ಬೆಂಗಳೂರು: ಐಪಿಎಲ್ 2022ರ ಆವೃತ್ತಿಯಲ್ಲಿ ಹೈವೋಲ್ಟೇಜ್‌ ಪಂದ್ಯ ಎಂದರೆ ಅದು ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಮುಖಾಮುಖಿ. ಈ ಆವೃತ್ತಿಯಲ್ಲಿ ಅದ್ಭುತ ಆರಂಭದೊಂದಿಗೆ ಆತ್ಮವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಎದುರಿಸಲಿದೆ. ಈ ಕುತೂಹಲಕಾರಿ ಪಂದ್ಯದಲ್ಲಿ ಯಾರಿಗೆ ಗೆಲುವು ಲಭಿಸಲಿದೆ ಎಂದು ಕಾದುನೋಡಬೇಕಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: CSK ನಿರಂತರ ಸೋಲಿಗೆ ಪ್ರಮುಖ ಕಾರಣಗಳು ಈ ನಾಲ್ಕು!


ಈ ಬಾರಿಯ ಟೂರ್ನಿಯಲ್ಲಿ ಆರ್‌ಸಿಬಿ ತಂಡ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ಮಾತ್ರ ಆಡಿದ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ.  ಹೀಗಾಗಿ ಸಿಎಸ್‌ಕೆ ಸೋಲಿನ ಸರಪಳಿಯಿಂದ ಕಳಚಿಕೊಳ್ಳಲಿದೆಯೇ ಎಂಬ ಕುತೂಹಲ ಸದ್ಯಕ್ಕಿದೆ. ಇತ್ತ ಭರ್ಜರಿ ಹುಮ್ಮಸ್ಸಿನಲ್ಲಿರುವ  ಆರ್‌ಸಿಬಿ ತಂಡದಿಂದ ಯಾವ ರೀತಿಯ ಪ್ರದರ್ಶನ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.


ಆರ್‌ಸಿಬಿ ತಂಡದ ಬಹುತೇಕ ಎಲ್ಲಾ ಆಟಗಾರರು ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆರಂಭಿಕ ಆಟಗಾರ ಫಾಫ್ ಡು ಪ್ಲೆಸಿಸ್ ಬ್ಯಾಟ್‌ನಿಂದ ಉತ್ತಮವಾಗಿ ರನ್‌ಗಳು ಹರಿದು ಬರುತ್ತಿದ್ದರೆ, ಮತ್ತೋರ್ವ ಯುವ ಆರಂಭಿಕ ಆಟಗಾರ ಅನುಜ್ ರಾವತ್ ಕಳೆದ ಪಂದ್ಯದಲ್ಲಿ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಕಳೆದ ಪಂದ್ಯದಲ್ಲಿ ಉತ್ತಮ ಪ್ರರ್ಶನ ನೀಡಿದ್ದರು.


ಕಳೆದ ಮ್ಯಾಚ್‌ನಲ್ಲಿ ಈ ಬಾರಿಯ ಐಪಿಎಲ್‌ನ ಮೊದಲ ಪಂದ್ಯವನ್ನು ಆಡಿದ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ತನ್ನ ಫಾರ್ಮ್‌ನ ತುಣುಕನ್ನು ಪ್ರದರ್ಶಿಸಿದ್ದು ಫೀಲ್ಡಿಂಗ್‌ನಲ್ಲಿಯೂ ತಾನೆಷ್ಟು ನಿರ್ಣಾಯಕ ಪಾತ್ರವಹಿಸಬಲ್ಲೆ ಎಂಬುದನ್ನು ತೋರ್ಪಡಿಸಿದ್ದಾರೆ. ಮತ್ತೊಂದೆಡೆ ಯುವ ಆಟಗಾರ ಶಹ್ಮಜಾ ಅಹ್ಮದ್ ಈ ಬಾರಿ ಆರ್‌ಸಿಬಿ ತಂಡಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ. ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಫಾರ್ಮ್‌ನಲ್ಲಿರುವುದು ಆರ್‌ಸಿಬಿಯ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. 


ಇದನ್ನು ಓದಿ: ಕೊಹ್ಲಿ 71ನೇ ಶತಕ ಬಾರಿಸುವವರೆಗೆ ಡೇಟಿಂಗ್ ಮಾಡುವುದಿಲ್ಲ: ಆರ್‌ಸಿಬಿ ಫ್ಯಾನ್ ಗರ್ಲ್


ಇನ್ನೊಂದೆಡೆ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಈ ಬಾರಿಯ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಇಂದಾದರೂ ಉತ್ತಮ ಪ್ರದರ್ಶನ ನೀಡಿ, ಆರ್‌ಸಿಬಿಗೆ ಸೋಲಿನ ರುಚಿ ತೋರಿಸುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.