RCB vs GT : ಐಪಿಎಲ್ 2022 ರ 67 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟಾನ್ಸ್ ಅನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಇಂದು ವಿರಾಟ್ ಕೊಹ್ಲಿ ಬ್ಯಾಟ್ ಕೂಡ ಬಿರುಸಾಗಿ ಅಬ್ಬರಿಸಿತು. ಈ ಪಂದ್ಯದಲ್ಲಿ ವಿರಾಟ್ ಅರ್ಧ ಶತಕ ಬಾರಿಸಿದ್ದರು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತ್ತು. ಉತ್ತರವಾಗಿ ಆರ್‌ಸಿಬಿ ಕೇವಲ ಎರಡು ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ವಿರಾಟ್ ಬ್ಯಾಟಿಂಗ್ ಅಬ್ಬರ
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಫಾರ್ಮ್ ಗೆ ಮತ್ತೆ ಮರಳಿದ್ದು, ಗುಜರಾತ್ ವಿರುದ್ಧದ ಮ್ಯಾಚ್ ನಲ್ಲಿ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ. ವಿರಾಟ್ ಬ್ಯಾಟ್‌ನಿಂದ 8 ಬೌಂಡರಿ ಮತ್ತು 2 ಸಿಕ್ಸರ್‌ಗಳ ಮೂಲಕ ಒಟ್ಟು 73 ರನ್ ಬಾರಿಸಿದ್ದರು. ಹಾಗೆ, ನಾಯಕ ಫಾಫ್ ಡು ಪ್ಲೆಸಿಸ್ 44 ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅಂತಿಮವಾಗಿ ಬಂದು 40 ರನ್ ಗಳಿಸಿದರು. ಮತ್ತೊಂದೆಡೆ ಗುಜರಾತ್ ಪರ ರಶೀದ್ ಖಾನ್ ಎರಡೂ ವಿಕೆಟ್ ಪಡೆದರು.
ಇದನ್ನೂ ಓದಿ : RCB vs GT : ಕಿಂಗ್ ಕೊಹ್ಲಿ ಬ್ಯಾಟಿಂಗ್ ಅಬ್ಬರ : ಗುಜರಾತ್ ಟೈಟಾನ್ಸ್ ತತ್ತರ!
ಗುಜರಾತ್ 168 ರನ್ ಗಳಿಸಿತ್ತು
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ 168 ರನ್ ಕಲೆ ಹಾಕಿತ್ತು. ಈ ಪಂದ್ಯದಲ್ಲಿ ಆರ್‌ಸಿಬಿ ಬೌಲಿಂಗ್ ಉತ್ತಮವಾಗಿತ್ತು. ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಅಜೇಯ 62 ರನ್ ಗಳಿಸಿದರು. ಡೇವಿಡ್ ಮಿಲ್ಲರ್ 34 ಮತ್ತು ವೃದ್ಧಿಮಾನ್ ಸಹಾ 31 ರನ್ ಗಳಿಸಿದರು. ಆರ್‌ಸಿಬಿ ಪರ ಜೋಶ್ ಹ್ಯಾಜಲ್‌ವುಡ್ 2 ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ 1 ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಗುಜರಾತ್ ಟೈಟಾನ್ಸ್ (GT) ಸಂಭಾವ್ಯ XI
ರಾಯಲ್ ಚಾಲೆಂಜರ್ಸ್ ಬೆಂಗಳೂರು : ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್
ಇದನ್ನೂ ಓದಿ : ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ನಿಖತ್ ಜರೀನ್
ಗುಜರಾತ್ ಟೈಟಾನ್ಸ್ : ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.