DC vs PBK: ಡೆಲ್ಲಿ ಕ್ಯಾಪಿಟಲ್ಸ್ - ಪಂಜಾಬ್ ಕಿಂಗ್ಸ್ ನಡುವೆ ಹಣಾಹಣಿ, ಪಿಚ್‌ ರಿಪೋರ್ಟ್‌ ಇಲ್ಲಿದೆ

ಈ ಹಿಂದೆ ಆರ್‌ಸಿಬಿ ವಿರುದ್ಧ ಕಣಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 16 ರನ್‌ಗಳ ಸೋಲನ್ನು ಅನುಭವಿಸಿತ್ತು. ಕೊನೆಯ 5 ಓವರ್‌ಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೆಲ್ಲಿ ತಂಡ ಒಟ್ಟು 74 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. 

Written by - Bhavishya Shetty | Last Updated : Apr 20, 2022, 08:43 AM IST
  • ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಹಣಾಹಣಿ
  • ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ
  • ಇದು ಐಪಿಎಲ್‌ 2022ರ 32ನೇ ಪಂದ್ಯ
DC vs PBK: ಡೆಲ್ಲಿ ಕ್ಯಾಪಿಟಲ್ಸ್ - ಪಂಜಾಬ್ ಕಿಂಗ್ಸ್ ನಡುವೆ ಹಣಾಹಣಿ, ಪಿಚ್‌ ರಿಪೋರ್ಟ್‌ ಇಲ್ಲಿದೆ title=
Delhi Capitals

ಮುಂಬೈ: ಇಂದು ಮುಂಬೈನ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್‌ನ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ ಡೆಲ್ಲಿ ತಂಡದ ಆಟಗಾರ ಮಿಚೆಲ್ ಮಾರ್ಷ್ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 

ಇದನ್ನು ಓದಿ: ಫುಟ್ಬಾಲ್ ಆಟಗಾರ ರೊನಾಲ್ಡೊ ಮಗು ಸಾವು!

ಈ ಹಿಂದೆ ಆರ್‌ಸಿಬಿ ವಿರುದ್ಧ ಕಣಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 16 ರನ್‌ಗಳ ಸೋಲನ್ನು ಅನುಭವಿಸಿತ್ತು. ಕೊನೆಯ 5 ಓವರ್‌ಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೆಲ್ಲಿ ತಂಡ ಒಟ್ಟು 74 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಸದ್ಯ ಬ್ಯಾಟಿಂಗ್ ವಿಭಾಗದಲ್ಲಿ ಡೆಲ್ಲಿ ತಂಡವು ಡೇವಿಡ್ ವಾರ್ನರ್, ಪೃಥ್ವಿ ಶಾ ಮತ್ತು ರಿಷಭ್ ಪಂತ್ ಮೇಲೆ ಹೆಚ್ಚು ಅವಲಂಬಿತವಾಗಿದೆ. ಜೊತೆಗೆ ಇತರ ಬ್ಯಾಟ್ಸ್‌ಮ್ಯಾನ್‌ಗಳು ಸಹ ಉತ್ತಮ ಫಾರ್ಮ್‌ಗೆ ಮರಳುವ ಅವಶ್ಯಕತೆ ಇದೆ. 

ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಆಡಿರುವ ಐದು ಪಂದ್ಯಗಳಲ್ಲಿ ಎರಡರಲ್ಲಿ ಗೆಲುವು ಕಂಡಿದ್ದು, ಮೂರರರಲ್ಲಿ ಸೋಲನ್ನು ಅನುಭವಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇನ್ನು ಆಡಿರುವ ಆರು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಕಂಡು, ಮೂರರಲ್ಲಿ ಸೋತಿರುವ ಪಂಜಾಬ್‌ ಕಿಂಗ್ಸ್‌, ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

ಪಂಜಾಬ್ ಕಿಂಗ್ಸ್ ತನ್ನ ಹಿಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲನ್ನು ಅನುಭವಿಸಿತ್ತು. ಟಾಸ್ ಸೋತಿದ್ದ ಪಂಜಾಬ್‌ 151 ರನ್‌ ಬಾರಿಸಲಷ್ಟೇ ಶಕ್ತವಾಗಿತ್ತು. ಈ ಗುರಿಯನ್ನು ಬೆನ್ನತ್ತಿದ್ದ ಹೈದರಾಬಾದ್‌ ತಂಡವು 18.5 ಓವರ್‌ಗಳಲ್ಲಿ ಅವಶ್ಯಕ ರನ್‌ ಕಲೆಹಾಕಿ ಗೆಲುವು ಸಾಧಿಸಿತ್ತು.

ಇದನ್ನು ಓದಿ: ಅನುಮತಿ ಇಲ್ಲದೆ ಯಾವುದೇ ಧಾರ್ಮಿಕ ಮೆರವಣಿಗೆ ನಡೆಸುವಂತಿಲ್ಲ- ಸಿಎಂ ಯೋಗಿ

ಪಿಚ್‌ ರಿಪೋರ್ಟ್‌: 
ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಕಳೆದ ಪಂದ್ಯ ಬ್ರಬೋರ್ನ್‌ ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಪಂದ್ಯದಲ್ಲಿ ಒಟ್ಟು 420 ಕ್ಕೂ ಹೆಚ್ಚು ರನ್‌ ಹೊಡೆಯಲು ಇಲ್ಲಿನ ಪಿಚ್‌ ಸಹಕರಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿಯೂ ಉತ್ತಮ ಪ್ರದರ್ಶನ ಕಾಣುವ ಸಾಧ್ಯತೆಯಿದೆ. 

ಸಂಭಾವ್ಯ ಆಟಗಾರರ ಪಟ್ಟಿ: 
ಡೆಲ್ಲಿ ಕ್ಯಾಪಿಟಲ್ಸ್‌: ಡೇವಿಡ್ ವಾರ್ನರ್, ಪೃಥ್ವಿ ಶಾ, ರೋವ್ಮನ್ ಪೊವೆಲ್, ರಿಷಭ್ ಪಂತ್ (ಕ್ಯಾ & ವಿ.ಕೀ), ಲಲಿತ್ ಯಾದವ್, ಸರ್ಫರಾಜ್ ಖಾನ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮುಸ್ತಾಫಿಜುರ್ ರೆಹಮಾನ್, ಕುಲದೀಪ್ ಯಾದವ್, ಖಲೀಲ್ ಅಹ್ಮದ್

ಪಂಜಾಬ್ ಕಿಂಗ್ಸ್: ಶಿಖರ್ ಧವನ್, ಮಯಾಂಕ್ ಅಗರ್ವಾಲ್ (ಕ್ಯಾ), ಲಿಯಾಮ್ ಲಿವಿಂಗ್‌ಸ್ಟೋನ್, ಜಾನಿ ಬೈರ್‌ಸ್ಟೋವ್, ಒಡಿಯನ್ ಸ್ಮಿತ್, ಜಿತೇಶ್ ಶರ್ಮಾ (ವಿ.ಕೀ) ಕಗಿಸೊ ರಬಾಡ, ಶಾರುಖ್ ಖಾನ್, ವೈಭವ್ ಅರೋರಾ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News