ನವದೆಹಲಿ: ಭಾನುವಾರವೂ ಕ್ರಿಕೆಟ್ ಪ್ರೇಮಿಗಳಿಗೆ ಭರ್ಜರಿ ಮನರಂಜನೆ ಸಿಗಲಿದೆ. ಇಂದು ಕೂಡ ಎರಡೂ ಪಂದ್ಯಗಳು ನಡೆಯುತ್ತಿದೆ. 14ನೇ ಆವೃತ್ತಿಯ ಐಪಿಎಲ್ ಟೂರ್ನಿ(IPL 2021)ಯ 48ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ಮತ್ತು ಪಂಜಾಬ್ ಕಿಂಗ್ಸ್(Punjab Kings) ಮುಖಾಮುಖಿಯಾಗುತ್ತಿವೆ. ಶಾರ್ಜಾದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಧ್ಯಾಹ್ನ 3.30ಕ್ಕೆ ಪಂದ್ಯ ನಡೆಯಲಿದ್ದು ಉಭಯ ತಂಡಗಳ ನಡುವೆ ಗೆಲುವಿಗಾಗಿ ಭರ್ಜರಿ ಪೈಪೋಟಿ ನಡೆಯುವ ನಿರೀಕ್ಷೆಯಿದೆ.  


COMMERCIAL BREAK
SCROLL TO CONTINUE READING

ಕನ್ನಡಿಗ ಕೆ.ಎಲ್.ರಾಹುಲ್(KL Rahul) ನೇತೃತ್ವದ ಪಂಜಾಬ್ ಕಿಂಗ್ಸ್ ನ ಪ್ಲೇ ಆಫ್ ಭವಿಷ್ಯ ಇದೀಗ ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ಕೈಯಲ್ಲಿದೆ. ಈ ಪಂದ್ಯದಲ್ಲಿ ಪಂಜಾಬ್ ಸೋತರೆ ಟೂರ್ನಿಯಿಂದ ನಿರ್ಗಮಿಸಲಿದ್ದು, ಆರ್‌ಸಿಬಿ(RCB) ತನ್ನ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಹೀಗಾಗಿ ಎರಡೂ ತಂಡಗಳು ಗೆಲುವಿಗಾಗಿ ಭರ್ಜರಿ ಸೆಣಸಾಟ ನಡೆಸಲಿವೆ.


ಇದನ್ನೂ ಓದಿ: ಟೀಂ ಇಂಡಿಯಾಕ್ಕೆ ಧೋನಿಯಂತಹ ಕ್ಯಾಪ್ಟನ್! ರೋಹಿತ್ ಅಲ್ಲ, ಈ ಯುವ ಆಟಗಾರ ಮುಂದಿನ ನಾಯಕ?


ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿರುವ ಕೊಹ್ಲಿ ಪಡೆ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿರುವ ಆರ್‌ಸಿಬಿ ತಂಡ ಪಂಜಾಬ್ ಸೋಲಿಸಿ ಪ್ಲೇ ಆಫ್(IPL Playoffs) ಹಂತಕ್ಕೆ ಎಂಟ್ರಿ ಕೊಡಲು ಹವಣಿಸುತ್ತಿದೆ. ತಾನಾಡಿರುವ 11 ಪಂದ್ಯಗಳಲ್ಲಿ 7 ಗೆಲುವು ದಾಖಲಿಸಿರುವ ಆರ್‌ಸಿಬಿ 4ರಲ್ಲಿ ಸೋಲು ಕಂಡಿದೆ. 14 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 3ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಹೀಗಾಗಿ ಇಂದಿನ ಪಂದ್ಯವು ಕೊಹ್ಲಿ ಪಡೆಗೆ ತುಂಬಾ ಮಹತ್ವದ್ದಾಗಿದೆ.


