ನವದೆಹಲಿ: ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಶನಿವಾರದಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.
ಅರ್ಜುನ್ ಅವರು ನೆಟ್ಸ್‌ನಲ್ಲಿ ಬ್ಯಾಟ್ಸ್ಮನ್ ಗಳಿಗೆ ಬೌಲಿಂಗ್ ಮಾಡುವ ಕೆಲವು ದೃಶ್ಯಗಳನ್ನು ಇನ್ಸ್ಟಾಗ್ರಾಂ ನಲ್ಲಿ ಶೇರ್ ಮಾಡಲಾಗಿದೆ. ಹೀಗಾಗಿ ಅವರು ಕೊನೆಯ ಪಂದ್ಯದಲ್ಲಿ ಆಡಬಹುದು ಎನ್ನಲಾಗುತ್ತಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜಿನ ಭಾಗವಾಗಿ ಅರ್ಜುನ್ ಅವರನ್ನು ಮುಂಬೈ ಇಂಡಿಯನ್ಸ್ ರೂ 30 ಲಕ್ಷಕ್ಕೆ ಖರೀದಿಸಿತು, ಆದರೆ ಇದುವರೆಗೆ ಅವರ ತಂಡಕ್ಕೆ ಯಾವುದೇ ಆಟದಲ್ಲಿ ಕಾಣಿಸಿಕೊಂಡಿಲ್ಲ.ಇನ್ನೊಂದೆಡೆಗೆ ಮುಂಬೈ ಇಂಡಿಯನ್ಸ್ ತಂಡವು 13 ಪಂದ್ಯಗಳಲ್ಲಿ ಕೇವಲ ಮೂರು ಗೆಲುವುಗಳೊಂದಿಗೆ ಅತ್ಯಂತ ನಿರಾಶಾದಾಯಕ ಐಪಿಎಲ್ ಆವೃತ್ತಿಯನ್ನು ಹೊಂದಿದೆ.
ಇದನ್ನೂ ಓದಿ: Pramod Muthalik : 'ಜ್ಞಾನವಾಪಿ ಮಸೀದಿ ಅಲ್ಲ, ಅದು ದೇವಸ್ಥಾನ'
ಐದು ಬಾರಿಯ ಐಪಿಎಲ್ ಚಾಂಪಿಯನ್ ತಂಡವಾಗಿರುವ ಮುಂಬೈ ಈಗ ಆರು ಅಂಕಗಳೊಂದಿಗೆ ಅಂಕಗಳ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.ಅವರು ತಮ್ಮ ಅಭಿಯಾನದ ಕೊನೆಯ ಕೆಲವು ಪಂದ್ಯಗಳಲ್ಲಿ ಟಿಮ್ ಡೇವಿಡ್, ರಮಣದೀಪ್ ಸಿಂಗ್, ಸಂಜಯ್ ಯಾದವ್ ಮತ್ತು ಮಯಾಂಕ್ ಮಾರ್ಕಾಂಡೆಯಂತಹ ಆಟಗಾರರಿಗೆ ಅವಕಾಶಗಳನ್ನು ನೀಡುತ್ತಿದ್ದಾರೆ.ಮುಂಬೈ ಇಂಡಿಯನ್ಸ್ ಇಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಲೀಗ್‌ನಲ್ಲಿ ಅರ್ಜುನ್ ತೆಂಡೂಲ್ಕರ್ ಪಾದಾರ್ಪಣೆ ಮಾಡುವ ಉತ್ತಮ ಅವಕಾಶಗಳಿರುವುದರಿಂದ ಪಂದ್ಯವು ಹೆಚ್ಚು ಗಮನ ಸೆಳೆಯುವ ಸಾಧ್ಯತೆಯಿದೆ.
ಇದನ್ನೂ ಓದಿ: 'ಗಂಗಾವತಿ-ದರೋಜಿ ರೈಲ್ವೇ ಮಾರ್ಗದ ಸರ್ವೇ ಕಾರ್ಯ ಶೀಘ್ರ ಪ್ರಾರಂಭ'
ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ಗೆ ಇದು ಪ್ರಮುಖ ಪಂದ್ಯವಾಗಿದೆ, ಇಲ್ಲಿ ಗೆದ್ದಿದ್ದೆ ಆದಲ್ಲಿ ಅವರು ನೇರವಾಗಿ ಪ್ಲೇ ಆಫ್‌ಗೆ ಪ್ರವೇಶಿಸುತ್ತಾರೆ. ಇನ್ನೊಂದೆಡೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಈ ಪಂದ್ಯವನ್ನು ಹತ್ತಿರದಿಂದ ವೀಕ್ಷಿಸುತ್ತಾರೆ ಮತ್ತು ಮುಂಬೈ ಇಂಡಿಯನ್ಸ್ ಗೆಲುವಿಗಾಗಿ ಪ್ರಾರ್ಥಿಸುತ್ತಾರೆ ಏಕೆಂದರೆ ದೆಹಲಿ ಕ್ಯಾಪಿಟಲ್ಸ ತಂಡದ ಸೋಲು ಅವರನ್ನು ಪ್ಲೇಆಫ್‌ಗೆ ಕರೆದೊಯ್ಯುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.