IPL 2021, RCB vs RR: ರಾಜಸ್ಥಾನ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿರುವ ಕೊಹ್ಲಿ ಪಡೆ

ಪ್ಲೇ ಆಫ್ ಹಂತಕ್ಕೆ ಪ್ರವೇಶಿಸಲು ಸಂಜು ಸ್ಯಾಮನ್ಸ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಗೆ ಇನ್ನುಳಿದಿರುವ ಎಲ್ಲಾ ಪಂದ್ಯಗಳಲ್ಲಿಯೂ ಗೆಲುವು ಅನಿವಾರ್ಯವಾಗಿದೆ.

Written by - Puttaraj K Alur | Last Updated : Sep 29, 2021, 01:10 PM IST
  • ಇಂದು ಆರ್‌ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಭರ್ಜರಿ ಸೆಣಸಾಟ
  • ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ 43ನೇ ಪಂದ್ಯ
  • ಗೆಲುವಿನ ವಿಶ್ವಾಸದಲ್ಲಿ ಕೊಹ್ಲಿ ಪಡೆ, ಸೋಲಿನಿಂದ ಪಾರಾಗುತ್ತಾ ಸ್ಯಾಮ್ಸನ್ ಪಡೆ?
IPL 2021, RCB vs RR: ರಾಜಸ್ಥಾನ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿರುವ ಕೊಹ್ಲಿ ಪಡೆ title=
ಆರ್‌ಸಿಬಿ ಮತ್ತು ರಾಜಸ್ಥಾನ್ ನಡುವೆ ಸೆಣಸಾಟ (Photo Courtesy: @Zee News)

ನವದೆಹಲಿ: 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಇಂದು ಮತ್ತೊಂದು ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ 43ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಎರಡೂ ತಂಡಗಳು ಬಲಿಷ್ಠವಾಗಿರುವುದರಿಂದ ಯಾರಿಗೆ ವಿಜಯಲಕ್ಷ್ಮಿ ಒಲಿಯುತ್ತಾಳೆಂಬ ಕುತೂಹಲ ಮೂಡಿದೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಆರ್‌ಸಿಬಿ ತಂಡ ರಾಜಸ್ಥಾನ್ ಮೇಲೆ ಸವಾರಿ ಮಾಡಲು ಸಜ್ಜಾಗಿದೆ. ಆರ್‌ಸಿಬಿ ತಾನಾಡಿರುವ 10 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿದ್ದು, 4ರಲ್ಲಿ ಸೋಲು ಕಂಡಿದೆ. 12 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಆರ್‌ಸಿಬಿ ರಾಜಸ್ಥಾನ್ ವಿರುದ್ಧ ಗೆಲುವು ಸಾಧಿಸಿ ಪ್ಲೇ ಆಫ್ ಖಚಿತಪಡಿಸಿಕೊಳ್ಳಲು ಹವಣಿಸುತ್ತಿದೆ.

ಇದನ್ನೂ ಓದಿ: IPL 2021: ಅಂತರ್ಜಾಲದಲ್ಲಿ ಧೂಳೆಬ್ಬಿಸಿದೆ ವಿರಾಟ್ ಕೊಹ್ಲಿಯ ಈ ಫೋಟೋ

ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಗ್ಲೇನ್ ಮ್ಯಾಕ್ಸ್‌ ವೆಲ್ ಮತ್ತು ಎಬಿ ಡಿ ವಿಲಿಯರ್ಸ್ ಉತ್ತಮ ಫಾರ್ಮ್ ನಲ್ಲಿದ್ದು, ತಂಡ ಮತ್ತೊಂದು ಗೆಲುವು ಸಾಧಸುವ ನಿರೀಕ್ಷೆಯಲ್ಲಿದೆ. ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಕೊಂಚ ಸುಧಾರಿಸಿಕೊಂಡು ಉತ್ತಮ ಪ್ರದರ್ಶನ ನೀಡಿದರೆ ರಾಜಸ್ಥಾನ್ ವಿರುದ್ಧ ಗೆಲುವು ಪಕ್ಕಾ ಆಗಲಿದೆ. ಅತ್ತ ಸಂಜು ಸ್ಯಾಮನ್ಸ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಕೂಡ ಗೆಲುವಿನ ಒತ್ತಡದಲ್ಲಿದೆ. ತಾನಾಡಿರುವ 10 ಪಂದ್ಯಗಳಲ್ಲಿ ಕೇವಲ 4 ಗೆಲುವು ಸಾಧಿಸಿದ್ದು, 6ರಲ್ಲಿ ಸೋಲು ಕಂಡಿದೆ. 8 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿರುವ ರಾಜಸ್ಥಾನ್ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ.

