ನವದೆಹಲಿ: 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇಂದು ಮೊದಲ ಕ್ವಾಲಿಫೈಯರ್ ಪಂದ್ಯ(Qualifier 1 Match)ನಡೆಯಲಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಫೈನಲ್ ಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ಸೆಣಸಾಟ ನಡೆಸಲಿವೆ. ಪ್ರಸಕ್ತ ಟೂರ್ನಿಯಲ್ಲಿ 3ನೇ ಬಾರಿ ‘ಗುರು-ಶಿಷ್ಯ’ರ ನಡುವೆ ಕಾಳಗ ನಡೆಯುತ್ತಿದೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ನೇತೃತ್ವದ ಚೆನ್ನೈ ಮತ್ತು ರಿಷಭ್ ಪಂತ್ ನಾಯಕತ್ವದ ಡೆಲ್ಲಿ ತಂಡಗಳು ಮುಖಾಮುಖಿಯಾಗಲಿವೆ.


COMMERCIAL BREAK
SCROLL TO CONTINUE READING

ಪ್ರಸಕ್ತ ಟೂರ್ನಿಯ ಲೀಗ್ ಪಂದ್ಯಗಳಲ್ಲಿ 2 ಬಾರಿ ಮುಖಾಮುಖಿಯಾಗಿದ್ದರೂ ರಿಷಭ್ ಪಡೆ ಧೋನಿ ಪಡೆ(CSK vs DC) ಗೆ ಮಣ್ಣುಮುಕ್ಕಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಮೇಲೆ ಸವಾರಿ ಮಾಡಿ ಮುಯ್ಯಿ ತೀರಿಸಿಕೊಳ್ಳುವ ಉತ್ಸಾಹದಲ್ಲಿ ಚೆನ್ನೈ ತಂಡವಿದೆ. ಲೀಗ್ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಡೆಲ್ಲಿ ತಾನಾಡಿದ 14 ಪಂದ್ಯಗಳಲ್ಲಿ 10 ಗೆಲುವು ದಾಖಲಿಸಿದ್ದು, 4ರಲ್ಲಿ ಸೋಲು ಕಂಡಿತ್ತು. ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ಮೊದಲ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿತ್ತು.


ಇದನ್ನೂ ಓದಿ: ಪ್ಲೇ ಆಫ್ ಗೆ ಎಂಟ್ರಿ ಕೊಡದೆ ಇದ್ದರೂ ಪಂಜಾಬ್ ಕಿಂಗ್ಸ್ ಮಾಡಿದ ದಾಖಲೆ ಏನು ಗೊತ್ತೇ?


ಕಳೆದ ಋತುವಿನ ಐಪಿಎಲ್ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ಈ ಬಾರಿ ಟ್ರೋಫಿ ಗೆಲ್ಲುವ ಫೆವರಿಟ್ ತಂಡವೆನಿಸಿಕೊಂಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಬಲಿಷ್ಠವಾಗಿರುವ ಡೆಲ್ಲಿ ಎದುರಾಳಿ ತಂಡವನ್ನು ಬಗ್ಗುಬಡಿಯುವ ಸಾಮರ್ಥ್ಯವನ್ನು ಹೊಂದಿದೆ. ಲೀಗ್ ನ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಎದುರು ರಿಷಭ್ ಪಡೆ ಸೋಲು ಕಂಡಿತ್ತು. ಆದರೂ ಚೆನ್ನೈ ವಿರುದ್ಧ ಗೆಲ್ಲುವ ವಿಶ್ವಾಸದೊಂದಿಗೆ ಡೆಲ್ಲಿ ಕಣಕ್ಕಿಳಿಯುತ್ತಿದೆ.


ಇನ್ನು ಕಳೆದ ಋತುವಿನಲ್ಲಿ ಪ್ಲೇ ಆಫ್ ಕೂಡ ಪ್ರವೇಶಿಸಿದೆ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದ ಧೋನಿ(MS Dhoni) ಬಳಗವು ಈ ಬಾರಿ ಭರ್ಜರಿ ಕಮ್ ಬ್ಯಾಕ್ ಮಾಡಿದೆ. ಘಟಾನುಘಟಿ ತಂಡಗಳಿಗೆ ನೀರು ಕುಡಿಸುವ ಮೂಲಕ ಚೆನ್ನೈ ತಂಡ ತನ್ನ ಹಳೆಯ ಗತವೈಭವವನ್ನು ಮತ್ತೆ ಮರುಕಳಿಸುವಂತೆ ಮಾಡಿದೆ. ಲೀಗ್ ಹಂತದಲ್ಲಿ ತಾನಾಡಿದ 14 ಪಂದ್ಯಗಳಲ್ಲಿ 9 ಗೆಲುವು ಸಾಧಿಸಿರುವ ಚೆನ್ನೈ 5 ಸೋಲು ಕಂಡಿದೆ. 18 ಅಂಕಗಳೊಂದಿಗೆ 2ನೇ ಸ್ಥಾನ ಪಡೆದು ಪ್ಲೇ ಆಫ್ ಪ್ರವೇಶಿಸಿದ್ದ ಧೋನಿ ಪಡೆ ದೆಹಲಿ ಸವಾಲನ್ನು ಹೇಗೆ ಸ್ವೀಕರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.


