ನವದೆಹಲಿ: ಐಪಿಎಲ್ 2021 ಪ್ರಾರಂಭವಾಗುವ ಮೊದಲು ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಪ್ರಸ್ತುತ ಚೆನ್ನೈನಲ್ಲಿ ತಯಾರಿ ನಡೆಸುತ್ತಿದ್ದಾರೆ. ಎಂ.ಎಸ್.ಧೋನಿ (M.S. Dhoni) ಈ ವರ್ಷ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡಕ್ಕೆ ನಾಲ್ಕನೇ ಬಾರಿಗೆ ಪ್ರಶಸ್ತಿಯನ್ನು ಪಡೆಯಲು ಉತ್ಸುಕರಾಗಿದ್ದಾರೆ. ಈ ಕಾರಣದಿಂದಾಗಿ ಅವರು ಪಂದ್ಯಾವಳಿಯ ಮೊದಲು ಎಲ್ಲಾ ಬೌಲರ್‌ಗಳಿಗೆ ಎಚ್ಚರಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಹಿಂದಿನ ಐಪಿಎಲ್ ಋತುವಿನಲ್ಲಿ ಎಂ.ಎಸ್.ಧೋನಿ (M.S. Dhoni) ನಿರೀಕ್ಷಿತ ರೀತಿಯಲ್ಲಿ ತಂಡವನ್ನು ಮುನ್ನಡೆಸುವಲ್ಲಿ ವಿಫಲರಾಗಿದ್ದರು. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇತಿಹಾಸದಲ್ಲಿ ಮೊದಲ ಬಾರಿಗೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ವಿಫಲವಾಯಿತು. ಆದರೆ ಈ ಬಾರಿ ಧೋನಿ ಐಪಿಎಲ್ ಋತು ಪ್ರಾರಂಭವಾಗುವ ಮುನ್ನ ಎಲ್ಲ ಬೌಲರ್‌ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಕ್ಯಾಪ್ಟನ್ ಕೂಲ್ ಅವರ ವೀಡಿಯೊ ವೈರಲ್ ಆಗುತ್ತಿದೆ. ಇದರಲ್ಲಿ ಮಹಿ ಮತ್ತೆ ತಮ್ಮ ಹಳೆಯ ಶೈಲಿಯಲ್ಲಿ ಕಾಣಿಸಿಕೊಂಡಿರುವುದನ್ನು ಅಭಿಮಾನಿಗಳು ಬಹಳ ಇಷ್ಟಪಡುತ್ತಿದ್ದಾರೆ.


 

 

 

 

 



ಇದನ್ನೂ ಓದಿ - IPL 2021: ಈ ಋತುವಿನಲ್ಲಿ ಒಂದೇ ಒಂದು ಪಂದ್ಯ ಆಡದಿದ್ದರೂ Shreyas Iyerಗೆ ಸಿಗುತ್ತೆ ಸಂಭಾವನೆ


ಸಿಎಸ್‌ಕೆ (CSK) ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದೆ. ಈ ವಿಡಿಯೋದಲ್ಲಿ ಧೋನಿ ನೆಟ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದಾರೆ. ಧೋನಿ ಪ್ರತಿ ಚೆಂಡನ್ನು ಹೊಡೆಯುವ ರೀತಿಯು  ಅವರ ಹಳೆಯ ಶೈಲಿಯನ್ನು ಅವರ ಬ್ಯಾಟಿಂಗ್‌ನಲ್ಲಿ ಸ್ಪಷ್ಟವಾಗಿ ಬಿಂಬಿಸುತ್ತಿದೆ. ಅವರು ನೆಟ್‌ಗಳಲ್ಲಿ ಲಾಂಗ್ ಸಿಕ್ಸರ್‌ಗಳನ್ನು ಹೊಡೆಯುವುದನ್ನು ಇದರಲ್ಲಿ ಕಾಣಬಹುದಾಗಿದೆ.


ಇದನ್ನೂ ಓದಿ - IPL 2021: ಮುಂಬೈನಲ್ಲಿ ಐಪಿಎಲ್ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ


ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಅವರು ಈ ವರ್ಷ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ನಾಲ್ಕನೇ ಬಾರಿಗೆ ಐಪಿಎಲ್ ಪ್ರಶಸ್ತಿ ಪಡೆಯುವ ತವಕದಲ್ಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್‌ನ ಮೊದಲ ಪಂದ್ಯ ಏಪ್ರಿಲ್ 10 ರಂದು ದೆಹಲಿ ಕ್ಯಾಪಿಟಲ್ ವಿರುದ್ಧ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಳೆದ ವರ್ಷ ಯುಎಇಯಲ್ಲಿ ಆಡಿದ ಐಪಿಎಲ್‌ನ 13 ನೇ ಋತುವಿನಲ್ಲಿ ಮೊದಲ ಬಾರಿಗೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಸಿಎಸ್‌ಕೆ (CSK) ವಿಫಲವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಆರು ಗೆಲುವುಗಳೊಂದಿಗೆ ಪಾಯಿಂಟ್ ಟೇಬಲ್ನಲ್ಲಿ ಏಳನೇ ಸ್ಥಾನದಲ್ಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.