ಪ್ಲೇ ಆಫ್ ಹಂತಕ್ಕೆ ಪ್ರವೇಶಿಸಲು ಸಂಜು ಸ್ಯಾಮನ್ಸ್ ಪಡೆಗೆ ಇನ್ನುಳಿದಿರುವ ಎಲ್ಲಾ ಪಂದ್ಯಗಳಲ್ಲಿಯೂ ಗೆಲುವು ಅನಿವಾರ್ಯವಾಗಿದೆ. ಬಾಕಿ ಉಳಿದಿರುವ 4 ಪಂದ್ಯಗಳಲ್ಲಿ 2ರಲ್ಲಿ ಸೋತರೂ ರಾಜಸ್ಥಾನ್ ಟೂರ್ನಿಯಿಂದ ನಿರ್ಗಮಿಸಬೇಕಾದ ಒತ್ತಡದಲ್ಲಿದೆ. ಇಂದಿನ ಪಂದ್ಯದಲ್ಲಿ ಸೋಲು ಕಂಡರೆ ಸ್ಯಾಮ್ಸನ್ ಪಡೆಯ ಪ್ಲೇ ಆಫ್ ಕನಸು ನುಚ್ಚುನೂರಾಗಲಿದೆ. ಹೀಗಾಗಿ ಉಭಯ ತಂಡಗಳ ನಡುವೆ ಗೆಲುವಿಗಾಗಿ ಭರ್ಜರಿ ಪೈಪೋಟಿ ನಡೆಯುವ ನಿರೀಕ್ಷೆ ಇದೆ.

ಇದನ್ನೂ ಓದಿ: Suresh Raina Retire : ಈ ಋತುವಿನ ನಂತರ ಐಪಿಎಲ್‌ನಿಂದ ನಿವೃತ್ತರಾಗುತ್ತಾರೆಯೇ ಸುರೇಶ್ ರೈನಾ ?

ಎರಡೂ ತಂಡಗಳ ಸ್ಕ್ವಾಡ್‌ ಹೀಗಿದೆ ನೋಡಿ...

ರಾಜಸ್ಥಾನ್ ರಾಯಲ್ಸ್: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮಹಿಪಾಲ್ ಲೊಮರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಚೇತನ್ ಸಕಾರಿಯಾ, ಜಯದೇವ್ ಉನದ್ಕಟ್, ಮುಸ್ತಫಿಜುರ್ ರಹಮಾನ್, ತಬ್ರೈಜ್ ಶಮ್ಸಿ, ಶ್ರೇಯಸ್ ಗೋಪಾಲ್, ಮನನ್ ವೋಹ್ರಾ, ಕೆಸಿ ಕರಿಯಪ್ಪ, ಗ್ಲೆನ್ ಫಿಲಿಪ್ಸ್, ಶಿವಂ ದುಬೆ, ಓಶಾನೆ ಥಾಮಸ್, ಮಯಾಂಕ್ ಮಾರ್ಕಂಡೆ, ಅನುಜ್ ರಾವತ್, ಜೆರಾಲ್ಡ್ ಕೋಟ್ಜಿ, ಕುಲ್ದಿಪ್ ಯಾದವ್, ಆಕಾಶ್ ಸಿಂಗ್, ಕಾರ್ತಿಕ್ ತ್ಯಾಗಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ ವೆಲ್, ಎಬಿ ಡಿ ವಿಲಿಯರ್ಸ್, ಟಿಮ್ ಡೇವಿಡ್, ವಾನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಯುಜ್ವೇಂದ್ರ ಚಾಹಲ್, ಡೇನಿಯಲ್ ಕ್ರಿಶ್ಚಿಯನ್, ದುಷ್ಮಂತ ಚಮೀರಾ, ಸಚಿನ್ ಬೇಬಿ, ಕೈಲ್ ಜೇಮೀಸನ್, ಪವನ್ ದೇಶಪಾಂಡೆ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ಸುಯಾಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ಆಕಾಶ್ ದೀಪ್.

ಐಪಿಎಲ್‌ ಪಂದ್ಯ: 43

ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ್ ರಾಯಲ್ಸ್

ದಿನಾಂಕ: ಸೆಪ್ಟೆಂಬರ್ 29, ಬುಧವಾರ

ಸ್ಥಳ: ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

ಸಮಯ: ಸಂಜೆ 7.30

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News