ಇದನ್ನೂ ಓದಿ: Bangalore vs Delhi: ಕೊನೆಯ ಎಸೆತದಲ್ಲಿ ಸಿಕ್ಸರ್..! ಆರ್ಸಿಬಿಗೆ ಶತಕದ ಗೆಲುವು


ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಟ್ರೋಫಿ ಗೆಲ್ಲುವ ಹಂತಕ್ಕೆ ಬಂದಿರುವ ಚೆನ್ನೈ(Chennai Super Kings) ಮತ್ತೊಮ್ಮೆ ಚಾಂಪಿಯನ್ ಆಗುವ ಉತ್ಸಾಹದಲ್ಲಿದೆ. ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್ ಪ್ರವೇಶಿಸಿದರೆ ಸೋತ ತಂಡಕ್ಕೆ ಮತ್ತೊಂದು ಅವಕಾಶವಿರುತ್ತದೆ. ನಾಳೆ(ಅ.11) ನಡೆಯಲಿರುವ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸೋಲು ತಂಡ ಟೂರ್ನಿಯಿಂದ ಹೊರಬೀಳಲಿದ್ದು, ಗೆದ್ದ ತಂಡವು ಇಂದಿನ ವಿಜಯಿ ತಂಡದೊಂದಿಗೆ ಮುಖಾಮುಖಿಯಾಗಲಿವೆ. ಅಲ್ಲಿ ಗೆದ್ದ ತಂಡ ಫೈನಲ್ ಪ್ರವೇಶಿಸಿ ಅಂತಿಮವಾಗಿ ಟ್ರೋಫಿಗಾಗಿ ಸೆಣಸಾಟ ನಡೆಸಲಿದೆ.  


ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:


ಚೆನ್ನೈ ಸೂಪರ್ ಕಿಂಗ್ಸ್: ಎಂ.ಎಸ್.ಧೋನಿ(ನಾಯಕ) ರುತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ರವೀಂದ್ರ ಜಡೇಜಾ, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಡ್ವೇನ್ ಬ್ರಾವೋ, ಜೋಶ್ ಹಜಲ್‌ವುಡ್, ಕೆಎಂ ಆಸಿಫ್, ಜೇಸನ್ ಬೆಹ್ರೆಂಡೋರ್ಫ್, ಭಗತ್ ವರ್ಮಾ, ಕೃಷ್ಣಪ್ಪ ಗೌತಮ್, ನಾರಾಯಣ್ ಜಗದೀಶನ್, ಲುಂಗಿ ಎನ್ ಜಿಡಿ, ಚೇತೇಶ್ವರ ಪೂಜಾರ, ಹರಿಶಂಕರ್ ರೆಡ್ಡಿ, ಆರ್.ಸಾಯಿ ಕಿಶೋರ್, ಕರಣ್ ಶರ್ಮಾ, ಸ್ಯಾಮ್ ಕುರ್ರನ್, ಇಮ್ರಾನ್ ತಾಹಿರ್


ದೆಹಲಿ ಕ್ಯಾಪಿಟಲ್: ರಿಷಭ್ ಪಂತ್(ನಾಯಕ) ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಅಯ್ಯರ್, ಸ್ಟೀವ್ ಸ್ಮಿತ್, ಅಕ್ಸರ್ ಪಟೇಲ್, ಶಿಮ್ರಾನ್ ಹೆಟ್ಮೀರ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಟ್ಜೆ, ಸ್ಯಾಮ್ ಬಿಲ್ಲಿಂಗ್ಸ್, ಟಾಮ್ ಕುರ್ರನ್, ಬೆನ್ ದ್ವಾರಶುಯಿಸ್, ಪ್ರವೀಣ್ ದುಬೆ, ಕುಲ್ವಂತ್ ಖೆಜ್ರೋಲಿಯಾ, ಲುಕ್ಮಾನ್ ಮೇರಿವಾಲಾ, ಇಶಾಂತ್ ಶರ್ಮಾ, ಉಮೇಶ್ ಯಾದವ್, ವಿಷ್ಣು ವಿನೋದ್, ಅಜಿಂಕ್ಯ ರಹಾನೆ, ಮಾರ್ಕಸ್ ಸ್ಟೊಯಿನಿಸ್


ಐಪಿಎಲ್‌ ಪಂದ್ಯ: ಕ್ವಾಲಿಫೈಯರ್ 01


ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್


ದಿನಾಂಕ: ಅಕ್ಟೋಬರ್ 10, ಭಾನುವಾರ


ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ


ಸಮಯ: ಸಂಜೆ 7.30ಕ್ಕೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