ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳಿಂದಾಗಿ ಐಪಿಎಲ್ 2021 ಅನ್ನು ರದ್ದುಗೊಳಿಸಲಾಗಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಆಟಗಾರರಿಗೂ ಕೊರೋನಾ ಸೋಂಕು ತಗುಲುತ್ತಿರೋ ಹಿನ್ನಲೆಯಲ್ಲಿ ಐಪಿಎಲ್ 2021(IPL 2021) ಪಂದ್ಯಾವಳಿಯನ್ನು ರದ್ದುಪಡಿಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : IPL 2021: ಕರೋನಾದಿಂದಾಗಿ ತಮ್ಮ ದೇಶಕ್ಕೆ ವಾಪಸಾಗಲು ಈ ಕ್ರಿಕೆಟಿಗನಿಗೆ ಸಿಗುತ್ತಿಲ್ಲ ಅನುಮತಿ


 ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್(Coronavirus) ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 357,229 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ.


IPL 2021: ಬಯೋ-ಬಬಲ್‌ನಲ್ಲಿ ಕರೋನಾ ಪ್ರವೇಶಿಸಿದ್ದು ಹೇಗೆ? ಇಲ್ಲಿಗೆ ಮಹತ್ವದ ಮಾಹಿತಿ


ಕೇಂದ್ರ ಆರೋಗ್ಯ ಸಚಿವಾಲ(Central Health Minister)ಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,57,229 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 20,282,833,ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಲ್ಲಿ 3,449 ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟವರ ಸಂಖ್ಯೆ 2,22,408 ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿ : IPL 2021ಗೆ ಕೊರೊನಾ ಪ್ರವೇಶ, ಈ ತಪ್ಪಿನಿಂದ ಟೂರ್ನಿ ರದ್ದಾಗುವ ಸಾಧ್ಯತೆ


ಕಳೆದ 24 ಗಂಟೆಗಳಲ್ಲಿ 300,732 ಕೊರೊನಾ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆ(Hospital)ಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 34, 47,133 ಕೊರೊನಾ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.