IPL 2021, CSK vs RR: ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನ ಖಚಿತ ಪಡಿಸಿದ ಧೋನಿ ಪಡೆ

ಮೂರು ವಿಕೆಟ್ ಪಡೆದ ಮೊಯಿನ್ ಅಲಿಗೆ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ನೀಡಲಾಯಿತು.

Written by - Yashaswini V | Last Updated : Apr 20, 2021, 07:35 AM IST
  • ರಾಜಸ್ಥಾನ್ ರಾಯಲ್ಸ್ ವಿರುದ್ಧ 45 ರನ್ ಗಳ ಜಯ ಗಳಿಸಿದ ಚೆನ್ನೈ ಸೂಪರ್ ಕಿಂಗ್ಸ್
  • ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು
  • ರಾಜಸ್ಥಾನ ತಂಡವು ನಿಗದಿತ 20 ಓವರ್‌ಗಳಲ್ಲಿ 143/9 ರನ್ ಗಳಿಸಲು ಮಾತ್ರ ಸಾಧ್ಯವಾಯಿತು
IPL 2021, CSK vs RR: ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನ ಖಚಿತ ಪಡಿಸಿದ ಧೋನಿ ಪಡೆ title=
Moeen Ali, Chennai Super Kings (Image courtesy: @ Twitter/ IPL)

ಮುಂಬೈ: ಐಪಿಎಲ್ (IPL 2021) ರ 12 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ 45 ರನ್ಗಳಿಂದ ಜಯಗಳಿಸಿತು. ಮೊಯೀನ್ ಅಲಿಯಿಂದ ಮೂರು ಮತ್ತು ರವೀಂದ್ರ ಜಡೇಜಾ ಮತ್ತು ಸ್ಯಾಮ್ ಕುರ್ರನ್ ಅವರ ತಲಾ ಎರಡು ವಿಕೆಟ್ಗಳೊಂದಿಗೆ ಚೆನ್ನೈ ರಾಜಸ್ಥಾನ ತಂಡವನ್ನು ಮಣಿಸಿತು. ಈ ಗೆಲುವಿನೊಂದಿಗೆ ಧೋನಿ ತಂಡವು ಪಾಯಿಂಟ್ಸ್ ಟೇಬಲ್‌ನಲ್ಲಿ ಎರಡನೇ ಸ್ಥಾನವನ್ನು ಖಚಿತಪಡಿಸಿದೆ. 

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ಗಳ ನಷ್ಟಕ್ಕೆ 188 ರನ್ ಗಳಿಸಿತು. ಚೆತ್ರನ್ ಸಕಾರಿಯೊ ಮೂರು ಮತ್ತು ಕ್ರಿಸ್ ಮೋರಿಸ್ ಎರಡು ವಿಕೆಟ್ ಪಡೆದರು. ಚೇಸ್ ಸಮಯದಲ್ಲಿ ರಾಜಸ್ಥಾನ ತಂಡವು ನಿಗದಿತ 20 ಓವರ್‌ಗಳಲ್ಲಿ 143/9 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ಜೋಸ್ ಬಟ್ಲರ್ 35 ಎಸೆತಗಳಲ್ಲಿ 49 ರನ್ ಗಳಿಸಿದರು.

ಇದನ್ನೂ ಓದಿ - IPL: Sunrisers Hyderabad ತಂಡಕ್ಕೆ ಆಘಾತ, ಮುರಳೀಧರನ್ ಆಸ್ಪತ್ರೆಗೆ ದಾಖಲು

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ (Rajasthan Royals) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಗುರಿಯನ್ನು ಬೆನ್ನಟ್ಟುವಾಗ ರಾಜಸ್ಥಾನಕ್ಕೆ ಉತ್ತಮ ಆರಂಭ ಇರಲಿಲ್ಲ. ಕ್ಯಾಪ್ಟನ್ ಸಂಜು ಸ್ಯಾಮ್ಸನ್ ಕೇವಲ ಒಂದು ರನ್ ಗಳಿಸಿ ಔಟಾದರು. ಆರಂಭಿಕ ಬ್ಯಾಟ್ಸ್‌ಮನ್ ಮನನ್ ವೊಹ್ರಾ ಕೂಡ 14 ರನ್ ಗಳಿಸಿದರು. ಜೋಸ್ ಬಟ್ಲರ್ 35 ಎಸೆತಗಳಲ್ಲಿ 49 ರನ್ ಗಳಿಸಿ ತಂಡಕ್ಕೆ ಆಸರೆಯಾದರು.

ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡಕ್ಕೂ ಸರಿಯಾದ ಆರಂಭವಾಗಲಿಲ್ಲ. ರುತುರಾಜ್ ಗೈಕ್ವಾಡ್ ಕೇವಲ 10 ರನ್ ಗಳ ನಂತರ ಮುಷ್ತಾಫಿಜುರ್ ರಹಮಾನ್ ಗೆ ಕ್ಯಾಚ್ ಒಪ್ಪಿಸಿದರು. ಫಾಫ್ ಡು ಪ್ಲೆಸಿಸ್ 17 ಎಸೆತಗಳಲ್ಲಿ 33 ರನ್ ಗಳಿಸಿ ತ್ವರಿತ ಇನ್ನಿಂಗ್ಸ್ ಆಡಿದರು, ಆದರೆ ಆರನೇ ಓವರ್‌ನಲ್ಲಿ ಕ್ರಿಸ್ ಮೋರಿಸ್ ಅವರ ಬಲಿಪಶುವಾಗಿದ್ದರು. ಮೊಯಿನ್ ಅಲಿ 26 ರನ್ ಗಳಿಸಿದರು.

ಇದನ್ನೂ ಓದಿ - Delhi vs Punjab: ದೆಹಲಿ ಕ್ಯಾಪಿಟಲ್ಸ್ ಗೆ ಗೆಲುವು ತಂದಿತ್ತ ಶಿಖರ್ ಧವನ್

ಮಹೇಂದ್ರ ಸಿಂಗ್ ಧೋನಿ ಮತ್ತು ಸುರೇಶ್ ರೈನಾ 18 ರನ್ ಗಳಿಸಿದ ನಂತರ ಔಟ್ ಆಗಿದ್ದರು. ರವೀಂದ್ರ ಜಡೇಜಾ ಎಂಟು ರನ್ ಕೊಡುಗೆ ನೀಡಿದರು. ಕೊನೆಯಲ್ಲಿ, ಡ್ವೇನ್ ಬ್ರಾವೋ ಎಂಟು ಎಸೆತಗಳಲ್ಲಿ 20 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News