ನವದೆಹಲಿ: 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021)ನ 2ನೇ ಹಂತದ ಪಂದ್ಯಗಳಿಗೆ ಚಾಲನೆ ಸಿಕ್ಕಿದೆ. ನಿನ್ನೆ(ಸೆ.19) ದುಬೈನಲ್ಲಿ ನಡೆದ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳ ಭರ್ಜರಿ ಗೆಲುವು ದಾಖಲಿಸಿತ್ತು. ಇಂದು ಮತ್ತೆ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗುತ್ತಿವೆ. ಅಬುಧಾಬಿಯ ಶೇಖ್ ಜಾಯೆದ್ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಮತ್ತು ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿವೆ.


COMMERCIAL BREAK
SCROLL TO CONTINUE READING

ಆರ್‌ಸಿಬಿ 2ನೇ ಹಂತದ ಪಂದ್ಯಗಳು ಆರಂಭವಾಗುವುದಕ್ಕೂ ಮುನ್ನವೇ ಭಾರೀ ಸುದ್ದಿಯಲ್ಲಿದೆ. ಏಕೆಂದರೆ ನಾಯಕ ವಿರಾಟ್ ಕೊಹ್ಲಿ(Virat Kohli) 2021ರ ಟೂರ್ನಿ ಮುಕ್ತಾಯದ ಬಳಿಕ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ. ಹಿಂದಿನ 13 ಆವೃತ್ತಿಗಳಲ್ಲಿ 3 ಭಾರಿ ಫೈನಲ್ ಪ್ರವೇಶಿಸಿ ಕಪ್ ಗೆಲ್ಲಲು ವಿಫಲವಾಗಿರುವ ಆರ್‌ಸಿಬಿ ಈ ಬಾರಿಯಾದರೂ ಟ್ರೋಫಿ ಎತ್ತಿ ಹಿಡಿಯುತ್ತಾ ಎಂದು ಲಕ್ಷಾಂತರ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿದ್ದಾರೆ. ನಾಯಕತ್ವ ತ್ಯಜಿಸುವುದಾಗಿ ಹೇಳಿರುವ ಕೊಹ್ಲಿ ಆರ್‌ಸಿಬಿ ಅಭಿಮಾನಿಗಳ ಬಹುದಿನಗಳ ಕನಸು ನೆರವೇರಿಸುತ್ತಾರಾ? ಅನ್ನೋ ಪ್ರಶ್ನೆ ಮೂಡಿದೆ.   


ಇದನ್ನೂ ಓದಿ: MI vs CSK ಇಂದಿನ Playing 11 ಹೀಗಿದೆ : ಈ ಆಟಗಾರರಿಗೆ ಚಾನ್ಸ್ ನೀಡಿದ ಧೋನಿ ಮತ್ತು ರೋಹಿತ್


ಮೊದಲ ಹಂತದಲ್ಲಿ ತಾನಾಡಿರುವ 7 ಪಂದ್ಯಗಳಲ್ಲಿ ಆರ್‌ಸಿಬಿ(RCB) 5 ಗೆಲುವು ದಾಖಲಿಸಿದ್ದು, 2 ಸೋಲು ಕಂಡಿದೆ. 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಸದ್ಯ 3ನೇ ಸ್ಥಾನದಲ್ಲಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡುತ್ತಿರುವ ಕೊಹ್ಲಿ ಪಡೆ ಕೆಕೆಆರ್ ವಿರುದ್ಧ ಗೆಲುವು ಸಾಧಿಸುವ ನಿರೀಕ್ಷೆ ಇದೆ.