ಇನ್ನು ಪಂಜಾಬ್ ಕಿಂಗ್ಸ್(Punjab Kings) ಪ್ಲೇ ಆಫ್ ಪ್ರವೇಶಿಸಬೇಕಾದರೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಪಂದ್ಯವನ್ನು ಗೆದ್ದು ಮುಂದಿನ  ಪಂದ್ಯದಲ್ಲಿಯೂ ಗೆಲುವು ಸಾಧಿಸುವ ಅನಿರ್ವಾಯತೆ ಕೆ.ಎಲ್.ರಾಹುಲ್ ಪಡೆಗೆ ಎದುರಾಗಿದೆ. ಇಲ್ಲದಿದ್ದರೆ ಪ್ಲೇ ಆಫ್ ಆಸೆ ಭಗ್ನಗೊಳ್ಳಲಿದೆ. ತಾನಾಡಿರುವ 12 ಪಂದ್ಯಗಳಲ್ಲಿ ಕೇವಲ 5ರಲ್ಲಿ ಗೆಲುವು ಸಾಧಿಸಿರುವ ಪಂಜಾಬ್ 7ರಲ್ಲಿ ಸೋಲು ಕಂಡಿದೆ. 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದ್ದರೂ ಪಂಜಾಬ್ ಗೆ ಅದೃಷ್ಟ ಕೈಹಿಡಿಯುತ್ತಿಲ್ಲ. ಬಾಕಿ ಇರುವ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪಂಜಾಬ್ ಗೆ ಉಳಿಗಾಲ, ಇಲ್ಲಿದ್ದರೆ ಟೂರ್ನಿಯಿಂದಲೇ ಹೊರಬೀಳಲಿದೆ.


ಇದನ್ನೂ ಓದಿ: Rajasthan vs Chennai: ರಾಜಸ್ತಾನದ ಅಬ್ಬರಕ್ಕೆ ನಿಬ್ಬೆರಗಾದ ಚೆನ್ನೈ ಸೂಪರ್ ಕಿಂಗ್ಸ್


ಕೋಲ್ಕತ್ತಾ VS ಹೈದರಾಬಾದ್ ಸೆಣಸಾಟ


ಭಾನುವಾರ ಸಂಜೆ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(Kolkata Knight Riders) ಮತ್ತು ಸನ್ ರೈಸರ್ಸ್ ಹೈದರಾಬಾದ್ ಸೆಣಸಾಡಲಿವೆ. ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಕೇನ್ ವಿಲಿಯಮ್ಸನ್ ನೇತೃತ್ವದ ಹೈದರಾಬಾದ್ ತಂಡಕ್ಕೆ ಈ ಪಂದ್ಯ ಅಷ್ಟೇನೂ ಮಹತ್ವದ್ದಲ್ಲ. ಆದರೆ ಪ್ಲೇ ಆಫ್ ಪ್ರವೇಶಿಸಲು ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಉಭಯ ತಂಡಗಳು ಗೆಲುವಿಗಾಗಿ ಭರ್ಜರಿ ಪೈಪೋಟಿ ನಡೆಸಲಿವೆ. ತಾನಾಡಿರುವ 12 ಪಂದ್ಯಗಳಲ್ಲಿ 5 ಗೆಲುವು 7 ಸೋಲು ಕಂಡಿರುವ ಕೋಲ್ಕತ್ತಾ 10 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. ಈ ಪಂದ್ಯ ಗೆದ್ದರೆ ಪ್ಲೇ ಆಫ್ ಪ್ರವೇಶಿಸುವ ಆಸೆ ಜೀವಂತವಾಗಿರಲಿದೆ. ಹೈದರಾಬಾದ್ ತಾನಾಡಿರುವ 11 ಪಂದ್ಯಗಳಲ್ಲಿ ಕೇವಲ 2 ಗೆಲುವು ಸಾಧಿಸಿದ್ದು, 9ರಲ್ಲಿ ಸೋಲು ಕಂಡು ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.


ಐಪಿಎಲ್‌ ಪಂದ್ಯ: 48


ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್


ದಿನಾಂಕ: ಅಕ್ಟೋಬರ್ 03, ಭಾನುವಾರ


ಸ್ಥಳ: ಶಾರ್ಜಾ ಅಂತಾರಾಷ್ಟ್ರೀಯ ಕ್ರೀಡಾಂಗಣ


ಸಮಯ: ಮಧ್ಯಾಹ್ನ 3.30ಕ್ಕೆ


==================================================


ಐಪಿಎಲ್‌ ಪಂದ್ಯ: 49


ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ ರೈಸರ್ಸ್ ಹೈದರಾಬಾದ್


ದಿನಾಂಕ: ಅಕ್ಟೋಬರ್ 03, ಭಾನುವಾರ


ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ


ಸಮಯ: ಸಂಜೆ 7.30ಕ್ಕೆ


======================================================


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.