GT vs RR : ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್ : ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತ

ಸಧ್ಯ ಗುಜರಾತ್ ಐದು ಪಂದ್ಯಗಳಲ್ಲಿ ನಾಲ್ಕು ಮ್ಯಾಚ್ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ರನ್ ಗಳಿಸುವ ವಿಷಯದಲ್ಲಿ ಹಾರ್ದಿಕ್ ಸದ್ಯ ಎರಡನೇ ಸ್ಥಾನದಲ್ಲಿದ್ದು, ಇದರೊಂದಿಗೆ ಉತ್ತಮ ಬೌಲಿಂಗ್ ಕೂಡ ಮಾಡುತ್ತಿದ್ದಾರೆ.

Written by - Channabasava A Kashinakunti | Last Updated : Apr 15, 2022, 01:49 PM IST
  • ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತ
  • ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವುದರಲ್ಲಿ ಹಾರ್ದಿಕ್ ಪರಿಣತಿ
  • ಗುಜರಾತ್ ಟೈಟಾನ್ಸ್ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದೆ
GT vs RR : ಅಗ್ರಸ್ಥಾನಕ್ಕೇರಿದ ಗುಜರಾತ್ ಟೈಟಾನ್ಸ್ : ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತ title=

ಮುಂಬೈ : ಗುಜರಾತ್ ಟೈಟಾನ್ಸ್ ಲೆಗ್ ಸ್ಪಿನ್ನರ್ ರಶೀದ್ ಖಾನ್ ಮತ್ತು ಹಾರ್ದಿಕ್ ಪಾಂಡ್ಯ ಅತ್ಯುತ್ತಮ ಪ್ರದರ್ಶನದಿಂದ ಮುನ್ನಡೆಯುತ್ತಿದ್ದಾರೆ. ಅಲ್ಲದೆ, ತಂಡದೊಳಗೆ ಉತ್ತಮ ವಾತಾವರಣವನ್ನು ಸೃಷ್ಟಿಸಿದ್ದಾರೆ ಎಂದು ಹೇಳಲಾಗುತ್ತಿದೆ, ಸಧ್ಯ ಗುಜರಾತ್ ಐದು ಪಂದ್ಯಗಳಲ್ಲಿ ನಾಲ್ಕು ಮ್ಯಾಚ್ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ರನ್ ಗಳಿಸುವ ವಿಷಯದಲ್ಲಿ ಹಾರ್ದಿಕ್ ಸದ್ಯ ಎರಡನೇ ಸ್ಥಾನದಲ್ಲಿದ್ದು, ಇದರೊಂದಿಗೆ ಉತ್ತಮ ಬೌಲಿಂಗ್ ಕೂಡ ಮಾಡುತ್ತಿದ್ದಾರೆ.

ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಮೆಚ್ಚುಗೆ ವ್ಯಕ್ತ

ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 37 ರನ್ ಗಳ ಜಯ ಸಾಧಿಸಿದ ಬಳಿಕ ಮಾತನಾಡಿದ ರಶೀದ್ ಖಾನ್, 'ಹಾರ್ದಿಕ್ ತಂಡವನ್ನು ಮುನ್ನಡೆಸುತ್ತಿರುವ ರೀತಿ, ಮೈದಾನದ ಒಳಗೆ ಮತ್ತು ಹೊರಗೆ ತಂಡದಲ್ಲಿ ವಾತಾವರಣ ಸೃಷ್ಟಿಸಿದ ರೀತಿ, ಇಲ್ಲಿಯವರೆಗೆ ಅವರು ಮಾಡಿರುವ ಸಾಧನೆ ಅದ್ಭುತವಾಗಿದೆ. ಹಾರ್ದಿಕ್ ಪಾಂಡ್ಯ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಅಫ್ಘಾನಿಸ್ತಾನದ ಈ ಸ್ಪಿನ್ನರ್ ರಶೀದ್ ಖಾನ್ ಹೇಳಿದ್ದಾರೆ.

ಇದನ್ನೂ ಓದಿ : SRH vs KKR, IPL 2022: ಇಂದು ಕೋಲ್ಕತ್ತಾ ನೈಟ್ ರೈಡರ್ಸ್​ಗೆ ಹೈದರಾಬಾದ್ ಸವಾಲು

ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವುದರಲ್ಲಿ ಹಾರ್ದಿಕ್ ಪರಿಣತಿ 

ರಶೀದ್ ಖಾನ್, 'ಅವರು ಯಾವಾಗಲೂ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಂತಹ ನಾಯಕ. ಅವರು ಯಾವಾಗಲೂ ಆತ್ಮವಿಶ್ವಾಸವನ್ನು ಹೊಂದಿರುತ್ತಾರೆ ಮತ್ತು ಏನು ಮಾಡಬೇಕೆಂಬುದರ ಬಗ್ಗೆ ಸ್ಪಷ್ಟವಾದ ಅಭಿಪ್ರಾಯವನ್ನು ಹೊಂದಿದ್ದಾರೆ. ನಾಯಕನಿಗೆ ಇದು ಮುಖ್ಯವಾಗಿದೆ. ನಿಮ್ಮ ಮೂಡ್ ಸ್ಪಷ್ಟವಾಗಿದ್ದರೆ, ನೀವು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ, ಫಲಿತಾಂಶವು ನಿಮ್ಮ ಪರವಾಗಿರುತ್ತದೆ' ಎಂದು ರಶೀದ್ ಹೇಳಿದರು, ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಹಾರ್ದಿಕ್ ಉತ್ತಮ ನಾಯಕ ಎಂದು ಸಾಬೀತುಪಡಿಸುತ್ತಿದ್ದಾರೆ.

ಗುಜರಾತ್ ಟೈಟಾನ್ಸ್ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದೆ

ರಶೀದ್ ಖಾನ್, 'ನೀವು ಸಂಪೂರ್ಣ ಆತ್ಮವಿಶ್ವಾಸದಿಂದ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ, ಅದು ಅವರನ್ನು ಉತ್ತಮಗೊಳಿಸುತ್ತದೆ. ಹಾರ್ದಿಕ್ ಪಾಂಡ್ಯ ಇಲ್ಲಿಯವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಅಥವಾ ಫೀಲ್ಡಿಂಗ್ ಇರಲಿ, ಅವರು ಎಲ್ಲಾ ವಿಭಾಗಗಳಲ್ಲಿ ಮುಂಚೂಣಿಯಿಂದ ಮುನ್ನಡೆಸಿದ್ದಾರೆ.

ಇದನ್ನೂ ಓದಿ : Viral Video:: ‘ರಾಕೆಟ್ ಥ್ರೋ’ ಮೂಲಕ ಸ್ಟಂಪ್ ಮುರಿದ ಹಾರ್ದಿಕ್ ಪಾಂಡ್ಯ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News