IPL 2022: ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಕೊನೆಯ ಓವರ್‌ನಲ್ಲಿ 3 ವಿಕೆಟ್‌ಗಳಿಂದ ಸೋಲಿಸಿತು. ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಅವರಂತಹ ದಿಗ್ಗಜರನ್ನು ಒಳಗೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಸಖತ್ ಮ್ಯಾಚ್ ಫಿನಿಶರ್ ಸಿಕ್ಕಿದ್ದಾರೆ.
ಕೊಹ್ಲಿಯ ಆರ್‌ಸಿಬಿಗೆ ಧೋನಿಯಂತಹ ಮ್ಯಾಚ್ ಫಿನಿಶರ್!
ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಕೊನೆಯ ಓವರ್‌ನಲ್ಲಿ ಒಂದು ಬೌಂಡರಿ ಮತ್ತು ಸಿಕ್ಸರ್ ಬಾರಿಸುವ ಮೂಲಕ ಮೇಸ್ಟ್ರೋ ಗೆಲುವು ಸಾಧಿಸಿದರು. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 3 ವಿಕೆಟ್‌ಗಳ ಜಯ ದಾಖಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2022 (IPL 2022)ರ ಪಾಯಿಂಟ್ ಪಟ್ಟಿಯಲ್ಲಿ ತನ್ನ ಖಾತೆಯನ್ನು ತೆರೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ 128 ರನ್ ಗಳಿಸಿತು. ಈ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 7 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು.
ಇದನ್ನೂ ಓದಿ- IPL 2022, RCB vs KKR: ಕೆಕೆಆರ್ ವಿರುದ್ಧ ಆರ್‌ಸಿಬಿಗೆ ರೋಚಕ ಗೆಲುವು
ಕೊನೆಯ ಓವರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ಗೆಲುವಿಗೆ 7 ರನ್ ಅಗತ್ಯವಿತ್ತು. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಆಂಡ್ರೆ ರಸೆಲ್ ಅವರ ಮೊದಲ ಎಸೆತದಲ್ಲಿ ಸಿಕ್ಸರ್ ಮತ್ತು ಎರಡನೇ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಜಯ ತಂದುಕೊಟ್ಟರು. ಪಂದ್ಯದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಅವರು ದಿನೇಶ್ ಕಾರ್ತಿಕ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೆ ಹೋಲಿಸಿದ್ದಾರೆ. ಈ ಸಮಯದಲ್ಲಿ, ಫಾಫ್ ಡು ಪ್ಲೆಸಿಸ್ ಕೊನೆಯ ಓವರ್‌ನಲ್ಲಿ ದಿನೇಶ್ ಕಾರ್ತಿಕ್ ಧೋನಿಯಂತೆ ಕೂಲ್ ಎಂದು ಬಣ್ಣಿಸಿದ್ದಾರೆ.
ಕೊನೆಯ ಓವರ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 7 ರನ್ ಅಗತ್ಯವಿತ್ತು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ ಕೊನೆಯ ಓವರ್‌ನಲ್ಲಿ ಏಳು ರನ್‌ಗಳ ಅಗತ್ಯವಿತ್ತು. ದಿನೇಶ್ ಕಾರ್ತಿಕ್ ಮೊದಲ ಎರಡು ಎಸೆತಗಳಲ್ಲಿ ಸಿಕ್ಸರ್ ಮತ್ತು ಬೌಂಡರಿ ಬಾರಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಇದು ಉತ್ತಮ ಗೆಲುವು ಎಂದು ಫಾಫ್ ಡು ಪ್ಲೆಸಿಸ್ ಹೇಳಿದ್ದಾರೆ. ಸಣ್ಣ ಸ್ಕೋರ್ ಅನ್ನು ಬೆನ್ನಟ್ಟುವಾಗ, ಒಬ್ಬರು ಸಕಾರಾತ್ಮಕ ಮನೋಭಾವದಿಂದ ಸಮೀಪಿಸಬೇಕು ಮತ್ತು ಈ ಪಂದ್ಯವು ಕೊನೆಯವರೆಗೂ ಹೋಗಬಾರದು, ಆದರೆ ಅವರ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದರು ಎಂದವರು ಹೇಳಿದರು.
ಇದನ್ನೂ ಓದಿ- Ab de Villiers : ವಿರಾಟ್ ಕೊಹ್ಲಿ ಬಗ್ಗೆ ಭವಿಷ್ಯ ನುಡಿದ ಎಬಿ ಡಿವಿಲಿಯರ್ಸ್!
ದಿನೇಶ್ ಕಾರ್ತಿಕ್ ಅವರ ಅನುಭವವು ಸೂಕ್ತವಾಗಿ ಕೆಲಸಕ್ಕೆ ಬಂದಿತು. ಮಹೇಂದ್ರ ಸಿಂಗ್ ಧೋನಿಯವರಂತೆ ಕೊನೆಯ ಐದು ಓವರ್‌ಗಳಲ್ಲಿ ಅವರು ತುಂಬಾ ಶಾಂತವಾಗಿದ್ದರು ಎಂದು ಫಾಫ್ ಡು ಪ್ಲೆಸಿಸ್ ದಿನೇಶ್ ಕಾರ್ತಿಕ್ ಅವರ ಮ್ಯಾಚ್ ಫಿನಿಶಿಂಗ್ ಶೈಲಿಯನ್ನು ಬಣ್ಣಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.