತು ಮುಂಬರುವ ಟಿ-20 ವಿಶ್ವಕಪ್ ಟೂರ್ನಿಯ ಪಂದ್ಯಗಳನ್ನು ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಬಹುದಿನಗಳ ನಂತರ ಮತ್ತೆ ಆರಂಭವಾಗಿರುವ ಚುಟುಕು ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ನೀಡುವುದರಲ್ಲಿ ಯಾವುದೇ ಸಂದೇಹವಿಲ್ಲ. ಐಪಿಎಲ್ ಯಾವಾಗ ಮತ್ತೆ ಆರಂಭವಾಗುತ್ತೋ ಎಂದು ಕಾದು ಕುಳಿತಿದ್ದವರ ಮೊಗದಲ್ಲಿಗ ಮಂದಹಾಸ ಮೂಡಿದೆ.  


ಮುಂಬೈ ಮತ್ತು ಚೆನ್ನೈ ಸೆಣಸಾಟ


2ನೇ ಹಂತದ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಇಂದು ರೋಹಿತ್ ಶರ್ಮಾ(Rohit Sharma) ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ಎಂ.ಎಸ್.ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿವೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ಐಪಿಎಲ್ ಟೂರ್ನಿಯ ಮೊದಲಾರ್ಧದಲ್ಲಿ ಮುಂಬೈ ಎದುರು ಸೋತಿದ್ದ ಚೆನ್ನೈ ತಂಡ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಉಭಯ ತಂಡಗಳು ಬಲಿಷ್ಠವಾಗಿದ್ದು, ಬರ್ಜರಿ ಪೈಪೋಟಿ ನಿರೀಕ್ಷಿಸಲಾಗಿದೆ. 2 ತಂಡಗಳಲ್ಲಿ ಅಬ್ಬರದ ಬ್ಯಾಟ್ಸ್‌ ಮನ್‌ಗಳು ಮತ್ತು ಆಲ್‌ರೌಂಡರ್‌ಗಳು ಇರುವುದರಿಂದ ರನ್‌ಗಳ ಹೊಳೆ ಹರಿಯುವ ನಿರೀಕ್ಷೆ ಇದೆ.


ಇದನ್ನೂ ಓದಿ: Anil Kumble: ಟಿ-20 ವಿಶ್ವಕಪ್ ಬಳಿಕ ಅನಿಲ್ ಕುಂಬ್ಳೆ ಟೀಂ ಇಂಡಿಯಾ ಕೋಚ್..?!


ತಂಡಗಳ ಪಾಯಿಂಟ್ಸ್ ಪಟ್ಟಿ ಲೆಕ್ಕಾಚಾರ


ಮೊದಲ ಹಂತದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ 8 ಪಂದ್ಯಗಳನ್ನು ಆಡಿದ್ದು, ಇನ್ನುಳಿದ ಎಲ್ಲಾ ತಂಡಗಳು 7 ಪಂದ್ಯಗಳನ್ನು ಆಡಿವೆ. ಈ ಪೈಕಿ 8 ಪಂದ್ಯಗಳಲ್ಲಿ 6 ಗೆಲುವು, 2 ಸೋಲು ಕಂಡಿರುವ ಡೆಲ್ಲಿ ತಂಡ 12 ಅಂಕಗಳೊಂಡಿದೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. 7 ಪಂದ್ಯಗಳಲ್ಲಿ 5 ಗೆಲುವು, 2 ಸೋಲು ಕಂಡಿರುವ ಚೆನ್ನೈ ತಂಡ 10 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. 3ನೇ ಸ್ಥಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದ್ದು, ಕೊಹ್ಲಿ ನೇತೃತ್ವದ ತಂಡ ತಾನಾಡಿದ 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲು ಕಂಡಿದೆ. ಮುಂಬೈ ಕೂಡ 7 ಪಂದ್ಯಗಳಲ್ಲಿ 5 ಗೆಲುವು ಮತ್ತು 2 ಸೋಲು ಕಂಡಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್, ಕೆಕೆಆರ್ ಮತ್ತು ಹೈದರಾಬಾದ್ ತಂಡಗಳು ಕ್ರಮವಾಗಿ ನಂತರದ ಸ್ಥಾನಗಳಲ್ಲಿವೆ.  


ಐಪಿಎಲ್‌ ಪಂದ್ಯ: 30


ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್


ದಿನಾಂಕ: ಸೆಪ್ಟೆಂಬರ್ 19, ಭಾನುವಾರ


ಸ್ಥಳ: ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣ


ಸಮಯ: ಸಂಜೆ 7 ಗಂಟೆಯಿಂದ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.