ನವದೆಹಲಿ : ಮುಂಬೈ ಇಂಡಿಯನ್ಸ್‌ನ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ನಿತೀಶ್ ರಾಣಾಗೆ ಬುಧವಾರ ಬಿಸಿಸಿಐ ಬಿಗ್ ಶಾಕ್ ನೀಡಿದೆ. ವಾಸ್ತವವಾಗಿ, ಜಸ್ಪ್ರೀತ್ ಬುಮ್ರಾ ಮತ್ತು ನಿತೀಶ್ ರಾಣಾ ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಬಿಸಿಸಿಐ ಕೂಡ ಈ ಇಬ್ಬರೂ ಆಟಗಾರರಿಗೆ ಶಿಕ್ಷೆ ವಿಧಿಸಿದೆ.


COMMERCIAL BREAK
SCROLL TO CONTINUE READING

ಬುಮ್ರಾ ಮತ್ತು ನಿತೀಶ್ ರಾಣಾ ವಿರುದ್ಧ ಕಠಿಣ ಕ್ರಮ


ಮುಂಬೈ ಇಂಡಿಯನ್ಸ್(Mumbai Indians) ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ನಿತೀಶ್ ರಾಣಾ ಅವರು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಐಪಿಎಲ್ 2022 ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಇದರ ನಂತರ, ಬಿಸಿಸಿಐ ಜಸ್ಪ್ರೀತ್ ಬುಮ್ರಾ ಮತ್ತು ನಿತೀಶ್ ರಾಣಾಗೆ  ಪಂದ್ಯ ಶುಲ್ಕದ ಶೇ. 10 ರಷ್ಟು ದಂಡವನ್ನು ವಿಧಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಪುಣೆಯಲ್ಲಿ ನಡೆದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ನಿತೀಶ್ ರಾಣಾಗೆ ಪಂದ್ಯ ಶುಲ್ಕದ ಶೇ. 10 ರಷ್ಟು ದಂಡ ವಿಧಿಸಲಾಗಿದೆ ಎಂದು ಬಿಸಿಸಿಐನ ಐಪಿಎಲ್ ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ.


ಇದನ್ನೂ ಓದಿ : Kolkata vs Mumbai: ಮಿಂಚಿದ ಕಮಿನ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಗೆ ಐದು ವಿಕೆಟ್ ಗಳ ಜಯ


ಈ ಶಿಕ್ಷೆಯನ್ನು ವಿಧಿಸಿದ ಬಿಸಿಸಿಐ


ಹೇಳಿಕೆಯ ಪ್ರಕಾರ, ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ನಿತೀಶ್ ರಾಣಾ(Nitish Rana) ಅಲ್ಲದೆ, ಮುಂಬೈ ಇಂಡಿಯನ್ಸ್‌ನ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಲೆವೆಲ್ 1 ರಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದೆ ಮತ್ತು ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಲೆವೆಲ್-1 ನೀತಿ ಸಂಹಿತೆಯ ಉಲ್ಲಂಘನೆಗಾಗಿ ಮ್ಯಾಚ್ ರೆಫರಿಯ ನಿರ್ಧಾರವು ಅಂತಿಮವಾಗಿರುತ್ತದೆ. ಐಪಿಎಲ್ 2022 ರ ಸೀಸನ್ ನ 14 ನೇ ಪಂದ್ಯದಲ್ಲಿ ಬುಧವಾರ ಕೋಲ್ಕತ್ತಾ ನೈಟ್ ರೈಡರ್ಸ್ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅನ್ನು 5 ವಿಕೆಟ್‌ಗಳಿಂದ ಸೋಲಿಸಿದೆ.


ಇನ್ನೂ ಗೆಲುವಿಗಾಗಿ ಕಾಯುತ್ತಿರುವ ಮುಂಬೈ ಇಂಡಿಯನ್ಸ್ 


ಮುಂಬೈ ಇಂಡಿಯನ್ಸ್ ಈ ಸೀಸನ್ ನಲ್ಲಿ ಗೆಲ್ಲಲು ಕಾಯುತ್ತಿದೆ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್(Kolkata Knight Riders) ವಿರುದ್ಧ ಸತತ ಮೂರನೇ ಸೋಲನ್ನು ಎದುರಿಸಬೇಕಾಗಿದೆ. ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಕೆಕೆಆರ್ ತಂಡ 16ನೇ ಓವರ್‌ನಲ್ಲಿ ಗುರಿ ತಲುಪಿತು. ಪ್ಯಾಟ್ ಕಮಿನ್ಸ್ 15 ಎಸೆತಗಳಲ್ಲಿ 56 ರನ್ ಗಳಿಸಿ ಕೆಕೆಆರ್ ಗೆಲುವು ತನ್ನದಾಗಿಸಿದೆ. ಇದೀಗ ಕೆಕೆಆರ್ ತಂಡ ಆಡಿರುವ 4 ಪಂದ್ಯಗಳಲ್ಲಿ ಮೂರು ಗೆಲುವಿನೊಂದಿಗೆ 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.


ಇದನ್ನೂ ಓದಿ : IPL ಮಾಧ್ಯಮ ಹಕ್ಕಿಗಾಗಿ ಪ್ರತ್ಯೇಕ ಬಿಡ್ಡಿಂಗ್ : ಬಿಸಿಸಿಐನ ನೂತನ ಪ್ಲ್ಯಾನ್‌


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.