Kolkata Knight Riders) ತಂಡ ಆರ್‌ಸಿಬಿಗೆ ಕಠಿಣ ಸವಾಲು ನೀಡುವ ನಿಟ್ಟಿನಲ್ಲಿ ಸಜ್ಜಾಗಿದೆ. ಮೊದಲ ಹಂತದಲ್ಲಿ ತಾನಾಡಿರುವ 7 ಪಂದ್ಯಗಳಲ್ಲಿ ಕೇವಲ 2 ಗೆಲುವು ಸಾಧಿಸಿರುವ ಕೆಕೆಆರ್ 5 ಪಂದ್ಯಗಳಲ್ಲಿ ಸೋಲು ಕಂಡಿದೆ. ಕೇವಲ 4 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ಕೆಕೆಆರ್  ಸೆಮಿಫೈನಲ್ ಪ್ರವೇಶಿಸಬೇಕೆಂದರೆ ಇನ್ನುಳಿದಿರುವ 7 ಪಂದ್ಯಗಳಲ್ಲಿ ಗೆಲುವು ಸಾಧಿಸಬೇಕಾದ ಒತ್ತಡದಲ್ಲಿದೆ. ಕೆಲವು ಆಟಗಾರರು ಬ್ಯಾಟಿಂಗ್ ನಲ್ಲಿ ವೈಫಲ್ಯ ಅನುಭವಿಸುತ್ತಿರುವುದು ಮತ್ತು ಡೇತ್ ಓವರ್ ಗಳಲ್ಲಿ ಬೌಲರ್ ಗಳು ಹೆಚ್ಚು ರನ್ ನೀಡುತ್ತಿರುವುದು ಕೆಕೆಆರ್ ಗೆ ದೊಡ್ಡ ಹೊಡೆತ ನೀಡುತ್ತಿದೆ. ಇದನ್ನು ಸುಧಾರಿಸಿಕೊಂಡು ಉತ್ತಮ ಪ್ರದರ್ಶನ ನೀಡಬೇಕಿದೆ.   


ಇದನ್ನೂ ಓದಿ: IPL 2021 : ಈ 2 ಪಂದ್ಯ ವಿಜೇತ ಆಟಗಾರರಿಂದ RCB ಬಲಿಷ್ಠವಾಗಿದೆ : ವಿರಾಟ್ ಕೊಹ್ಲಿ


ಎರಡೂ ತಂಡಗಳ ಸ್ಕ್ವಾಡ್‌ ಹೀಗಿದೆ ನೋಡಿ...


ಕೋಲ್ಕತ್ತಾ ನೈಟ್ ರೈಡರ್ಸ್: ಶುಭಮನ್ ಗಿಲ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಸುನಿಲ್ ನರೈನ್, ಇಯಾನ್ ಮಾರ್ಗನ್ (ನಾಯಕ), ಆಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಶಿವಂ ಮಾವಿ, ಪ್ರಸಿದ್ಧ್ ಕೃಷ್ಣ, ವರುಣ್ ಚಕ್ರವರ್ತಿ, ಹರಭಜನ್ ಸಿಂಗ್, ಟಿಮ್ ಸೌಥಿ, ಶಾಕಿಬ್ ಅಲ್ ಹಸನ್, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್, ಶೆಲ್ಡನ್ ಜಾಕ್ಸನ್, ಸಂದೀಪ್ ವಾರಿಯರ್, ಟಿಮ್ ಸೀಫರ್ಟ್, ರಿಂಕು ಸಿಂಗ್, ವೆಂಕಟೇಶ್ ಅಯ್ಯರ್, ಕಮಲೇಶ್ ನಾಗರಕೋಟಿ, ವೈಭವ್ ಅರೋರಾ


ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ ವೆಲ್, ಎಬಿ ಡಿ ವಿಲಿಯರ್ಸ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ವಾನಿಂದು ಹಸರಂಗ, ಕೈಲ್ ಜೇಮೀಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯಜ್ವೇಂದ್ರ ಚಹಲ್, ಡೇನಿಯಲ್ ಕ್ರಿಶ್ಚಿಯನ್, ದುಷ್ಮಂತ ಚಮೀರಾ, ಸಚಿನ್ ಬೇಬಿ, ಶ್ರೀಕರ್ ಭರತ್, ನವದೀಪ್ ಸೈನಿ, ಪವನ್ ದೇಶಪಾಂಡೆ, ಮೊಹಮ್ಮದ್ ಅಜರುದ್ದೀನ್, ಜಾರ್ಜ್ ಗಾರ್ಟನ್, ಸುಯಾಶ್ ಪ್ರಭುದೇಸಾಯಿ, ಟಿಮ್ ಡೇವಿಡ್, ಆಕಾಶ್ ದೀಪ್.


ಐಪಿಎಲ್‌ ಪಂದ್ಯ: 31


ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತ್ತಾ ನೈಟ್ ರೈಡರ್ಸ್


ದಿನಾಂಕ: ಸೆಪ್ಟೆಂಬರ್ 20, ಸೋಮವಾರ


ಸ್ಥಳ: ಅಬುಧಾಬಿಯ ಶೇಖ್ ಜಾಯೇದ್ ಕ್ರೀಡಾಂಗಣ


ಸಮಯ: ಸಂಜೆ 7.30


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